ಉಡುಪಿ: ಎಸೆಸೆಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳು.

ಉಡುಪಿ, ಮೇ 2: ಕಾರ್ಕಳ ತಾಲೂಕು ಕುಕ್ಕಂದೂರು ಗಣಿತ ನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸ್ವಸ್ತಿ ಕಾಮತ್ ಅವರು ಇಂದು ಪ್ರಕರಣಗೊಂಡ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯದ 22 ಮಂದಿಯೊಂದಿಗೆ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ. ಸ್ವಸ್ತಿ ಕಾಮತ್ ಅವರು ಎಲ್ಲಾ ಆರು ವಿಷಯಗಳಲ್ಲೂ ಗರಿಷ್ಠ ಅಂಕ ಗಳಿಸಿದರು. ಉಳಿದಂತೆ ಜಿಲ್ಲೆಯ ಇಬ್ಬರು 624, ಐವರು 623 ಹಾಗೂ ಏಳು ಮಂದಿ 622 ಅಂಕಗಳನ್ನು ಗಳಿಸಿದ್ದಾರೆ. ಜಿಲ್ಲೆಯಲ್ಲಿ ಗರಿಷ್ಠ 15 […]

ಕಲಾಮಯಂ ಸಾಂಸ್ಕೃತಿಕ ಸಂಘಟನೆ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲೆಯಂತಹ ಶ್ರೀಮಂತ ಜಾನಪದ ಸಂಸ್ಕೃತಿಯನ್ನು ಹೊಂದಿರುವ ನಾಡಿನಲ್ಲಿ ಜಾನಪದ, ಸಾಂಸ್ಕೃತಿಕ ತಂಡಗಳಿಗೆ ಉತ್ತಮ ಭವಿಷ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರು ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರೂ ಆಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಬುಧವಾರ ಮಣಿಪಾಲದ ವಿ.ಪಿ.ನಗರದ ತಸ್ವ ಕಟ್ಟಡದ 2ನೇ ಮಹಡಿಯಲ್ಲಿ ಯುವ ಜಾನಪದ ಕಲಾವಿದ ಹೇಮಂತ್ ಅವರು ಹುಟ್ಟುಹಾಕಿರುವ `ಕಲಾಮಯಂ ‘ ಸಂಘಟನೆಯ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷನಾಗಿ […]

ಉಡುಪಿ:ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ ರೂ. 9000 ಗೌರವಧನದ ನೆಲೆಯಲ್ಲಿ “ನಗರ ಪುನರ್ವಸತಿ ಕಾರ್ಯಕರ್ತರ” (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಮಾಸಿಕ 9,000 ಗೌರವಧನದ ನೆಲೆಯಲ್ಲಿ “ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ” (ವಿ.ಆರ್.ಡಬ್ಲ್ಯೂ) ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. […]

ಉಡುಪಿ:ವೇದದ ಸಾರವನ್ನು ಜಗತ್ತಿಗೆ ಸಾರಿದವರು ಶಂಕರಾಚಾರ್ಯರು : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಸಮಾಜದ ಏಳಿಗೆಗಾಗಿ ಹಾಗೂ ಧರ್ಮದ ರಕ್ಷಣೆಗಾಗಿ ದೇಶದಾದ್ಯಂತ ಸಂಚರಿಸಿ, ವೇದದ ಸಾರವನ್ನು ಜಗತ್ತಿಗೆ ಸಾರಿರುವ ಶಂಕರಾಚಾರ್ಯರ ಜೀವನ ಸಾಧನೆ ಪ್ರತಿಯೊಬ್ಬರಿಗೂ ದಾರಿದೀಪವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯಯ ಭಾವಚಿತ್ರಕ್ಕೆ ಪುಸ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. […]

ಉಡುಪಿ:ಇಂಚರ ಸರ್ಜಿಕಲ್ ಕ್ಲಿನಿಕ್ ನಿಂದ 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ:ಶ್ರೀ ಶಂಕರ ಜಯಂತಿಯ ಪ್ರಯುಕ್ತ ಶ್ರೀ ಎಲ್ಲೂರು ಲಕ್ಷ್ಮೀನಾರಾಯಣ ರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡುಪಿ ಇವರ ವತಿಯಿಂದ ಎಂಟನೇ , ಒಂಬತ್ತನೇ, ಹತ್ತನೇ ಹನ್ನೊಂದನನೇ ಹಾಗೂ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಶ್ರೀ ಶಂಕರಾಚಾರ್ಯರ ಬಗ್ಗೆ ಪ್ರಬಂಧ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕವಾಗಿ ಶಾಲಾ ಬ್ಯಾಗ್ ಸಹಿತ ಪುಸ್ತಕ, ನೀರಿನ ಸ್ಟೀಲ್ ಬಾಟಲ್, ಕಂಪಾಸ್ ಬಾಕ್ಸ್ ಉಳ್ಳ ರೂ 1000 ಮೌಲ್ಯದ ಕಿಟ್ಟನ್ನು ವಿತರಿಸಲಾಯಿತು. ಈ […]