ಬೈಂದೂರು: ವ್ಯಕ್ತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಯೆಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ (40) ಎಂಬವರು 2024ರ ಫೆಬ್ರವರಿ 18ರಂದು ಮನೆಯಿಂದ ಕೆಲಸಕ್ಕೆಂದು ಹೋದವರು, ಕೆಲಸಕ್ಕೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: […]
ಉಡುಪಿ: ಎ.26ರಿಂದ ಜೂ.4ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ; ಜಿಲ್ಲಾಧಿಕಾರಿ

ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರು ಗಳಿಗೆ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ ಎಪ್ರಿಲ್ 26ರಿಂದ ಜೂನ್ 4ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಜಿಲ್ಲೆಯಲ್ಲಿ ಪ್ರತಿಶತಃ ನೂರರಷ್ಟು ಗುರಿ ಸಾಧನೆ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಶನಿವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ […]