ರಂಗಭೂಮಿ ಆನಂದೋತ್ಸವ : ಟಿ. ಅಶೋಕ್ ಪೈ ಅವರಿಗೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ

ಉಡುಪಿ: ರಂಗಭೂಮಿ ಉಡುಪಿ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಹಲವಾರು ಅವಕಾಶಗಳಿವೆ. ದೇಶಿಯ ಸಂಘಸಂಸ್ಥೆಗಳಲ್ಲದೆ ವಿದೇಶಿ ಅನುದಾನಗಳ ಮೂಲಕ ರಂಗಭೂಮಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಂಗಭೂಮಿ ಚಿಂತನೆ ನಡೆಸಬೇಕು ಎಂದು ಡಾ.ಟಿಎಂಎ ಪೈ ಪ್ರತಿಷ್ಠಾನದ ಅಧ್ಯಕ್ಷ ಟಿ.ಅಶೋಕ್ ಪೈ ಹೇಳಿದರು. ಅವರು ಭಾನುವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ನಡೆದ ‘ರಂಗಭೂಮಿ ಆನಂದೋತ್ಸವ’ ಕಾರ್ಯಕ್ರಮದಲ್ಲಿ ಉಡುಪಿಯ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ‘ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ […]
ಉಡುಪಿ:ಸಲಹಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ : ಅರ್ಜಿ ಆಹ್ವಾನ

ಉಡುಪಿ: ರಾಜ್ಯದಲ್ಲಿರುವ ಅಲೆಮಾರಿ ಜನಾಂಗದವರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಶಿಫಾರಸ್ಸಿನನ್ವಯ ರಾಜ್ಯದ ಅಲೆಮಾರಿ ಜನಾಂಗದವರಿಗೆ ಮೀಸಲಾತಿ ಸೌಲಭ್ಯ ಹಾಗೂ ಕೇಂದ್ರ ಸರ್ಕಾರದ ಅರ್ಥಿಕ ನೆರವಿನೊಂದಿಗೆ ಅಲೆಮಾರಿ ಜನಾಂಗದ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ಅಲೆಮಾರಿ ಜನಾಂಗದವರ ಸಲಹಾ ಸಮಿತಿಯನ್ನು ರಚಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಪ್ರಗತಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಲು ಸಲಹಾ ಸಮಿತಿಯನ್ನು ಪುನರ್ ರಚಿಸಿ ಜಿಲ್ಲಾ ಮಟ್ಟದ ಮತ್ತು ತಾಲೂಕು ಅಲೆಮಾರಿ ಜನಾಂಗದ […]
ಮಣಿಪಾಲ: MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ ‘B.Voc in COSMETOLOGY’ ಕೋರ್ಸ್

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್’ನಲ್ಲಿ ಔದ್ಯೋಗಿಕ ಕ್ಷೇತ್ರದಲ್ಲಿ ತುಂಬಾಅಗತ್ಯವಿರುವ B.voc in Cosmetology ಕೋರ್ಸ್ ಆರಂಭಗೊಂಡಿದೆ. ಇದು ಮೂರು ವರ್ಷ ಪದವಿಯಾಗಿದೆ. ಬ್ಯೂಟಿ, ಹೇರ್ ಸ್ಟೈಲ್, ಸ್ಪಾ, ಮೇಕ್ ಕಪ್, ಥೆರಪಿ ಸೇರಿದಂತೆ ವಿವಿಧ ಸೌಂದರ್ಯಕ್ಷೇತ್ರದ ಕುರಿತು ಇಲ್ಲಿ ತರಬೇತಿ ನೀಡಲಾಗುತ್ತದೆ. ಈ ಕೋರ್ಸ್ ಮಾಡಿದವರಿಗೆಶೇ.100 ಉದ್ಯೋಗ ಗ್ಯಾರಂಟಿಯನ್ನೂ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಲೋನ್ ಸೌಲಭ್ಯ ಮತ್ತು ಹಾಸ್ಟೆಲ್ ಸೌಲಭ್ಯವನ್ನೂ ನೀಡಲಾಗುತ್ತದೆ. ಈ ಕೋರ್ಸ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೂಡಲೇ ಸಂಪರ್ಕಿಸಿ 8123165068, 8123163935
ಉಡುಪಿ:ಮೇ.8 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 8 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, […]