ಅಂಗಡಿಗಳಲ್ಲಿ ನೀರಿನ ಬಾಟಲ್ ಖರೀದಿಸುವ ಮೊದಲು ಇರಲಿ ಎಚ್ಚರ.!

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಗೋಬಿ ಮಂಚೂರಿಗೆ, ಕಾಟನ್ ಕ್ಯಾಂಡಿಗಳಿಗೆ ಹಾಕುವ ಕೃತಕ ಬಣ್ಣಗಳು ಸೇರಿದಂತೆ ಪ್ರತಿನಿತ್ಯ ಸೇವಿಸುವ ಸಾಕಷ್ಟು ಆಹಾರಗಳಲ್ಲಿನ ಕಲಬೆರಕೆಗಳಿಗೆ ನಿಷೇಧ ಹೇರುತ್ತಲೇ ಇದೆ. ಇದೀಗ ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಈ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ತರ ಸುದ್ದಿಗೋಷ್ಠಿ ನಡೆಸಿದ್ದಾರೆ. ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ72 ಸುರಕ್ಷಿತ […]
ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ; ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹರ್ಷ

ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಉಡುಪಿ:ಎ.9 ಮತ್ತು 12ರಂದು ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ತ್ರಿಪುರಾಂಬಿಕಾ ಮಹಾಯಾಗ

ಉಡುಪಿ:ದೊಡ್ಡಣಗುಡ್ಡೆ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಎ. 9 ಮತ್ತು 12ರಂದು ಶ್ರೀ ಲಲಿತಾ ಸಹಸ್ರ ಕದಳೀಯಾಗವು ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ನೆರವೇರಲಿದೆ. ಬಹು ಫಲಪ್ರದವಾದ ಈ ಮಹಾನ್ ಯಾಗದಲ್ಲಿ ಬ್ರಾಹ್ಮಣ ಸುವಾಸಿನಿ ಆರಾಧನೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ.ಸಹಸ್ರ ಸಹಸ್ರ ಸಂಖ್ಯೆಯ ಕದಳಿ ಹಣ್ಣನ್ನು ತ್ರಿಮದುರಯುಕ್ತವಾಗಿ ಹೋಮಿಸಿ ವಿಧ ವಿಧದ ಕುಸುಮಗಳಿಂದ ತ್ರಿಪುರಾಂಬಿಕೆಯನ್ನು ಅರ್ಚಿಸಿ, ನಾಮಾವಳಿಗಳಿಂದ ಸ್ತುತಿಗೈದು ಆಕೆಯ ಆರಾಧನೆಯನ್ನು ಮಾಡಿ ಅನುಗ್ರಹವನ್ನು ಯಾಚಿಸುವ, ಏಕ ಕಾಲದಲ್ಲಿ […]
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ. 93.90% ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ರಾಜ್ಯದಲ್ಲಿ ಒಟ್ಟು 73.45% % ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ಇಂದು ಮಧ್ಯಾಹ್ನ 12:45ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಮಧ್ಯಾಹ್ನ […]
ಉಡುಪಿ: ಬಾವಿಗೆ ಹಾರಿ ಹಿರಿಯ ಬಸ್ ಏಜೆಂಟ್ ಆತ್ಮಹತ್ಯೆ; ಕಾರಣ ನಿಗೂಢ

ಉಡುಪಿ: ಪಕ್ಕದ ಮನೆಯ ಬಾವಿಗೆ ಹಾರಿ ವೃದ್ಧನೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್ ಶೆಣೈ (72) ಎಂದು ಗುರುತಿಸಲಾಗಿದೆ. ಇವರು ಹಿರಿಯ ಬಸ್ ಏಜೆಂಟ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಬಾವಿಯಿಂದ ಬಂದ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು. ಅಗ್ನಿಶಾಮಕ ಇಲಾಖೆ ಬಾವಿಯಲ್ಲಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿದರು. ತಕ್ಷಣವೇ ಸಮಾಜಸೇವಕ ನಿತ್ಯಾನಂದ […]