ಉಡುಪಿ:ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಸೂಚನೆ

ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿಹೆಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯು ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ […]
ಉಡುಪಿ:ಡಾ. ರಾಜ್ ಕುಮಾರ್ ಅವರ ಮೇರುವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದರಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ವರನಟ ಡಾ. ರಾಜ್ ಕುಮಾರ್ ಅವರ ಮೇರುವ್ಯಕ್ತಿತ್ವ, ಕನ್ನಡಾಭಿಮಾನ, ಭಾಷಾಪ್ರೇಮ ಹಾಗೂಸಮಾಜಮುಖಿ ಕಾರ್ಯಗಳು ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಗುರುವಾರ ನಗರದ ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ […]
ಮಣಿಪಾದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ಎಂಡೋಸ್ಕೋಪಿಕ್ ಬೆನ್ನುಮೂಳೆಯ ಶಸ್ತ್ರ ಚಿಕಿತ್ಸೆ ಯಶಸ್ವಿ

ಮಣಿಪಾಲ: ತೀವ್ರ ಬೆನ್ನು ನೋವು ಮತ್ತು ಬಲಗಾಲಿನಲ್ಲಿ ತೀವ್ರ ನೋವು ಕಾಣಿಸಿಕೊಂಡು ನಡೆಯಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದ 34 ವರ್ಷದ ವ್ಯಕ್ತಿಯೊಬ್ಬರಿಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ಅಪರೂಪದ ಬೆನ್ನುಮೂಳೆಯ ಎಂಡೋಸ್ಕೋಪಿಕ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ರೋಗಿಗೆ ಎಂ ಆರ್ ಐ ಸ್ಕ್ಯಾನ್ ಮಾಡಿದಾಗ ಬೆನ್ನುಮೂಳೆಯ ನರ ಬೇರುಗಳನ್ನು ಸಂಕುಚಿತಗೊಳಿಸುವ ದೊಡ್ಡ ಸೊಂಟದ ಡಿಸ್ಕ್ ಹರ್ನಿಯೇಷನ್ ಕಂಡುಬಂದಿತ್ತು, ಇದು ಅವರಲ್ಲಿ ತೀವ್ರ ತರದ ನೋವಿಗೆ ಮೂಲವಾಗಿತ್ತು. ಈ ಪ್ರಕರಣವನ್ನು ನರಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ.ರಾಘವೇಂದ್ರ ನಾಯಕ್ […]
ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನ: ರಥೋತ್ಸವ ಸಂಭ್ರಮ.

ಉಡುಪಿ: ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಸಂಭ್ರಮ ಶ್ರೀ ಅಮ್ಮನವರ ಮಹಾ ಸನ್ನಿಧಿಯಲ್ಲಿ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮಗಳಾದ ಅಂಕುರಾರೋಪಣ, ಧ್ವಜಾರೋಹಣ, ರಾತ್ರಿ ಭೇರಿ ತಾಡನ, ಯಾಗಶಾಲಾ ಪ್ರವೇಶ, ಕೌತುಕ ಬಂಧನ, ಶಿಬಿಕಾಯನೋತ್ಸವ, ಸಿಂಹವಾಹನೋತ್ಸವ, ರಂಗಪೂಜೆ ಮತ್ತು ಪುಷ್ಪಕ ವಾಹನೋತ್ಸವ, “ಶ್ರೀ ಮನ್ಮಹಾರಥೋತ್ಸವ”, ಚೂರ್ಣೋತ್ಸವ, ಪ್ರಾತಃ ಅವಭೃತ, ಮೃಗಯಾ ವಿಹಾರ, ಪೂರ್ಣಾಹುತಿ, ಧ್ವಜಾವರೋಹಣ, ಕುಂಭಾಭಿಷೇಕ ಹಾಗೂ ಒಕುಲಿ ಉತ್ಸವವು ಧಾರ್ಮಿಕ ವಿಧಿ-ವಿಧಾನದ ಪ್ರಕಾರ ನಡೆಯಿತು. ವಿಜ್ರಂಭಣೆಯ ರಥೋತ್ಸವ ಮೆರವಣಿಗೆಯಲ್ಲಿ ಭಕ್ತಾದಿಗಳು ಪಾಲ್ಗೊಂಡರು […]