ಏಪ್ರಿಲ್ 13ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ.!

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಏಪ್ರಿಲ್ 13ರವರೆಗೆ ಭಾರಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತ ಪರಿಚಲನೆಯು ತಮಿಳುನಾಡು ಹಾಗೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ತರಿಸಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮಣಿಪಾಲ ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಪ್ರಾಥಮಿಕ ಶಾಲಾ ಶಿಕ್ಷಕರಿಗೆ “ನೈಪುಣ್ಯ ಸಿರಿ” ತರಬೇತಿ ಕಾರ್ಯಗಾರ

ಮಣಿಪಾಲ:“ನೈಪುಣ್ಯ ಸಿರಿ” ಶಿಕ್ಷಕರ ಕೌಶಲ್ಯ ಅಭಿವೃದ್ಧಿ ಕಾರ್ಯಗಾರವು ರೋಟರಿ ಐಸಿರಿ ಪರ್ಕಳ ಹಾಗೂ ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಣಿಪಾಲ ಇವರ ಸಹ ಪ್ರಾಯೋಜಕತ್ವದಲ್ಲಿ 5.4.2025 ಶನಿವಾರದಂದು, 10ರಿಂದ 1 ವರೆಗೆ, ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಆವರಣದಲ್ಲಿ ನಡೆಯಿತು. ಸುಮಾರು 15 ಶಿಕ್ಷಕರು ಕಾರ್ಯಾಗಾರದ ಸದುಪಯೋಗವನ್ನು ಪಡೆದರು. ತಾವೇ ಸ್ವತಃ ತಯಾರಿಸಬಹುದಾದ ಕಲಿಕಾ ಉಪಕರಣಗಳು, ಅವುಗಳ ಉಪಯೋಗ ಮತ್ತು ಮಕ್ಕಳ ಬೆಳವಣಿಗೆಯಲ್ಲಿ ಅವುಗಳ ಪಾತ್ರಗಳ ಬಗ್ಗೆ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳು ಪ್ರಾತ್ಯಕ್ಷಿಕೆಗಳ […]