ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಸಚಿವ ವಿ.ಸೋಮಣ್ಣ ಸೂಚನೆ

ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣವೇ, ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ […]

ಹೊಸದಿಲ್ಲಿ:ಗೌತಮ್ ಗಂಭೀರ್ ಗೆ ಬೆದರಿಕೆ ಇ-ಮೇಲ್: ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

ಹೊಸದಿಲ್ಲಿ: ಭಾರತದ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಮತ್ತು ಮಾಜಿ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರಿಗೆ ಬೆದರಿಕೆ ಇ-ಮೇಲ್ ಕಳುಹಿಸಿದ ಹಿನ್ನೆಲೆಯಲ್ಲಿ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಯನ್ನು ಗುಜರಾತ್ನ ಜಿಗ್ನೇಶ್ ಸಿನ್ಹ ಪರ್ಮಾರ್ ಎಂದು ಗುರುತಿಸಲಾಗಿದ್ದು, ಈತ ಮಾನಸಿಕ ಆರೋಗ್ಯ ಸಮಸ್ಯೆ ಹೊಂದಿದ್ದ ಎಂದು ಹೇಳಲಾಗಿದೆ. ಪರ್ಮಾರ್ ಈ ತಿಂಗಳ 22ರಂದು ಅಂದರೆ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳು 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ ದಿನವೇ ಗಂಭೀರ್ […]

ಉಡುಪಿ:ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಕಪಿಲ ಗೋ ಮಂದಿರದಲ್ಲಿ 7ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಅಭಿಯಾನ

ಉಡುಪಿ:ಪಶುಪಾಲನ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನದ ಕಪಿಲಾ ಗೋಶಾಲೆಯಲ್ಲಿ ಆಯೋಜಿಸಿದ್ದ 7 ನೇ ಸುತ್ತಿನ ಕಾಲು ಬಾಯಿ ಲಸಿಕೆ ಕಾರ್ಯಕ್ರಮವನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಗೋಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ, ಪ್ರಮುಖರಾದ ಶ್ರೀಮತಿ ಕುಸುಮ ನಾಗರಾಜ್, ವೈದ್ಯಾಧಿಕಾರಿಗಳಾದ ಶ್ರೀ ಪ್ರಶಾಂತ್ ಶೆಟ್ಟಿ ಅರ್ಚಕ ಅನೀಶ್ ಭಟ್, ಪ್ರಜ್ಞ ಆಂಗ್ಲ ಮಾಧ್ಯಮ […]