ಬಂಟಕಲ್ ತಾಂತ್ರಿಕ ವಿದ್ಯಾಲಯದಲ್ಲಿ ವಿಟಿಯು ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ತಂಡಕ್ಕೆ ಪ್ರಶಸ್ತಿ.

ಬಂಟಕಲ್: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಇದರ 2025ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಪುರುಷರ ವಾಲಿಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜತಾಂತ್ರ‍್ರಿಕ ಮಹಾವಿದ್ಯಾಲಯದಲ್ಲಿ 22 ಮತ್ತು 23 ಎಪ್ರಿಲ್ 2025 ರಂದು ನಡೆಯಿತು. ದಿನಾಂಕ 23 ಎಪ್ರಿಲ್ 2025 ರಂದು ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ವಹಿಸಿ ಮಾತನಾಡಿ ಕ್ರೀಡೆಯ ಮಹತ್ವದ ಬಗ್ಗೆ ತಿಳಿಸಿದರು. ಪಂದ್ಯಾವಳಿಯಲ್ಲಿ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ, […]
ಮಣಿಪಾಲ: ಎ.26 ರಂದು MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ ‘ROSE BUN HAIRSTYLE’ ಕಾರ್ಯಗಾರ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ), ಓರೇನ್ ಇಂಟರ್ನ್ಯಾಷನಲ್’ನಲ್ಲಿ ರೋಸ್ ಬನ್ ಕೇಶವಿನ್ಯಾಸ (ROSE BUN HAIRSTYLE) ಪ್ರಮಾಣಪತ್ರದೊಂದಿಗೆ ಕಾರ್ಯಗಾರ ಎ.26 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ನಡೆಯಲಿದೆ. ಎಲ್ಲರಿಗೂ ಭಾಗವಹಿಸಲು ಮುಕ್ತ ಅವಕಾಶವಿದೆ. ಶುಲ್ಕ: ರೂ. 499/-, ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ. ನಿಮ್ಮ ಸ್ಥಾನವನ್ನು ಪಡೆದುಕೊಳ್ಳಲು ಈಗಲೇ ನೋಂದಾಯಿಸಿ.ಓರೇನ್ ಇಂಟರ್ನ್ಯಾಷನಲ್, ಎಂಎಸ್‌ಡಿಸಿ ಕಟ್ಟಡ, 3 ನೇ ಮಹಡಿ, ಈಶ್ವರ್ ನಗರ, ಮಣಿಪಾಲ್ಮೊ: 81231650688123163935
ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ದೃಶ್ಯಕಲೆಯಲ್ಲಿ ಬ್ಯಾಚುಲರ್ ಆಫ್ವಿ ಜ್ಯುಯಲ್ ಆರ್ಟ್ಸ್ (ಬಿ.ವಿ.ಎ-ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ. ಪದ್ದತಿ) ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ […]
ಉಡುಪಿ:ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲಾಗಿದ್ದು, 2024-25 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6 ನೇ ತರಗತಿಗೆ ಸೇರ್ಪಡೆಗೆ ಅರ್ಜಿಆಹ್ವಾನಿಸಲಾಗಿದೆ. 5 ನೇ ತರಗತಿಯಲ್ಲಿ ಶೇ. 60 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ, ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ.ಒಳಗಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 3 ಕೊನೆಯ […]
ಉಡುಪಿ:ಜಮ್ಮು- ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಜಿಲ್ಲೆಯ ಪ್ರವಾಸಿಗರ ಮಾಹಿತಿ ಸಲ್ಲಿಸಲು ಸೂಚನೆ

ಉಡುಪಿ: ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿಗೆ ಕನ್ನಡಿಗರಿಬ್ಬರು ಬಲಿಯಾಗಿರುವುದು ವಿಷಾದನೀಯಸಂಗತಿಯಾಗಿದೆ. ಆದ್ದರಿಂದ ಜಮ್ಮು ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನಸುತ್ತಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (ಟೂರ್ ಆಪರೇರ‍್ಸ್ ಮತ್ತು ಟ್ರಾವೆಲ್ ಏಜೆಂಟ್ಸ್) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಹಾಗೂ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿ ಸಂಖ್ಯೆ: 080-43344334, 080-43344335, 080- 43344336 ಹಾಗೂ 080-43344342 ಗೆ ನೀಡುವಂತೆ […]