ಕರ್ತವ್ಯ ಲೋಪ: ಕುಂದಾಪುರ ಉಪವಿಭಾಗಾಧಿಕಾರಿ ಕೆ. ಮಹೇಶ್ಚಂದ್ರ ಅಮಾನತು.

ಉಡುಪಿ: ಕರ್ತವ್ಯ ಲೋಪದ ಆರೋಪದ ಮೇಲೆ ಕುಂದಾಪುರ ಉಪವಿಭಾಗಾಧಿಕಾರಿ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಉಪ ವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾ‌ರ್ ಶ್ರೀಕಾಂತ್ ಎಸ್. ಹೆಗ್ಡೆ ಅವರಿಗೆ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಮಹೇಶ್ ಚಂದ್ರ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಾಗ ಬಡಾನಿಡಿಯೂರು ಗ್ರಾಮದಲ್ಲಿ ವಾಣಿಜ್ಯ ಉದ್ದೇಶದ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ಉದ್ಯಾನ ಮತ್ತು ಬಯಲು ಜಾಗದ ವಲಯದಿಂದ ವಾಣಿಜ್ಯ ವಲಯಕ್ಕೆ […]