ಜೈಪುರ:IPL 2025-ವಿಶ್ವ ದಾಖಲೆ ನಿರ್ಮಿಸಿದ 14ರ ಹರೆಯದ ವೈಭವ್ ಸೂರ್ಯವಂಶಿ

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೀಗೆ ಹೊಸ ಇತಿಹಾಸ ನಿರ್ಮಿಸಿದ್ದು 14 ವರ್ಷದ ವೈಭವ್ ಸೂರ್ಯವಂಶಿ . ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ ಅತೀ ವೇಗವಾಗಿ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಟಿ20 […]

ಮಂಗಳೂರು – ಸುಬ್ರಹ್ಮಣ್ಯ ರೈಲು ನಿಲ್ದಾಣಗಳಲ್ಲಿ ಮೂಲ ಸೌಕರ್ಯಗಳ ಕೊರತೆ; ಪ್ರಯಾಣಿಕರಿಗೆ ತೀವ್ರ ಸಮಸ್ಯೆ.!

ಮಂಗಳೂರು: ಮಂಗಳೂರು – ಸುಬ್ರಹ್ಮಣ್ಯ ರೈಲು ನಿಲ್ದಾಣಗಳು ಎದುರಿಸುತ್ತಿರುವ ಮೂಲ ಸೌಕರ್ಯಗಳ ಕೊರತೆಯನ್ನು ನಿವಾರಿಸುವಂತೆ ರೈಲು ಪ್ರಯಾಣಿಕರು ಆಗ್ರಹಿಸಿದ್ದಾರೆ. ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಆದರೆ ನಾನಾ ನಿಲ್ದಾಣಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ ಎಂದು ಪ್ರಯಾಣಕರು ದೂರಿದ್ದಾರೆ. ಮಂಗಳೂರು – ಸುಬ್ರಹ್ಮಣ್ಯ ನಡುವಿನ ನಾನಾ ರೈಲು ನಿಲ್ದಾಣಗಳಲ್ಲಿ ರಾತ್ರಿ ಸಮಯದಲ್ಲಿ ಮತ್ತು ಅತೀ ಮುಂಜಾನೆ ಬೆಳಕಿನ ವ್ಯವಸ್ಥೆ ಇಲ್ಲದ ಕಾರಣದಿಂದಾಗಿ ಪ್ರಯಾಣಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ನಿಲ್ದಾಣದ ವಿಸ್ತರಣೆ, […]

ಉಡುಪಿ: ಅಭಿಲಾಷ್ ಅವರಿಗೆ ಡಾಕ್ಟರೇಟ್ ಪದವಿ

ಉಡುಪಿ: ಅಭಿಲಾಷ್ ರವರು ಮಣಿಪಾಲ್ ಸ್ಕೂಲ್ ಆಫ್ ಕಾಮರ್ಸ್ ಆಂಡ್ ಎಕಾನಮಿಕ್ಸ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲದ ಪ್ರಾಧ್ಯಾಪಕರು ಹಾಗೂ ಪ್ರಭಾರ ನಿರ್ದೇಶಕರಾದ ಡಾ. ಸಂದೀಪ್ ಎಸ್ ಶಣೈ ಇವರ ಮಾರ್ಗದರ್ಶನದಲ್ಲಿ ಮತ್ತು ಡಿಪಾರ್ಟ್ಮೆಂಟ್ ಆಫ್ ಡೇಟಾ ಸೈನ್ಸ್ ಆಂಡ್ ಕಂಪ್ಯೂಟರ್ ಅಪ್ಲಿಕೇಶನ್, ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲದ ಸಹಪ್ರಾಧ್ಯಾಪಕರಾದ ಡಾ. ದಶರಥರಾಜ್ ಕೆ ಶೆಟ್ಟಿ ಇವರ ಸಹಮಾರ್ಗದರ್ಶನದಲ್ಲಿ ಮಂಡಿಸಿದ “ದಿ ಗ್ರೀನ್ ಬಾಂಡ್ ಫಿನಾಮಿನನ್: ಫ್ರಮ್ ಇಶ್ಯೂಯನ್ಸ್ ಆಂಡ್ ಪರ್ಫಾರ್ಮೆನ್ಸ್ […]

ಉಡುಪಿ:ಪರಿಶಿಷ್ಟ ಜಾತಿಯ ಒಳಮೀಸಲಾತಿ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷಾ ಕಾರ್ಯವನ್ನು ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ,ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಪರಿಶಿಷ್ಟ ಜಾತಿ/ಉಪಜಾತಿ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ, ಮಾತನಾಡುತ್ತಿದ್ದರು. ಪರಿಶಿಷ್ಟ […]

ಉಡುಪಿ:ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಅರ್ಹತಾ ಆಧಾರದ ಮೇಲೆಉದ್ಯೋಗಗಳನ್ನು ಕಲ್ಪಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಕುರಿತು ಕೈಗಾರಿಕೋದ್ಯಮಿ ಗಳೊಂದಿಗೆ ನಡೆದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಡಾ. ಸರೋಜಿನಿ ಮಹಷಿ ವರದಿಯಂತೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಗಳಲ್ಲಿ ಎ.ಬಿ ಮತ್ತು ಸಿ ವರ್ಗದ ಹುದ್ದೆಗಳಿಗೆ […]