ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಉದ್ಯಾವರ ಗ್ರಾಮದ ಗಣೇಶ ನಗರ ನಿವಾಸಿ ಅಶೋಕ(47) ಎಂಬ ವ್ಯಕ್ತಿಯು 2023 ರ ಜೂನ್ 01 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಶರೀರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಉಪನಿರೀಕ್ಷಕರು ಮೊ.ನಂ: 9480805449, ವೃತ್ತ ನಿರೀಕ್ಷಕರು ಮೊ.ನಂ: […]
ಉಡುಪಿ: ದೇಶದ ಸೈನಿಕರ ಶೌರ್ಯ, ಪರಾಕ್ರಮಕ್ಕೆ ಅಭಿನಂದನೆ- ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ: ಭಾರತದ ಸೈನಿಕರ ಶೌರ್ಯ ಪರಾಕ್ರಮ ಮತ್ತು ಸಾತ್ವಿಕ ನಿಷ್ಠೆಯನ್ನು ಮೆಚ್ಚುತ್ತೇವೆ. ಅವರ ಈ ಸಾಧನೆಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ. ಸೈನಿಕರ ಒಂದು ಉದ್ದೇಶ, ಕಾರ್ಯ ಸಫಲವಾಗಿದ್ದು ಅದಕ್ಕಾಗಿ ಶ್ರೀಕೃಷ್ಣಮುಖ್ಯಪ್ರಾಣರಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದೇವೆ. ಎಲ್ಲವೂ ಶಾಂತಿಯುತವಾಗಿ ನಡೆಯಲಿ. ದೇಶ ಸುರಕ್ಷತವಾಗಿರಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಶ್ರೀಗಳು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಆರ್ಸಿಬಿಗೆ ದೊಡ್ಡ ಆಘಾತ; ಟೂರ್ನಿಯಿಂದ ಹೊರಬಿದ್ದ ಪ್ರಮುಖ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್.!

ಈ ವರುಷ ಟಾಟಾ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಪ್ಲೇಆಫ್‌ಗೇರಲು ತುದಿಗಾಲಿನಲ್ಲಿ ನಿಂತಿದೆ. ಇದುವರೆಗೆ ಆಡಿರುವ 11 ಪಂದ್ಯಗಳ ಪೈಕಿ 8 ಪಂದ್ಯಗಳನ್ನು ಗೆದ್ದು 3 ಪಂದ್ಯಗಳಲ್ಲಿ ಸೋತಿರುವ ಆರ್ಸಿಬಿ 16 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಪ್ರಸ್ತುತ 2ನೇ ಸ್ಥಾನದಲ್ಲಿದೆ. ಇದೀಗ ಪ್ಲೇಆಫ್‌ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕೆಂದರೆ ಆರ್ಸಿಬಿ ತನ್ನ ಮುಂದಿನ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕಿದೆ. ಆದರೆ ಈ ನಡುವೆ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದೆ. ತಂಡದ ಪ್ರಮುಖ ಬ್ಯಾಟರ್ […]