ಇಂದು ಬೆಂಗಳೂರಲ್ಲಿ ಆರ್‌ಸಿಬಿ-ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ; ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ.!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಹುನಿರೀಕ್ಷಿತ ಹೈವೋಲ್ಟೇಜ್ ಪಂದ್ಯ ಇಂದು ನಡೆಯಲಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳು ಸೆಣಸಾಡಲಿವೆ. ಆದರೆ, ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಭೀತಿ ಎದುರಾಗಿದೆ. ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ನಗರದಲ್ಲಿ ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣವಿದೆ. ಸಂಜೆ ಮಳೆ ಸುರಿಯುವ ಸಾಧ್ಯತೆ ಇದೆ. ಶುಕ್ರವಾರದ ಅಭ್ಯಾಸದ ಶಿಬಿರಕ್ಕೂ ಮಳೆ ಅಡ್ಡಿಪಡಿಸಿತ್ತು. ಶನಿವಾರ ಕೂಡ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. […]
ರಾಷ್ಟ್ರಪತಿ ಪುರಸ್ಕೃತ ವಿದ್ವಾನ್ ರಾಜಾ ಎಸ್ ಗಿರಿ ಆಚಾರ್ಯರಿಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ಪ್ರದಾನ

ಉಡುಪಿ: ಶ್ರೀಕ್ಷೇತ್ರ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್ ಗಿರಿ ಆಚಾರ್ಯ ಅವರಿಗೆ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದರು. ರಾಷ್ಟ್ರದ ಉದ್ದಗಲದಲ್ಲಿ ಸ್ಥಾಪಿತವಾಗಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪ್ರಧಾನ ಅಧಿಕಾರಿಗಳಾಗಿ ಹಾಗೂ ದೇಶದ ಪ್ರತಿಷ್ಠಿತ ವಿದ್ವಾಂಸರಾಗಿ, ವಿದ್ವಾಂಸರ ಪೋಷಣೆ , ಗ್ರಂಥಗಳ ಸಂರಕ್ಷಣೆ -ಸಂಶೋಧಕರಾಗಿ ಆಚಾರ್ಯರು ಅತ್ಯಂತ ಶ್ರೇಷ್ಠವಾದ ಸೇವೆಯನ್ನು ಸಲ್ಲಿಸಿದ್ದಾರೆ. ಅವರು ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ […]
ಉಡುಪಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ: ದ.ಕ ಜಿಲ್ಲೆಯ ಬಜೆಯ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಬಿಜೆಪಿ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದೊದಗಿದೆ. ಸುಹಾಸ್ ಶೆಟ್ಟಿಯ ಹತ್ಯೆಯಿಂದ ಬಹಳ ನೋವಾಗಿದೆ. ಮತಬ್ಯಾಂಕ್ ರಾಜಕಾರಣ, ಮುಸ್ಲಿಂ ಒಲೈಕೆಯಿಂದಾಗಿ ಈ ಸರಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು […]
ಎಸ್.ಎಸ್.ಎಲ್.ಸಿ ಫಲಿತಾಂಶ: ಕಾರ್ಕಳ ಜ್ಞಾನಸುಧಾದ ದ ಸ್ವಸ್ತಿ ಕಾಮತ್ ಗೆ 625 ಕ್ಕೆ 625 ಅಂಕ.

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಸಾಲಿಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವಿದ್ಯಾರ್ಥಿನಿ ಕೂಡ ಸೇರ್ಪಡೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಗಣಿತ ನಗರದ ಜ್ಞಾನಸುಧಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಸ್ವಸ್ತಿ ಕಾಮತ್ 625 ಮಾರ್ಕ್ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: 8 ಮಂದಿ ಶಂಕಿತರು ಪೊಲೀಸರ ವಶಕ್ಕೆ.

ಮಂಗಳೂರು, ಮೇ 03: ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಶ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. […]