ಉಡುಪಿ:IND-PAK WAR:ಮಲ್ಪೆಯಲ್ಲಿ ಮೊಳಗಿದ ಸೈರನ್‌.!

ಉಡುಪಿ: ಭಾರತ-ಪಾಕಿಸ್ಥಾನ ನಡುವಿನ ಯುದ್ಧಭೀತಿಯ ಮುನ್ನೆಚ್ಚರಿಕೆ ಕ್ರಮವಾಗಿ ಮಲ್ಪೆಯ ಬಾಪುತೋಟದಲ್ಲಿರುವ ಉಡುಪಿ ಕೊಚ್ಚಿನ್‌ ಶಿಪ್‌ಯಾರ್ಡ್‌ನಲ್ಲಿ ಅಗ್ನಿಶಾಮಕ ದಳದಿಂದ ನಾಗರಿಕ ರಕ್ಷಣಾ ಅಣಕು ಕಾರ್ಯಾಚರಣೆ ನಡೆಸಲಾಯಿತು. ಸಂಜೆ ಸುಮಾರು 4 ರ ವೇಳೆಗೆ ಸಂಸ್ಥೆಯ ಸೈರನ್‌ ಮೊಳಗತೊಡಗಿದ್ದು, ಕೂಡಲೇ ಅಗ್ನಿಶಾಮಕ ದಳದವರು ಆಗಮಿಸಿ ವಿದ್ಯುತ್‌ ಹಾಗೂ ಗ್ಯಾಸ್‌ ಸಂಪರ್ಕವನ್ನು ಕಡಿತಗೊಳಿಸಿದರು. ಕರ್ತವ್ಯ ನಿರತರಾಗಿದ್ದವರನ್ನು ಕೂಡಲೇ ಸುರಕ್ಷಿತ ಸ್ಥಳಕ್ಕೆ ರವಾನಿಸಿ ಎಷ್ಟು ಮಂದಿ ಇದ್ದಾರೆ ಎಂಬ ಮಾಹಿತಿ ಪಡೆದು ಉಳಿದವರಿಗೆ ಒಳಭಾಗದಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಅವರನ್ನು ಪತ್ತೆ ಹಚ್ಚಲಾಯಿತು. […]

Ind-Pak War: ಭಾರತದ ದಾಳಿಗೆ ರಾತ್ರೋ ರಾತ್ರಿ ಪಾಕಿಸ್ತಾನದ ಮೂರು ಏರ್ ಬೇಸ್ ಉಡಿಸ್- ಮೇ 14ರವರೆಗೆ ಉತ್ತರ ಭಾರತದಲ್ಲಿ ವಿಮಾನಯಾನ ಸಂಪೂರ್ಣ ಸ್ಥಗಿತ

ನವದೆಹಲಿ: ಕಳೆದ 48 ಗಂಟೆಯಲ್ಲಿ ಪಾಕ್ ನಿಂದ ಭಾರತದ 36 ನಗರಗಳು ಟಾರ್ಗೆಟ್ ನಲ್ಲಿದ್ದು 20 ನಗರಗಳ ಮೇಲೆ ಡ್ರೋನ್, ಶೆಲ್ ದಾಳಿ ನಡೆಯುತ್ತಲೇ ಇದೆ. ದಾಳಿಯನ್ನು ಭಾರತೀಯ ಸೇನೆ ತಡೆಯುತ್ತಲೇ ಇದೆ (Ind-Pak War).ಭಾರತೀಯ ಕಾಲಮಾನದಂತೆ ಮದ್ಯರಾತ್ರಿ 2 ಗಂಟೆಗೆ ಪಾಕಿಸ್ತಾನದ ಲಾಹೋರ್ ನ ಸೇನೆಯ ಡಿಎಚ್ಎ ಬಳಿ ಭಾರಿ ಪ್ರಮಾಣದ ಸ್ಪೋಟದ ಸದ್ದಾಗಿದೆ. ಸ್ವಲ್ಪ ಸಮಯದ ನಂತರ ಪಾಕಿಸ್ತಾನದ ವಾಯುಸೇನೆಯ ಏರ್ ಬೇಸ್ ಗಳಾದ ರಾವಲ್ಪಿಂಡಿಯ ನೂರ್ ಖಾನ್ ಏರ್ ಬೇಸ್ ಚಕ್ಲಾಲ, ಪಂಜಾಬ್ […]

ಉಡುಪಿ:ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಬ್ರಹ್ಮಾವರದ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದಲ್ಲಿ ಎರಡುವರ್ಷಗಳ ಕೃಷಿ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರುವ, 19 ವರ್ಷ ವಯಸ್ಸು ಮೀರದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.uahs.edu.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ಇರುತ್ತದೆ. ಎರಡು ವರ್ಷದ ಡಿಪ್ಲೋಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, […]

ಉಡುಪಿ:ವಿದ್ಯಾರ್ಥಿವೇತನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಆಸಕ್ತ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ:ಶೌಚಾಲಯ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2022-23 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಶೌಚಾಲಯ ನಿರ್ಮಿಸಲು ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.