ಎ.27ರಂದು ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಅಮೃತ ಮಹೋತ್ಸವ ಸಮಿತಿ, ಕಾರ್ಯಾಲಯದ ಉದ್ಘಾಟನೆ

ಉಡುಪಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ 75 ವರ್ಷಗಳನ್ನು ಪೂರೈಸಿ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಆ ಪ್ರಯುಕ್ತ ಈಗಾಗಲೇ ಅಮೃತ ಮಹೋತ್ಸವ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯ ಉದ್ಘಾಟನೆ ಹಾಗೂ ಅಮೃತ ಮಹೋತ್ಸವ ಕಾರ್ಯಾಲಯದ ಉದ್ಘಾಟನೆ ಇದೇ ಏಪ್ರಿಲ್ 27ರಂದು ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ಚಂದಯ್ಯ ಹೆಗ್ಡೆ ಸಭಾಭವನದಲ್ಲಿ ನಡೆಯಲಿದೆ ಎಂದು ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 1950ರಲ್ಲಿ ಪ್ರಾರಂಭವಾದ ಹಿರಿಯಡಕ ಬೋರ್ಡ್ […]
ಮೂಡುಬಿದಿರೆ:ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಚಿಣ್ಣರ ಮೇಳ- 2025 ’ ಉದ್ಘಾಟನೆ

ಮೂಡುಬಿದಿರೆ: ‘ಮಕ್ಕಳಿಗೆ ಸಮಯ ನೀಡಿ , ಬೆನ್ತಟ್ಟಿ ಬೆಳೆಸಿ ’ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹೇಳಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರವು ಮೂಡುಬಿದಿರೆ ನಗರದ ಸ್ಕೌಟ್ಸ್ -ಗೈಡ್ಸ್ ಕನ್ನಡ ಭವನದಲ್ಲಿ ಸೋಮವಾರ ಆಯೋಜಿಸಿದ್ದ 34 ನೇ ವರ್ಷದ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ ಅಭಿನಯ ಪ್ರಧಾನ ‘ಚಿಣ್ಣರ ಮೇಳ – 2025’ ಉದ್ಘಾಟಿಸಿ ಅವರು ಮಾತನಾಡಿದರು. ‘ಬದುಕಿನಲ್ಲಿ ಎಲ್ಲರೂ ನಟರೇ. ಆದರೆ, ಅಭಿನಯ ವಿಭಿನ್ನ’. ಮಕ್ಕಳಿಗೆ […]
ಕುಂದಾಪುರ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಬೈಕ್ ಕದಿಯುವ ದೃಶ್ಯವೊಂದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಈ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ ಯೋಗೀಶ್ ಪೂಜಾರಿ ಎಂಬವರು ತಮ್ಮ ಬೈಕನ್ನು ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ಸಂಜೆ ಕೆಲಸ ಮುಗಿಸಿ ವಾಪಸ್ ರೈಲ್ವೆ ನಿಲ್ದಾಣಕ್ಕೆ ಬಂದ ಸಂದರ್ಭ ಬೈಕ್ ಕಾಣೆಯಾಗಿದೆ. ಕೂಡಲೆ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾದ ಸಿಸಿ ಕ್ಯಾಮೆರಾ ಗಳ ದೃಶ್ಯಾವಳಿಗಳನ್ನು ಚೆಕ್ ಮಾಡಿದಾಗ, 11 ಗಂಟೆ ಸುಮಾರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕನ್ನು […]
ಉಡುಪಿ:ಮಿಲಾಗ್ರೆಸ್ ಪಿಯು ಕಾಲೇಜಿನಲ್ಲಿ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ

ಉಡುಪಿ:ಉಡುಪಿಯ ಮಿಲಾಗ್ರೆಸ್ ಪಿಯು ಕಾಲೇಜಿನಲ್ಲಿ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭವಾಗಿದೆ. ಪಿಯುಸಿಯಲ್ಲಿ ಸೈನ್ಸ್ ವಿಭಾಗದಲ್ಲಿ PCMB+NEET ,PCMC,PCMS+JEE/CET ಕೋರ್ಸ್ ಗಳು, ಕಾಮರ್ಸ್ ವಿಭಾಗದಲ್ಲಿ, HEBA, CA/CS foundation, SEBA +UPSC /KPSC ಕೋಚಿಂಗ್ ,CEBA Banking Foundation ಕೋರ್ಸ್ ಗಳು, ಹಾಗೂ ಆರ್ಟ್ಸ್ ವಿಭಾಗದಲ್ಲಿ HEPS+ UPSC/ KPSC ಕೋಚಿಂಗ್ ಕೋರ್ಸ್ ಗಳು ಲಭ್ಯವಿದೆ. ಇಲ್ಲಿ ಕಲಿಯುವ ಮಕ್ಕಳಿಗೆ ಎಜುಕೇಶನ್ ಲೋನ್ ಸೌಲಭ್ಯ ಕೂಡ ಇದೆ. ಕಡಿಮೆ ಶುಲ್ಕದೊಂದಿಗೆ ಒಂದೇ ಸ್ಥಳದಲ್ಲಿ ಬಹು ಕೋರ್ಸ್‌ಗಳು ಲಭ್ಯ. […]
ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವ ಘಟನೆ ಖಂಡಿಸಿ ಪ್ರತಿಭಟನೆ

ಉಡುಪಿ: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಹಿಂದೂ ವಿರೋಧಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಉಡುಪಿ ನಗರ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ರಾಜ್ಯ ಸರಕಾರ ಹಿಂದೂ ಸಮಾಜದ ಮೇಲೆ ದಾಳಿ ಮಾಡಬೇಕೆಂಬ ಉದ್ದೇಶದಿಂದಲೇ ಸಿಇಟಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ. ಸರಕಾರ ಈ ದಬ್ಬಾಳಿಕೆಯನ್ನು ನಿಲ್ಲಿಸದಿದ್ದರೇ, ತಕ್ಕ ಉತ್ತರ ನೀಡಲು ಉಡುಪಿಯ ಜನತೆ ಸಿದ್ದರಿದ್ದಾರೆ ಎಂದು […]