ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ ಅವರಿಗೆ ‘ವಿಕ್ರಮ’ ಪ್ರಶಸ್ತಿ ಪ್ರದಾನ.

ಉಡುಪಿ: ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿಯವರಿಂದ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ ‘ವಿಕ್ರಮ’ ಪ್ರಶಸ್ತಿಯನ್ನು ಹೆಮ್ಮಾಡಿ ಹಾಗೂ ಕಿರಿಮಂಜೇಶ್ವರದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಗಣೇಶ ಮೊಗವೀರ ಅವರಿಗೆ ಎ.25 ರಂದು ಉಡುಪಿ ರಾಜಾಂಗಣದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಶ್ರೀಗಳು ಪ್ರಶಸ್ತಿಪ್ರದಾನ ಮಾಡಿದರು. ಗಣೇಶ ಮೊಗವೀರರವರು ಹೆಮ್ಮಾಡಿಯಲ್ಲಿ ಜನತಾ ಪದವಿಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದಲ್ಲಿ ಜನತಾ ನ್ಯೂ ಇಂಗ್ಲೀಷ್ […]

ಉಡುಪಿ: ಪಹಲ್ಗಾಮ್’ನ ಭಯೋತ್ಪಾದಕ ದಾಳಿಯ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ನ ವತಿಯಿಂದ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ಉಡುಪಿಯ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮೊಂಬತ್ತಿಯನ್ನು ಬೆಳಗಿಸಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶೃದ್ದಾಂಜಲಿ ಅರ್ಪಿಸಲಾಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ ಕಾಶ್ಮೀರದಲ್ಲಿ ನಡೆದಂತಹ ಉಗ್ರರ ಅಟ್ಟಹಾಸದಿಂದ ದೇಶದ 140 ಕೋಟಿ ಜನ ತಲೆತಗ್ಗಿಸುವಂತಾಗಿದೆ. ಹೆಚ್ಚಿನ ಭದ್ರತೆ ಇರಬೇಕಾದ ಸ್ಥಳದಲ್ಲಿ […]

ಉಡುಪಿ:ಅರಿವು ಸಾಲ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ವತಿಯಿಂದ ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾಪ್ರಾಧಿಕಾರದಿಂದ ಸಿ.ಇ.ಟಿ / ನೀಟ್‌ನಲ್ಲಿ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಆನ್‌ಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳನ್ನು […]

ಉಡುಪಿ:ಜಿಲ್ಲಾ ಮಟ್ಟದ ಭಗವಾನ್ ಬುದ್ಧ ಜಯಂತಿ ಅರ್ಥಪೂರ್ಣ ಆಚರಣೆಗೆ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಜಿಲ್ಲಾ ಮಟ್ಟದಲ್ಲಿ ಮೇ 12 ರಂದು ನಡೆಯಲಿರುವ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮವನ್ನುವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ವ್ಯವಸ್ಥಿತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ನಡೆದ ಭಗವಾನ್ ಬುದ್ಧರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮವು ಮೇ 12 ರಂದು ಬೆಳಗ್ಗೆ 10.15 ಕ್ಕೆ ನಗರದ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ […]

ಉಡುಪಿ:ಎಚ್.ಎನ್.ಶೃಂಗೇಶ್ವರ ನಿಧನ

ಉಡುಪಿ:ನಿಟ್ಟೂರು ಪ್ರೌಢಶಾಲೆಯ ನಿವೃತ್ತ ಅಧ್ಯಾಪಕರೂ, ಯಕ್ಷಗಾನ ಕಲಾರಂಗದ ಜೊತೆ ಕಾರ್ಯದರ್ಶಿಯೂ ಆದ ಎಚ್. ಎನ್. ಶೃಂಗೇಶ್ವರ (63) ಶುಕ್ರವಾರ ಮುಂಜಾನೆ ಅಲ್ಪಕಾಲದ ಅಸೌಖ್ಯ ದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕೊಪ್ಪ ತಾಲೂಕಿನ ಮೇಗೂರಿನವರಾದ ಶೃಂಗೇಶ್ವರ್, ಬಾಲ್ಯದಲ್ಲಿ ಉಡುಪಿಗೆ ಬಂದು ಇಲ್ಲಿಯೆ ಬದುಕು ಕಟ್ಟಿಕೊಂಡವರು. ಪದವಿಯ ಬಳಿಕ ತಿರುಪತಿಯಲ್ಲಿ ಬಿಎಡ್ ಪದವಿ ಪಡೆದು ನಿಟ್ಟೂರು ಪ್ರೌಢ ಶಾಲೆಯಲ್ಲಿ ಸಂಸ್ಕೃತ- ಕನ್ನಡ ಅಧ್ಯಾಪಕರಾಗಿ ಮೂರು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಮೂರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. […]