ಉಡುಪಿ:ಜನಸಾಮಾನ್ಯರು ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ಹೊಂದುವುದು ಅತ್ಯವಶ್ಯ : ಡಿಹೆಚ್‌ಓ ಡಾ. ಬಸವರಾಜ್ ಹುಬ್ಬಳ್ಳಿ

ಉಡುಪಿ: ಪ್ರತಿಯೊಬ್ಬ ಜನಸಾಮಾನ್ಯರು ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ಹೊಂದುವುದರೊಂದಿಗೆ ಸದೃಢವಾದ ಆರೋಗ್ಯ ಕಾಪಾಡಿಕೊಂಡು ಸ್ವಾಸ್ಥ್ಯ ಜೀವನ ನಡೆಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಹೇಳಿದರು. ಅವರು ಸೋಮವಾರ ನಗರದ ಮಿಷನ್ ಆಸ್ಪತ್ರೆ ರೋಡ್‌ನ ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ, ಬಡಗಬೆಟ್ಟು ಕ್ರೆಡಿಟ್ […]

ಉಡುಪಿ: ಬಿಜೆಪಿಯವರು ಜನಾಕ್ರೋಶ ಯಾತ್ರೆ ಕೇಂದ್ರ ಸರಕಾರದ ವಿರುದ್ಧವೇ ನಡೆಸಲಿ: ರಮೇಶ್ ಕಾಂಚನ್ ಆಗ್ರಹ

ಉಡುಪಿ: ಬೆಲೆ ಏರಿಸಿ ಜನರ ಬದುಕು ದುಸ್ತರವಾಗಲು ಕಾರಣವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜ್ಯ ಬಿಜೆಪಿಯವರು ಮೊದಲು ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಗಗನಕ್ಕೇರಿದ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಇಳಿಸದೆ ಜನರನ್ನು ವಂಚಿಸುತ್ತಿದ್ದೆ‌. ಇಂಧನಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಹಲವಾರು ವಸ್ತುಗಳ ಬೆಲೆ ಏರಿಕೆಯಾಗಿದೆ. ಗ್ಯಾಸ್ ಸಿಲಿಂಡರ್ ದರ ಹೆಚ್ಚಳ,ಟೋಲ್ ದರ ಏರಿಕೆ, ಆರೋಗ್ಯ ವಿಮೆ […]

ಉಡುಪಿ:ಏ.16 ಮತ್ತು 17 ರಂದು ನಡೆಯಲಿರುವ ಸಿಇಟಿ ಪರೀಕ್ಷೆಯಲ್ಲಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 16 ಮತ್ತು 17 ರಂದುನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು […]

ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ; ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ ಬಳಿಕ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಈ ಕುರಿತು ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಉಜ್ವಲ (ಪಿಎಂಯುವೈ) ಮತ್ತು ಉಜ್ವಲೇತರ ಗ್ರಾಹಕರಿಗೂ ಬೆಲೆ ಏರಿಕೆ ಅನ್ವಯವಾಗಲಿದೆ. ಆದ್ದರಿಂದ ಇನ್ಮುಂದೆ ಉಜ್ವಲ ಯೋಜನೆಯ 503 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 553 ರೂ. […]

ಮಣಿಪಾಲ: MSDC ಓರೇನ್ ಇಂಟರ್ನ್ಯಾಷನಲ್ ನಲ್ಲಿ ಆರಂಭಗೊಂಡಿದೆ ಒಳ್ಳೆಯ ಅವಕಾಶವಿರುವ ‘ಡಿಪ್ಲೋಮಾ ಇನ್ ಮೆಹೆಂದಿ ಡಿಸೈನಿಂಗ್’ ಕೋರ್ಸ್

ಮಣಿಪಾಲ: ಮಣಿಪಾಲದ ಓರೇನ್ ಇಂಟರ್ನ್ಯಾಷನಲ್’ನಲ್ಲಿ ಡಿಪ್ಲೋಮಾ ಇನ್ ಮೆಹೆಂದಿ ಡಿಸೈನಿಂಗ್ ಕೋರ್ಸ್ ಆರಂಭಗೊಂಡಿದೆ. ಮೆಹೆಂದಿ ಡಿಸೈನ್ ಗೆ ಸಂಬಂಧಪಟ್ಟ ಎಲ್ಲಾ ಪ್ರಕ್ರಿಯೆಗಳನ್ನೂ ಈ ಕೋರ್ಸ್ ನಲ್ಲಿ ಕಲಿಸಲಾಗುತ್ತದೆ. ಬೇರೆ ಬೇರೆ ದೇಶದ ಮೆಹಂದಿ ಆರ್ಟ್ ಗಳನ್ನೂ ಕಲಿಯಬಹುದು. ಈ ಕ್ಷೇತ್ರಕ್ಕೆ ವಿಶ್ವದಾದ್ಯಂತ ಬೇಡಿಕೆ ಇದ್ದು ಬದುಕು ಕಟ್ಟಿಕೊಳ್ಳಬಹುದು. ಒಟ್ಟು ನಲವತ್ತು ಗಂಟೆಯ ಈ ಕೋರ್ಸ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೂಡಲೇ ಸಂಪರ್ಕಿಸಿ 8123165068, 8123163935