ಉಡುಪಿ:ಕರ್ನಾಟಕ ಪ್ರಾದೇಶಿಕ ಅಸಮತೋಲನ : ಮರುಪರಿಶೀಲನೆ

ಉಡುಪಿ: ಪ್ರಾದೇಶಿಕ ಅಸಮತೋಲನೆಯು ಸ್ಥಳೀಯ ಜನರ ಕಾರ್ಯಚಟುವಟಿಕೆ ಹಾಗೂ ಆರ್ಥಿಕ ಅಭಿವೃದ್ಧಿಯ ಆಧಾರದ ಮೇಲೆ ಅವಲಂಬನೆಯಾಗಿರುತ್ತದೆ. ಉಡುಪಿ ಜಿಲ್ಲೆಯು ಸಾಕಷ್ಟು ಅಭಿವೃದ್ಧಿಯು ಖಾಸಗಿ ಸಹಭಾಗಿತ್ವದಲ್ಲಿ ಆಗಿದೆ. ಇನ್ನಷ್ಟು ಅಭಿವೃದ್ಧಿ ಆಗಬೇಕು ಎಂದು ಅಧ್ಯಕ್ಷ ಪ್ರೊ.ಎಂ ಗೋವಿಂದರಾವ್ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಡಾ.ಡಿ.ಎಂ ನಂಜುಂಡಪ್ಪ ವರದಿಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಉಡುಪಿ ಜಿಲ್ಲೆಯಲ್ಲಿ […]
ಪಹಲ್ಗಾಮ್‌ನಲ್ಲಿ ಉಗ್ರರ ಅಟ್ಟಹಾಸ: “ಈ ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ; ಉಗ್ರರ ದಾಳಿಗೆ ಪ್ರಧಾನಿ ಮೋದಿ ಖಂಡನೆ

ಪಹಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆಸಿದ ಉಗ್ರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪ್ರವಾಸಿ ತಾಣದಲ್ಲಿ ಪ್ರಾಕೃತಿಕ ಸೌಂದರ್ಯವನ್ನು ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಕ್ಕೆ ನ್ಯಾಯ ಒದಗಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಟ್ವೀಟ್ ಮಾಡಿರುವ ಅವರು, “ಈ ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಅವರ ದುಷ್ಟ ಉದ್ದೇಶ ಎಂದಿಗೂ ಯಶಸ್ವಿಯಾಗುವುದಿಲ್ಲ” ಎಂದಿದ್ದಾರೆ. ಉಗ್ರರ ದಾಳಿಗೆ ಮೃತಪಟ್ಟ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಸಾಧ್ಯವಿರುವ […]
ಉಡುಪಿ:ಏ. 25 ರಂದು ನೇರ ಸಂದರ್ಶನ

ಉಡುಪಿ: ನಗರದ ಕುಂಜಿಬೆಟ್ಟು ಶಿವಳ್ಳಿಯ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವ್ಹೀಲರ್) ಮ್ಯಾಟ್ರಿನ್ ದಿಯಾ ಇಲ್ಲಿ ಏಪ್ರಿಲ್ 25 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: […]
ಬೈಂದೂರು:ವ್ಯಕ್ತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಯಳಜಿತ್ ಗ್ರಾಮದ ಹುಲ್ಕಡಕಿ ನಿವಾಸಿ ಬಸವ (38) ಎಂಬ ವ್ಯಕ್ತಿಯು ಏಪ್ರಿಲ್17 ರಂದು ಮನೆಯಿಂದ ಹೋದವರು ಇದೂವರೆಗೂ ವಾಪಾಸು ಬಾರದೇ ನಾಪತ್ತಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ 100 […]
ಪಹಲ್ಗಾಮ್’ನಲ್ಲಿ ಉಗ್ರರ ಗುಂಡಿನ ದಾಳಿ: ಇಬ್ಬರು ಕನ್ನಡಿಗರು ಸೇರಿದಂತೆ 28 ಕ್ಕೂ ಹೆಚ್ಚು ಪ್ರವಾಸಿಗರು ಮೃತ್ಯು.

ಪಹಲ್ಗಾಮ್: ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಣಿವೆಗಳಿಂದ ಕೂಡಿದ ಸುಂದರ ಪ್ರವಾಸಿ ತಾಣದಲ್ಲಿ ಮರಗಳ ನಡುವಿನಿಂದ ಬಂದ ಉಗ್ರರು, ಪ್ರವಾಸಿಗರ ರಕ್ತದೋಕುಳಿ ಹರಿಸಿದ್ದಾರೆ. ಕಂಡ ಕಂಡಲ್ಲಿ ವಿಶೇಷವಾಗಿ ಪುರುಷರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇವರಲ್ಲಿ ಇಬ್ಬರು ವಿದೇಶಿಗರು ಸೇರಿದ್ದಾರೆ. ನೋಡ ನೋಡುತ್ತಿದ್ದಂತೆ ಹೆಣಗಳ ರಾಶಿ […]