ಮೂಡುಬಿದಿರೆ:ಯುಪಿಎಸ್‌ಸಿ ನಡೆಸುವ ರಾಷ್ಟ್ರಮಟ್ಟದ ಎನ್‌ಡಿಎ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ: 25 ವಿದ್ಯಾರ್ಥಿಗಳು ಉತ್ತೀರ್ಣ

ವಿದ್ಯಾಗಿರಿ: ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಮೂಲಕ 2025ರ ಎಪ್ರಿಲ್‌ನಲ್ಲಿ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 25 ವಿದ್ಯಾರ್ಥಿಗಳು ತೇರ್ಗಡೆಯಾಗಿ, ರಾಷ್ಟç ಮಟ್ಟದ ಗಮನವನ್ನು ಆಳ್ವಾಸ್ ಕಾಲೇಜಿನೆಡೆಗೆ ಸೆಳೆದಿದ್ದಾರೆ. ಬಾಬು ಸಿದ್ದಲಿಂಗಪ್ಪ ಗೌರೀ, ಬಸವರಾಜ ಕರೆಪ್ಪ ಪೂಜೇರಿ, ಪುನೀತ್ ಕುಮಾರ್ ಬಿಜಿ, ಸಿದ್ಧಾಂತ್ ಎಸ್ ಮಠಪತಿ, ಆದಿತ್ಯ, ನಿಖಿಲ್ ಭಾಸ್ಕರ್ ಭಟ್, ಆಕಾಶ್ ಪೂಜಾರ್, ಕೇಶವ ಬೂಬ್, ರೋಷನ್, ವೈಭವ್ ಪಿವಿ, ಮೋಹಿತ್ ಕುಮಾರ್, ಪ್ರಣವ್ […]

ಎಸೆಸೆಲ್ಸಿ ಫಲಿತಾಂಶ ಪ್ರಕಟ (2025): ದ.ಕ.ಜಿಲ್ಲೆ ರಾಜ್ಯಕ್ಕೆ ಪ್ರಥಮ, ಉಡುಪಿ ದ್ವಿತೀಯ.

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2024-25ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಗಳಿಸಿದೆ. ಕಲಬುರಗಿ ಜಿಲ್ಲೆ ಕೊನೆ ಸ್ಥಾನ ಗಳಿಸಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು […]

ಉಡುಪಿ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ “ವೋಗ್ ವಿಸ್ಟಾ 2k25” ಫ್ಯಾಶನ್ ಶೋ ಕಾರ್ಯಕ್ರಮ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನ ಫ್ಯಾಶನ್ ಡಿಸೈನಿಂಗ್ ವಿಭಾಗದಿಂದ ವೋಗ್ ವಿಸ್ಟಾ 2k25 ಎನ್ನುವ ಫೆಸ್ಟ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಉಡುಪುಗಳ ಪ್ರದರ್ಶನ ಮತ್ತು ರ್‍ಯಾಂಪ್ ವಾಕ್ ನಡೆಯಿತು. ಅನೇಕ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಶರಣ್ ಚಿಲಿಂಬಿ ಡ್ಯಾನ್ಸರ್ ಶ್ರೀಮತಿ ಎಂ.ಎಸ್ ನಾಗವೇಣಿ ನಾಯಕ್ ಪ್ರೊಫೆಸರ್, ವಿಶೇಷ ಅತಿಥಿಯಾಗಿ ಅಜಿಮಾಲ್ ನಟಿ, ಮಾಡೆಲ್ ಹಾಗೂ ಕರಣ್ […]

ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ; ಯಾತ್ರಿಕರಿಗೆ ವಿಶೇಷ ಭದ್ರತಾ ವ್ಯವಸ್ಥೆ.!

ರುದ್ರಪ್ರಯಾಗ, ಮೇ 02: ಇಂದಿನಿಂದ ಚಾರ್​ಧಾಮ್ ಯಾತ್ರೆ ಆರಂಭಗೊಳ್ಳಲಿದೆ. ಮುಂದಿನ 6 ತಿಂಗಳ ಕಾಲ ಯಾತ್ರಿಕರು ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತದೆ. ಚಾರ್‌ಧಾಮ್ ಯಾತ್ರೆಯು ಜಗತ್ತಿನ ಅತ್ಯಂತ ಪವಿತ್ರ ತೀರ್ಥಯಾತ್ರೆಗಳಲ್ಲಿ ಒಂದಾಗಿದ್ದು, ಕೇದಾರನಾಥ ಧಾಮವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಮತ್ತು ಇದು ಶಿವನಿಗೆ ಅರ್ಪಿತವಾಗಿದೆ. ಬದರಿನಾಥ ಧಾಮವು ವಿಷ್ಣುವಿಗೆ ಅರ್ಪಿತವಾಗಿದೆ. ಗಂಗೋತ್ರಿ ಧಾಮವು ಗಂಗಾ ಮಾತೆಗೆ ಸಮರ್ಪಿತವಾಗಿದೆ ಮತ್ತು ಯಮುನೋತ್ರಿಯು ಯಮುನೆಗೆ ಸಮರ್ಪಿತವಾಗಿದೆ. ಈ ಬಾರಿ ಚಾರ್‌ಧಾಮ್ ಯಾತ್ರೆಗೆ ವಿಶೇಷ ಭದ್ರತಾ […]

ಕನ್ನರ್ಪಾಡಿಯಲ್ಲಿ ನೂತನ ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ ಉದ್ಘಾಟನೆ

ಉಡುಪಿ: ಯಾವುದೇ ಪ್ರಕಾರದ ಕಲೆಯನ್ನು ಉಳಿಸಿ ಬೆಳೆಸಬೇಕಾದರೆ ಕಲಾಸಕ್ತರನ್ನು ತೊಡಗಿಸಿಕೊಳ್ಳುವುದು ಅತೀ ಮುಖ್ಯ. ಈ ನಿಟ್ಟಿನಲ್ಲಿ ಯಕ್ಷಗಾನಕ್ಕೆ ಸಂಬಂಧಿಸಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರೋತ್ಸಾಹ ಧಾರ್ಮಿಕ ಕೇಂದ್ರಗಳಿಂದ ಸಿಗುತ್ತಿರುವುದು ಸಂತೋಷದ ಸಂಗತಿ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಬುಧವಾರ ಉಡುಪಿ ಕನ್ನರ್ಪಾಡಿಯ ಶ್ರೀ ಜಯದುರ್ಗಾ ಪರಮೇಶ್ವರಿ ದೇವಸ್ಥಾನದ ಸಹಯೋಗದಲ್ಲಿ ನೂತನವಾಗಿ ಆರಂಭಿಸಲಾದ `ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ಯನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಈ ಹಿಂದೆ ಕಲೆಗಳಿಗೆ […]