ಮೂರು ತಿಂಗಳ ಗೃಹಲಕ್ಷ್ಮಿ ಹಣ ಮೇ ತಿಂಗಳಲ್ಲಿ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬಾಕಿ ಉಳಿದಿರುವ ಮೂರು ತಿಂಗಳ ಜನವರಿ ಫೆಬ್ರವರಿ ಮಾರ್ಚ್ ಗ್ರಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ ಒಂದು ವಾರ ಒಂದು ತಿಂಗಳ ಹಣ ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಉಡುಪಿ:ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪ್ರತಿಯೊಬ್ಬ ಫಲಾನುಭವಿಗಳು ಪಡೆಯುವಂತೆ ನೋಡಿಕೊಳ್ಳಿ :ಅಶೋಕ್ ಕೊಡವೂರು

ಉಡುಪಿ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯ ಪ್ರತಿಯೊಬ್ಬ ಅರ್ಹರಿಗೂ ಇದರ ಲಾಭ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಯಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಬಹುತೇಕ ಅರ್ಹ […]
ಮಣಿಪಾಲ: ವೈಶ್ಯವಾಣಿ ಸಮುದಾಯಕ್ಕೆ ಕೂಡಲೇ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಧರಣಿ

ಉಡುಪಿ: ವೈಶ್ಯವಾಣಿ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರ್ಪಡೆಗೊಳಿಸಿದ ಸರಕಾರಿ ಆದೇಶದಂತೆ ಗಜೇಟ್ ನೋಟಿಫಿಕೇಶನ್ ಹೊರಡಿಸಿ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ವೈಶ್ಯವಾಣಿ ಸಮಾಜ ಸಮುದಾಯದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಧರಣಿ ನಡೆಸಿದರು. ನೂರಾರು ಸಂಖ್ಯೆ ಸೇರಿದ್ದ ವೈಶ್ಯವಾಣಿ ಸಮುದಾಯದವರು ಕೂಡಲೇ ಒಬಿಸಿ ಜಾತಿ ಪ್ರಮಾಣ ವಿತರಣೆ ಮಾಡಬೇಕು. ಸರಕಾರಿ ಆದೇಶದಂತೆ ವೈಶ್ಯವಾಣಿ ಸಮುದಾಯವನ್ನು ಒಬಿಸಿಗೆ ಸೇರ್ಪಡೆಗೊಳಿಸಿ ಎರಡು ವರ್ಷಗಳೇ ಕಳೆದಿದೆ. ಆದರೂ ನಮ್ಮ ಸಮುದಾಯದ ಬಡ ವಿದ್ಯಾರ್ಥಿಗಳಿಗೆ […]
ಕಾರ್ಕಳ: ಅಜೆಕಾರು ಕೊಲೆ ಪ್ರಕರಣ – ಆರೋಪಿ ಪ್ರತಿಮಾಳ ಜಾಮೀನು ಅರ್ಜಿ ಮತ್ತೆ ತಿರಸ್ಕೃತ.

ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮೃತರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮತ್ತೊಮ್ಮೆ ತಿರಸ್ಕರಿಸಿ ಮಂಗಳವಾರ ಆದೇಶ ನೀಡಿದೆ. ಕೆಲವು ದಿನಗಳ ಹಿಂದೆ ಪ್ರಕರಣದ ಇನ್ನೋರ್ವ ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಕಳೆದ ವಾರ ಪ್ರತಿಮಾ ಜಾಮೀನು ಕೋರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ […]
ಹೆಬ್ರಿ ಜೆಸಿಐ ವತಿಯಿಂದ ಬೇಸಗೆ ಶಿಬಿರ

ಹೆಬ್ರಿ: ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊಂಡಾಗ ಮಕ್ಕಳ ವ್ಯಕ್ತಿತ್ವ ವಿಕಸನವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಇಂತಹ ಬೇಸಿಗೆ ಶಿಬಿರದಲ್ಲಿ ಸೇರಿಸುವ ಮೂಲಕ ಮಕ್ಕಳನ್ನು ಕ್ರಿಯಾತ್ಮಕವಾಗಿ ತೊಡೆಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೆಬ್ರಿ ಜೇಸಿಐ ಪೂರ್ವಾಧ್ಯಕ್ಷ ರವೀಂದ್ರನಾಥ್ ಶೆಟ್ಟಿ ಹೇಳಿದರು. ಅವರು ಹೆಬ್ರಿ ಜೆಸಿಐ ನೇತೃತ್ವದಲ್ಲಿ ಚಾಣಕ್ಯ ಎಜುಕೇಶನ್ ಕಲ್ಚರ್ ಅಕಾಡೆಮಿ ಹೆಬ್ರಿ ಇವರ ಸಹಯೋಗದಲ್ಲಿ ನಡೆದ ಮೂರು ದಿನಗಳ ಬೇಸಗೆ ಶಿಬಿರಲ್ಲಿ ಭಾಗವಹಿಸಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಹೆಬ್ರಿ ಜೆಸಿಐ ಅಧ್ಯಕ್ಷೆ ಸೋನಿ ಪಿ ಶೆಟ್ಟಿ ವಹಿಸಿ […]