ಮಣಿಪಾಲ: ಅಂಗಡಿಗೆ ನುಗ್ಗಿ 20 ಸಾವಿರ ನಗದು, ಚಾಕಲೇಟ್‌ ಕಳವು; ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು 20 ಸಾವಿರ ರೂ. ನಗದು ಹಾಗೂ ಚಾಕಲೇಟ್‌ಗಳನ್ನು ಕಳವು ಮಾಡಿದ ಘಟನೆ ತಡರಾತ್ರಿ ನಡೆದಿದೆ. ಇಬ್ಬರು ಕಳ್ಳರ ಈ ಕರಾಮತ್ತು ಅಂಗಡಿಯೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲಿಗೆ ಕ್ಯಾಶ್ ಕೌಂಟರ್‌ನಲ್ಲಿರಿಸಿದ್ದ 20 ಸಾವಿರ ರೂ. ನಗದು ಕಳವುಗೈದ ಕಳ್ಳರು ಅನಂತರ ಚಾಕಲೇಟ್‌ಗಳನ್ನು ಕದ್ದುಕೊಂಡು ಹೋಗಿದ್ದಾರೆ. ಮಾತ್ರವಲ್ಲದೇ ಅವರಿಗೆ ಬೇಕಿದ್ದ ಬ್ರೆಷ್ ಸಹಿತ ಕೆಲವೊಂದು ವಸ್ತುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ. ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿ:ಅರುಣಾ ಕಲಾ ಎಸ್.ರಾವ್ ಅಂತರ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಉಡುಪಿ :ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮತ್ತು ಸಾಯಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ 45 ನೇ ರಾಷ್ಟ್ರ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ – 2025 ಕ್ರೀಡಾಕೊಟದಲ್ಲಿ 70 + ವಿಭಾಗದಲ್ಲಿ 5000 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ , 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ , 800 ಮೀಟರ್ ಓಟದಲ್ಲಿ ತೃತೀಯ ಸ್ಥಾನ , 4100 ಮೀಟರ್ ರಿಲೇ ಓಟದಲ್ಲಿ ಪ್ರಥಮ ಸ್ಥಾನ , 4 400 ರಿಲೇ ದ್ವಿತೀಯ ಸ್ಥಾನ ಗಳಿಸಿ ಒಂದು ಚಿನ್ನ ಪದಕ […]

ಬ್ರಹ್ಮಾವರದಲ್ಲಿ ಪ್ಲೈಓವರ್, ಸರ್ವಿಸ್ ರಸ್ತೆಗೆ ಸಾರ್ವಜನಿಕರ ಆಗ್ರಹ

ಉಡುಪಿ: ಬ್ರಹ್ಮಾವರದಲ್ಲಿ ಪ್ಲೈಓವರ್ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಸಾರ್ವಜನಿಕರು ಬುಧವಾರ ಬೃಹತ್‌ ಧರಣಿ ನಡೆಸಿದರು. ಧರಣಿಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿ ಜನರು ಸಿಟಿ ಸೆಂಟರ್‌ನಿಂದ ಎಸ್.ಎಂ.ಎಸ್. ಮೂಲಕ ದೂಪದಕಟ್ಟೆಯವರೆಗೆ ತುರ್ತು ಸರ್ವಿಸ್ ರಸ್ತೆ ನಿರ್ಮಿಸಬೇಕು. ಹಾಗೆಯೇ ಶಾಶ್ವತ ಪರಿಹಾರವಾಗಿ ಪ್ಲೈ ಓವರ್ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದರು. ಸದ್ಯ ಇರುವ ಹೆದ್ದಾರಿ ರಸ್ತೆ ಅವೈಜ್ಞಾನಿಕವಾಗಿದ್ದು, ಪ್ರತಿದಿನ ಸಾವುನೋವು ಸಂಭವಿಸುತ್ತಿವೆ. ಈಗಾಗಲೇ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ವಾರದೊಳಗೆ ಸರ್ವಿಸ್ ರಸ್ತೆಯ […]

ವಿದ್ಯಾರ್ಥಿನಿ ಅಪಹರಣ ಪ್ರಕರಣದ ಆರೋಪಿ ಮೊಹಮ್ಮದ್ ಅಕ್ರಂ ಗೆ ಪಿಎಫ್ ಐ ನಂಟು- ಎನ್ಐಎ ತನಿಖೆಗೆ ವಿಎಚ್ ಪಿ ಆಗ್ರಹ

ಉಡುಪಿ: ಉಡುಪಿಯ ಕರಂಬಳ್ಳಿಯ ನಿವಾಸಿ ಮೊಹಮ್ಮದ್ ಅಕ್ರಮ್ ಇತ್ತೀಚೆಗೆ ಜಿನಾ ಎಂಬ ಯುವತಿಯನ್ನು ಅಪಹರಿಸಿದ್ದು, ಬೆದರಿಕೆಯೊಡ್ಡಿ ಬಲವಂತವಾಗಿ ಮದುವೆಯಾಗಲು ಯತ್ನಿಸಿದ್ದಾನೆ. ಇದೊಂದು ವ್ಯವಸ್ಥಿತ ಲವ್ ಜಿಹಾದ್ ಷಡ್ಯಂತ್ರವಾಗಿದೆ. ಅಕ್ರಮ್‌ಗೆ ಪಿಎಫ್ಐ ನಂಟಿದ್ದು, ಈ ಕುರಿತು ಕೇಂದ್ರ ಸರಕಾರ ಎನ್ಐಎ ತನಿಖೆ ನಡೆಸಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷ ಪ್ರಮುಖ್ ಸುನೀಲ್ ಕೆ.ಆರ್ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವತಿಯು 9ನೇ ತರಗತಿಯಲ್ಲಿ ಇದ್ದಾಗಲೇ ಅಕ್ರಮ್ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ ಮಾಡಿಕೊಂಡು ಆಕೆಯನ್ನು ಲವ್ ಜಿಹಾದ್ […]

ಏಪ್ರಿಲ್ 3ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ.!

ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, ಅಲ್ಲಲ್ಲಿ ಮಳೆ ಕೂಡ ಆಗುತ್ತಿದೆ. ಏಪ್ರಿಲ್ 3ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ನಾಳೆಯಿಂದ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.