ವರ್ಷಾಂತ್ಯಕ್ಕೆ ತಿರುವನಂತಪುರಂ-ಮಂಗಳೂರು ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭ.

ಮಂಗಳೂರು: ತಿರುವನಂತಪುರಂ-ಮಂಗಳೂರು ನಡುವೆ ವಂದೇ ಭಾರತ್ ಸ್ಲೀಪರ್ ರೈಲು 2025ರ ಕೊನೆಯಲ್ಲಿ ಆರಂಭಗೊಳ್ಳಲಿದೆ. 16 ಬೋಗಿಗಳ ಹೈ-ಸ್ಪೀಡ್ ಸ್ಲೀಪರ್ ರೈಲು ದಕ್ಷಿಣ ರೈಲ್ವೆ ವಲಯದ ಭಾಗವಾಗಲಿದೆ. ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ವಿನ್ಯಾಸಗೊಳಿಸಿದ ಮತ್ತು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ನಿರ್ಮಿಸಿರುವ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ 1,128 ಪ್ರಯಾಣಿಕರಿಗೆ ಸಂಚರಿಸಲು ಅವಕಾಶ ಇರುತ್ತದೆ. ಆಧುನಿಕ ಹವಾನಿಯಂತ್ರಿತ ಸ್ಲೀಪರ್ ಬರ್ತ್‌ಗಳು ಸ್ವಯಂಚಾಲಿತ ಬಾಗಿಲುಗಳು, ಸುರಕ್ಷತಾ ವ್ಯವಸ್ಥೆಗಳನ್ನು ಒಳಗೊಂಡಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.
ಉಡುಪಿ: ಈಡಿ, ಸಿಬಿಐ, ಐಟಿ ದುರುಪಯೋಗ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ.

ಉಡುಪಿ: ಪ್ರಜಾಪ್ರಭುತ್ವದ ಅಂಗ ಸಂಸ್ಥೆಗಳಾದ ಈಡಿ, ಸಿಬಿಐ, ಐಟಿಯನ್ನು ದ್ವೇಷ ರಾಜಕಾರಣ ಕ್ಕಾಗಿ ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷದ ನಾಯಕರ ಧ್ವನಿಯನ್ನು ಧಮನಗೊಳಿಸುತ್ತಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಬುಧವಾರ ಆದಿಉಡುಪಿಯಲ್ಲಿರುವ ಆದಾಯ ತೆರಿಗೆ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ದೇಶದ ಸ್ವಾತಂತ್ರ್ಯಕ್ಕಾಗಿ ನೆಹರು ತನ್ನ ಇಡೀ ಸಂಪತ್ತು ಒತ್ತೆ ಇಟ್ಟು 1938ರಲ್ಲಿ ನ್ಯಾಶನಲ್ ಹೆರಾಲ್ಡ್ ಪತ್ರಿಕೆಯನ್ನು […]