ಕಟಪಾಡಿ: ಲಾರಿ ಡಿಕ್ಕಿ; ಪಲ್ಟಿಯಾಗಿ ಡಿವೈಡರ್ ಮೇಲೆ ಬಿದ್ದ ಕಾರು

ಉಡುಪಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ಪಲ್ಟಿಯಾಗಿ ಡಿವೈಡರ್ ಮೇಲೆ ಬಿದ್ದ ಘಟನೆ ಉಡುಪಿ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವ್ಯಾಗ್ನರ್ ಕಾರಿಗೆ, ಅದೇ ದಿಕ್ಕಿನಲ್ಲಿ ತೆರಳುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿ ಹೆದ್ದಾರಿಯ ಡಿವೈಡರ್ ಮೇಲೆ ಬಿದ್ದಿದೆ. ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕಾರಿನಲ್ಲಿದ್ದ ತಂದೆ ಮತ್ತು ಮಗ ಸಣ್ಣಪುಟ್ಟ ಗಾಯದೊಂದಿಗೆ […]
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಚುನಾವಣೆಯಲ್ಲಿ ಸ್ಪರ್ಧೆ: ಇಬ್ಬರು ಬಿಜೆಪಿ ಮುಖಂಡರ ಉಚ್ಚಾಟನೆ

ಉಡುಪಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್)ದ ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧಿಸುತ್ತಿರುವ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉದಯ ಕೋಟ್ಯಾನ್ ಹಾಗೂ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ಹೋಟೆಲ್ ಮ್ಯಾನೇಜರ್ ಚಿಕಿತ್ಸೆ ಫಲಿಸದೆ ಮೃತ್ಯು

ಉಡುಪಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಸಂತೆಕಟ್ಟೆ ನಿವಾಸಿ ಮಣಿಪಾಲ ಹೊಟೇಲ್‌ವೊಂದರ ಮ್ಯಾನೇಜರ್ ಪ್ರವೀಣ್ ಸಾಲ್ಯಾನ್ (44) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಪ್ರವೀಣ್ ಅವರು ನಿನ್ನೆ ಆರೂರಿನ ಪತ್ನಿ ಮನೆಗೆ ಬೈಕ್‌ನಲ್ಲಿ ಹೋಗುವಾಗ ದನವೊಂದು ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತರು ಪತ್ನಿ, ತಂದೆ, ಇಬ್ಬರು ಸಹೋದರಿಯರು, […]
ಜೆಇಇ ಮೈನ್ಸ್: ಎಕ್ಸ್ಪರ್ಟ್ ಪಿಯು ಕಾಲೇಜಿನ ಆರು ವಿದ್ಯಾರ್ಥಿಗಳಿಗೆ ವಿಷಯವಾರು 100 ಪರ್ಸೆಟೈಲ್

ಮಂಗಳೂರು:ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಐವರು ವಿದ್ಯಾರ್ಥಿಗಳು ಫಿಸಿಕ್ಸ್ ನಲ್ಲಿ ಹಾಗೂ ಓರ್ವ ಕೆಮೆಸ್ಟ್ರಿಯಲ್ಲಿ ತಲಾ 100 ಪರ್ಸೆಂಟೈಲ್ ಪಡೆದು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಮನೀಶ್ ಎಲ್. ಫಿಸಿಕ್ಸ್ ನಲ್ಲ 100 ಪರ್ಸೆಂಟೈಲ್ ಪಡೆದು ಒಟ್ಟು 99.4178456 ಪರ್ಸೆಂಟೈಲ್, ಕೆ.ಆರ್. ಋತ್ವಿಕ್ ಫಿಸಿಕ್ಸ್ ನಲ್ಲಿ 100 ಪರ್ಸೆಂಟೈಲ್ ಪಡೆದು ಒಟ್ಟು 99.3686949 ಪರ್ಸೆಂಟೈಲ್ ಪಡೆದುಕೊಂಡಿದ್ದಾರೆ. ಅದೇ ರೀತಿ ಶಿವನ ಗೌಡ […]
ಜೆಇಇ ಫಲಿತಾಂಶ: ಆಳ್ವಾಸ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಮೂಡುಬಿದಿರೆ: ಜೆಇಇ ಫಲಿತಾಂಶ ಪ್ರಕಟವಾಗಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯು ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. 63 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 99 ಪರ್ಸಂಟೈಲ್‌ಕ್ಕಿಂತ ಅಧಿಕ ಅಂಕ ಪಡೆದ ಶ್ರೇಯಕ್ಕೆ ಪಾತ್ರರಾಗಿದ್ದಾರೆ. ಭೌತಶಾಸ್ತ್ರದಲ್ಲಿ 21, ರಸಾಯನಶಾಸ್ತ್ರದಲ್ಲಿ 30 ಹಾಗೂ ಗಣಿತದಲ್ಲಿ 12 ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ. 99 ಪರ್ಸಂಟೈಲ್‌ಕ್ಕಿಂತ ಅಧಿಕ 4 ವಿದ್ಯಾರ್ಥಿಗಳು, 98 ಪರ್ಸಂಟೈಲ್‌ಕ್ಕಿಂತ ಅಧಿಕ 14 ವಿದ್ಯಾರ್ಥಿಗಳು, 97 ಪರ್ಸಂಟೈಲ್‌ಕ್ಕಿಂತ 45 ವಿದ್ಯಾರ್ಥಿಗಳು, 95 ಪರ್ಸಂಟೈಲ್‌ಕ್ಕಿಂತ 91 ವಿದ್ಯಾರ್ಥಿಗಳು, 90 ಪರ್ಸಂಟೈಲ್‌ಕ್ಕಿಂತ […]