ಉಡುಪಿ:ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ

ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು,ಜಿಲ್ಲೆಯಲ್ಲಿ ಈವರೆಗೆ ಶೇ. 85 ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದ್ದು, ಆದರೆ, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಗತಿ ಆಗಿರುವುದಿಲ್ಲ. ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿದ್ದು, ಜಿಲ್ಲೆಯ […]

ಮಣಿಪಾಲದ MSDCಯಲ್ಲಿ ಎಪ್ರಿಲ್14 ರಿಂದ ಬೇಸಿಗೆ ಶಿಬಿರ: ಇಲ್ಲಿದೆ ಹತ್ತಾರು ವಿಷಯ ಆಯ್ಕೆಗಳು, ಮಿಸ್ ಮಾಡಿಕೊಳ್ಳದಿರಿ!

ಮಣಿಪಾಲ: ಮಣಿಪಾಲದಲ್ಲಿರುವ MSDC (ಮಣಿಪಾಲ ಕೌಶಲ್ಯ ಅಭಿವೃದ್ದಿ ಕೇಂದ್ರ) ವತಿಯಿಂದ ಸಮ್ಮರ್ ಕ್ಯಾಂಪ್ ಬೇಸಿಗೆ ಶಿಬಿರ) ಎಪ್ರಿಲ್14 ರಿಂದ ಎಪ್ರಿಲ್ 25 ರವರೆಗೆ ನಡೆಯಲಿದೆ. 6ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಡ್ರೋನ್ ಟೆಕ್ನಾಲಜಿ ಸೇರಿದಂತೆ ಆನಿಮೇಷನ್, ಫ್ಯಾಶನ್ ಡಿಸೈನ್, ಬ್ಯೂಟಿ ಆಂಡ್ ವೆಲ್ ನೆಸ್ ಸೇರಿದಂತೆ ಇನ್ನೂ ಹತ್ತು ಹಲವು ವಿಷಯಗಳನ್ನು ಈ ಶಿಬಿರದಲ್ಲಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಶಿಬಿರ ಶುಲ್ಕ ರೂ.1500 ಎಪ್ರಿಲ್10 ನೋಂದಾಯಿಸಿಕೊಳ್ಳಲು ಕೊನೆಯ ದಿನವಾಗಿದೆ. ಶಿಬಿರವು ಬೆಳಿಗ್ಗೆ […]

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ.ಪಾದೇಕಲ್ಲು ವಿಷ್ಣು ಭಟ್ ಆಯ್ಕೆ.

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಇದೇ ಎ.30 ಹಾಗೂ ಮೇ 1ರಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಆಶ್ರಯದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಪಾದೇಕಲ್ಲು ವಿಷ್ಣು ಭಟ್ಟ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾದೇಕಲ್ಲು ವಿಷ್ಣು ಭಟ್, 1956ರ ಫೆ. 6ರಂದು ಬಂಟ್ವಾಳ ತಾಲೂಕಿನ ಕರೋಪಾಡಿಯ ಪಾದೇಕಲ್ಲಿನಲ್ಲಿ ಹುಟ್ಟಿದರು. ಪ್ರಾಥಮಿಕ, ಪ್ರೌಢ […]

ಬೈಂದೂರು:ಯುವಕ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನುಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ವಾರಕ್ಕೆ ಒಂದೆರೆಡು ಬಾರಿ ಮನೆಗೆ ಹೋಗಿ ಬರುತ್ತಿರುತ್ತಾನೆ. ಮಾರ್ಚ್ 20 ರಂದು ಮನೆಗೆ ಬರುವುದಾಗಿ ಹೇಳಿದವನು ಇದೂವರೆಗೂ ಮನೆಗೂ ಬಾರದೇ ಸಂಬಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಉರುಟು ಮುಖ, ಎಣ್ಣೆಕಪ್ಪು ಮೈಬಣ್ಣ, ಸಾಧರಾಣ ಶರೀರ ಹೊಂದಿರುವ ಇವರು ಕನ್ನಡ ಹಾಗೂ ಮಲಯಾಳಂ ಭಾಷೆ […]