ಹಿರಿಯಡಕ ದೇವಸ್ಥಾನದ ವಾರ್ಷಿಕ ಸಿರಿ ಜಾತ್ರೆ ಸಂಪನ್ನ

ಉಡುಪಿ: ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ವಾರ್ಷಿಕ ಸಿರಿ ಜಾತ್ರೆ ವೈಭವದಿಂದ ಸಂಪನ್ನಗೊಂಡಿತು. ದೇವಸ್ಥಾನದ ಪರ್ಯಾಯ ತಂತ್ರಿಗಳಾದ ಗುರುರಾಜ ತಂತ್ರಿ ಹಾಗೂ ಅರ್ಚಕರಾದ ಅನಂತ ಅಡಿಗ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವಳದ ಅರ್ಚಕರು ಧ್ವಜಸ್ತಂಭದ ಎದುರು ಪಾತ್ರಿಗಳಿಗೆ ಸಿಂಗಾರದ ಹೂವನ್ನು ನೀಡುವ ಮೂಲಕ ದರ್ಶನ ಸೇವೆಗೆ ಚಾಲನೆ ನೀಡಿದರು. ಉಡುಪಿ ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದ ಭಕ್ತರು ಸಿರಿ ಜಾತ್ರೆಯ ವೈಭವವನ್ನು ಕಣ್ತುಂಬಿಕೊಂಡರು. ಬೆಳಗ್ಗೆ ಧ್ವಜಾರೋಹಣ, ಸಂಜೆ ಆರಾಧನಾ ಪೂಜೆ, ಪೂರ್ಣಿಮಾ […]

ಮೇ 17ರಂದು ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 17ರಂದು ಉಡುಪಿಯ ಕೊಡವೂರು ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರವಿರಾಜ್ ಎಚ್.ಪಿ. ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 8.15 ರಿಂದ ರಾತ್ರಿ 8:15 ರವರೆಗೆ ನಿರಂತರ 12 ಗಂಟೆಗಳ ಕಾರ್ಯಕ್ರಮ ನಡೆಯಲಿದೆ. ಮಲ್ಪೆಯ ಸಿಟಿಜನ್ ಸರ್ಕಲ್ ನಿಂದ ಮೆರವಣಿಗೆಯೊಂದಿಗೆ […]

ರಾಜ್ಯದಲ್ಲೇ ಮೊತ್ತಮೊದಲ ಬಾರಿಗೆ ಇಸಿಆರ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ ನಲ್ಲಿ ರೋಬೋಟಿಕ್ ಟೀಚರ್ಸ್‌

ಉಡುಪಿ: ಕರ್ನಾಟಕ ರಾಜ್ಯದಲ್ಲೇ ಮೊತ್ತ ಮೊದಲ ಬಾರಿಗೆ ಬ್ರಹ್ಮಾವರ ತಾಲೂಕು ಅಚ್ಲಾಡಿ ಗ್ರಾಮದ ಮಧುವನದಲ್ಲಿರುವ ಇಸಿಆರ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟಷ್‌ನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಎಐ ರೋಬೋಟಿಕ್ ಟೀಚರ್ಸ್‌ನ್ನು ಪರಿಚಯಿಸಲಾಯಿತು. ಆ ಮೂಲಕ ಕಾಲೇಜಿನ ಎಲ್ಲಾ ತರಗತಿಗಳಲ್ಲೂ ಎಐ ರೋಬೋಟಿಕ್ ಟೀಚರ್ಸ್‌ನ್ನು ಪರಿಚಯಿಸಿದ ರಾಜ್ಯದ ಮೊತ್ತಮೊದಲ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಇಸಿಆರ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟಷ್‌ ಪಾತ್ರವಾಗಿದೆ. ನೂತನವಾಗಿ ಪರಿಚಯಿಸಲಾದ ಎಐ ರೋಬೋಟಿಕ್ ಟೀಚರ್ಸ್‌ನೊಂದಿಗೆ ಸಂಸ್ಥೆಯ ವಿದ್ಯಾರ್ಥಿಗಳು ಸಂವಾದ ನಡೆಸಿದರು. ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ರೋಬೋಟಿಕ್ ಟೀಚರ್ಸ್‌ […]

ಮೇ 20ರಂದು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶವ್ಯಾಪಿ ಮುಷ್ಕರ

ಉಡುಪಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಮೇ 20 ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಐಟಿಯುರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಅವರು, ಉಡುಪಿ ಜಿಲ್ಲಾ ಸಮಿತಿ ವತಿಯಿಂದಲೂ ಮುಷ್ಕರವು ಉಡುಪಿ, ಕುಂದಾಪುರ, ಬೈಂದೂರಿನಲ್ಲಿ ನಡೆಯಲಿದೆ. ಈ ಮುಷ್ಕರದಲ್ಲಿ ಬ್ಯಾಂಕ್, ಎಲ್ಐಸಿ, ಅಂಚೆ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಮೆರವಣಿಗೆ […]

ಉಡುಪಿ:ಪೂರ್ಣಪ್ರಜ್ಞಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್:ಎರಡು ದಿನಗಳ ಇಂಡೋ-ಕೀನ್ಯಾ ಅಂತರರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮ

ಉಡುಪಿ:ಕೀನ್ಯಾದ ಮ್ಯಾನೇಜ್ಮೆಂಟ್ ಯೂನಿವರ್ಸಿಟಿ ಆಫ್ ಆಫ್ರಿಕಾ (MUA) ಸಹಯೋಗದೊಂದಿಗೆ ಪೂರ್ಣಪ್ರಜ್ಞಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (PIM), ಮೇ 10 ಮತ್ತು 11, 2025 ರಂದು ಇನ್ಸ್ಟಿಟ್ಯೂಟ್ ಕ್ಯಾಂಪಸ್‌ನಲ್ಲಿ ಮ್ಯಾನೇಜ್ಮೆಂಟ್ ಮತ್ತು ಮಾಹಿತಿ ತಂತ್ರಜ್ಞಾನದಲ್ಲಿನ ಪ್ರಗತಿಗಳ ಕುರಿತು ಎರಡು ದಿನಗಳ ಇಂಡೋ-ಕೀನ್ಯಾ ಅಂತರರಾಷ್ಟ್ರೀಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮದ ಪ್ರಮುಖ ಅಂಶವೆಂದರೆ ಮೇ 11, 2025 ರಂದು MUA ಯ ಗಣ್ಯ ಶಿಕ್ಷಣತಜ್ಞ ಮತ್ತು ಉಪಕುಲಪತಿ ಡಾ. ವಾಷಿಂಗ್ಟನ್ ಒಕೆಯೊ ಅವರು ಪೂರ್ಣಪ್ರಜ್ಞಾ ಸೆಂಟರ್ ಫಾರ್ ನ್ಯೂರೋ […]