ಕೇಂದ್ರ ಸರ್ಕಾರ ಅಡುಗೆ ಅನಿಲ, ಇಂಧನ ಬೆಲೆ ಏರಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರ ಅಡುಗೆ ಅನಿಲ, ಇಂಧನ ಬೆಲೆ ಏರಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನಗರದ ಬ್ರಹ್ಮಗಿರಿ ಸರ್ಕಲ್ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು, ಕೇಂದ್ರ ಸರಕಾರ ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಮಹಿಳೆಯರಿಗೆ ಮೋಸ ಮಾಡಿದೆ. ಯುಪಿಎ ಸರಕಾರ ಇದ್ದಾಗ 400 ರೂ ಇದ್ದ ಗ್ಯಾಸ್ ಬೆಲೆ ಈಗ 1000 ರೂ ದಾಟಿದೆ. ರಾತ್ರೋರಾತ್ರಿ ಅಡುಗೆ […]

ಮಂಗಳೂರು: ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಉಳ್ಳಾಲ: ತೆಂಗಿನ ಮರವೇರಿ ಶೇಂದಿ ತೆಗೆಯುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೂರ್ತೆದಾರರೊಬ್ಬರು ಮೃತಪಟ್ಟಿರುವ ಘಟನೆ ಕೊಲ್ಯ ಕನೀರು ತೋಟ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಕೊಲ್ಯ ಕನೀರು ತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ(46) ಮೃತಪಟ್ಟ ಮೂರ್ತೆದಾರ. ಯಶೋಧರ ಇಂದು ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರಲ್ಲಿ ಮೂರ್ತೆದಾರಿಕೆ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯಶೋಧರರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ,ಪುತ್ರ, ಪುತ್ರಿಯನ್ನು […]

ಮಣಿಪಾಲ: ‘ವಿಷುಕಣಿ-ಕವಿದನಿ’ ಬಹು ಭಾಷಾ ಕವಿಗೋಷ್ಠಿ ಸಂಪನ್ನ

ಉಡುಪಿ: ರೇಡಿಯೊ ಮಣಿಪಾಲ್ 90.4 MHz ಸಮುದಾಯ ಬಾನುಲಿ ಕೇಂದ್ರ, ಮಣಿಪಾಲ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗ ದೊಂದಿಗೆ “ವಿಷುಕಣಿ-ಕವಿದನಿ” ಬಹು ಭಾಷಾ ಕವಿಗೋಷ್ಠಿ ಮಾ.10 ಗುರುವಾರ ರೇಡಿಯೊ ಮಣಿಪಾಲ್, ಎಂ.ಐ.ಸಿ ಕ್ಯಾಂಪಸ್ ಮಣಿಪಾಲದಲ್ಲಿ ನಡೆಯಿತು. ಸಭಾ ಕ್ರಾಯಕ್ರಮ ಉದ್ಘಾಟನೆಯನ್ನು ಡಾ. ಶುಭ ಹೆಚ್. ಎಸ್‌. ನಿರ್ದೇಶಕರು, ಮಣಿಪಾಲ್ ಇನ್ಸಿಟ್ಯೂಟ್ ಆಫ್ ಕಮ್ಯುನಿಕೇಶನ್ ಮಾಹೆ ಮಣಿಪಾಲ ಇವರು ನೆರವೇರಿಸಿ ಮಾತನಾಡಿ, ಕವನಗಳಿಗೆ ಭಾವನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ಅವಕಾಶವಿದೆ, ಹೀಗಾಗಿ ಕವಿತೆಗಳಿಗೆ […]

ಏಪ್ರಿಲ್ 12ರಂದು ಕದ್ರಿ ಶಿವಬಾಗ್’ನಲ್ಲಿ “ರೋಹನ್ ಗಾರ್ಡನ್” ಭೂಮಿಪೂಜೆ

ಮಂಗಳೂರು: ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸುಮಾರು ಮೂರು ದಶಕಗಳಿಗೂ ಮಿಕ್ಕಿ ಸೇವೆ ನೀಡುತ್ತಿರುವ ರೋಹನ್ ಕಾರ್ಪೋರೇಶನ್, ತನ್ನ ಮತ್ತೊಂದು ವಸತಿ ಸಮುಚ್ಚಯ ‘ರೋಹನ್ ಗಾರ್ಡನ್’ ಯೋಜನೆಯ ಭೂಮಿಪೂಜೆಯನ್ನು, 2025ರ ಏಪ್ರಿಲ್ 12ರ ಶನಿವಾರ ಸಂಜೆ 5:00 ಗಂಟೆಗೆ ನಡೆಸಲಿದೆ. ಕದ್ರಿ -ಶಿವಬಾಗ್, ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಧುನಿಕ ವಸತಿ ಸಮುಚ್ಚಯ ಪ್ರಕೃತಿ ಮತ್ತು ಅನುಕೂಲತೆಗಳ ಸಮ್ಮಿಲನವಾಗಿದೆ. ರೋಹನ್ ಗಾರ್ಡನ್ ಐಶಾರಾಮಿ, ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಾಸಯೋಗ್ಯ ವ್ಯವಸ್ಥೆಯನ್ನು ಒದಗಿಸುವ ಆಧುನಿಕ ವಸತಿ ಸಮುಚ್ಚಯವಾಗಿದೆ. ಐದು […]