ಜತ್ತನ್ ಪೂಜಾರಿ ಫ್ರೆಂಡ್ಸ್ ಗೆ ಮಟಪಾಡಿ ಬಿಲ್ಲವ ಟ್ರೋಫಿ, ಶ್ರೀ ಕೋಟಿ ಚೆನ್ನಯ್ಯ ಬ್ರದರ್ಸ್ ಚಾಂತಾರು ರನ್ನರ್ಸ್

ಉಡುಪಿ: ಬಿಲ್ಲವ ಫ್ರೆಂಡ್ಸ್ ಮಟಪಾಡಿ ನೀಲಾವರ ಆಶ್ರಯದಲ್ಲಿ ನಡೆದ 6 ತಂಡಗಳ ಬಿಲ್ಲವ ಕ್ರಿಕೆಟ್ ಪಂದ್ಯಾಟ ಮಟಪಾಡಿ ಬಿಲ್ಲವ ಟ್ರೋಫಿ 2025 ಟ್ರೋಫಿಯನ್ನು ಜತ್ತನ್ ಪೂಜಾರಿ ಫ್ರೆಂಡ್ಸ್ ತನ್ನದಾಗಿಸಿಕೊಂಡಿತು. ಶ್ರೀ ಕೋಟಿ ಚೆನ್ನಯ್ಯ ಬ್ರದರ್ಸ್ ಚಾಂತಾರು ರನ್ನರ್ ಅಪ್ ಪ್ರಶಸ್ತಿಯನ್ನು ಪಡೆಯಿತು. ಚಾಂತಾರಿನ ಗ್ಲೋಬಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾಟದ ಉದ್ಘಾಟನೆಯನ್ನು ವಿಶ್ವನಾಥ ಕ್ಷೇತ್ರ ಕಟಪಾಡಿ ಇದರ ಅಧ್ಯಕ್ಷರಾದ ಬಿ ಎನ್ ಶಂಕರ ಪೂಜಾರಿ ಉದ್ಘಾಟಿಸಿದರು.ಪಂದ್ಯಾಟದಲ್ಲಿ 6 ತಂಡಗಳು ಭಾಗವಹಿಸಿದ್ದು. ಸರಣಿ ಶ್ರೇಷ್ಠ ಮಹೇಶ್ ಅಂಚನ್, ಪಂದ್ಯ ಶ್ರೇಷ್ಠ […]
ಮಂಗನ ಕಾಯಿಲೆಗೆ ಬಾಲಕ ಮೃತ್ಯು.

ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದಲ್ಲಿ ಮಂಗನ ಕಾಯಿಲೆಗೆ (ಕೆಎಫ್‌ಡಿ ) ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಗುರುವಾರ (ಎ.17) ನಡೆದಿದೆ. ಮೃತಪಟ್ಟ ಬಾಲಕನನ್ನು ರಚಿತ್(7) ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ರಚಿತ್ ಗೆ 4 ದಿನಗಳ ಕಾಲ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ 12 ದಿನಗಳ ಕಾಲ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ 9 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿತು. ರಚಿತ್ ಕೋಣಂದೂರಿನ ನವಜ್ಯೋತಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು […]
ಉಡುಪಿ:ರಸ್ತೆ ಅಭಿವೃದ್ಧಿ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜ್ಯ ಹೆದ್ದಾರಿಯಾಗಿರುವ ಮಂಗಳೂರು-ಅತ್ರಾಡಿ (ಎನ್.ಹೆಚ್.67) ರಸ್ತೆಯ ಕಿ.ಮೀ 71.74 ರಿಂದ 75.74 (ಹಿರೇಬೆಟ್ಟು-ಪಟ್ಲ ಹತ್ತಿರದ ರಸ್ತೆ) ರವರೆಗೆ ರಸ್ತೆ ಅಭಿವೃದ್ಧಿ (ಅಗಲೀಕರಣ)ಕಾಮಗಾರಿಗೆ ಮಂಜೂರಾಗಿದ್ದು, ಸದ್ರಿ ರಸ್ತೆಯಲ್ಲಿ ವಾಹನ ಸಂಚಾರ ಅಧಿಕವಾಗಿರುವುದರಿಂದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು, ವಾಹನ ಸಂಚಾರಕ್ಕೆ ಬದಲಿ ಮಾರ್ಗವನ್ನು ಕಲ್ಪಿಸುವ ಅವಶ್ಯಕತೆ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಸ್ತೆ ಅಗಲೀಕರಣ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ […]
ಉಡುಪಿ:ಪ್ರತಿಭೆಗಳ ಅನಾವರಣಕ್ಕೆ ಶಿಬಿರಗಳು ಸಹಕಾರಿ : ಶಾಸಕ ಸುನೀಲ್ ಕುಮಾರ್

ಉಡುಪಿ: ಶಿಬಿರಗಳಲ್ಲಿ ಪಾಲ್ಗೊಳ್ಳುವಿಕೆ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಗಿದ್ದು, ಮಕ್ಕಳುರಜಾ ದಿನಗಳಲ್ಲಿ ಮೊಬೈಲ್ ಹಾಗೂ ಟಿ.ವಿಯ ಬಳಕೆಯಲ್ಲಿ ಕಾಲಹರಣ ಮಾಡದೇ, ಹತ್ತು ದಿನದ ಶಿಬಿರದ ಸಂಪೂರ್ಣಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳದ ಯಕ್ಷ ರಂಗಾಯಣದ ಸಭಾಂಗಣದಲ್ಲಿ ನಡೆದ ಬಾಲಲೀಲೆ ಮಕ್ಕಳ ರಂಗ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಯಕ್ಷಗಾನಕ್ಕೆ ಹೊಸ ಪೀಳಿಗೆಯನ್ನು ತಯಾರು ಮಾಡುವುದರ […]
ಉಡುಪಿ:ಏ. 19 ರಂದು ನೇರ ಸಂದರ್ಶನ

ಉಡುಪಿ: ನಗರದ ಗುಂಡಿಬೈಲು ಅಂಬಾಗಿಲು ರೋಡ್‌ನ ಕಲ್ಸಂಕದ ಸಾನ್ವಿ ಟ್ರೇರ‍್ಸ್ ಇಲ್ಲಿ ಏಪ್ರಿಲ್ 19 ರಂದುಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 […]