ಉಡುಪಿ:ದೊಡ್ಡಣಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಬ್ರಹ್ಮ ಕುಂಭಾಭಿಷೇಕ ಸಂಪನ್ನ

ಉಡುಪಿ: ಉಡುಪಿ ದೊಡ್ಡಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ 19ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಪಂಚವಿ0 ಶತಿ ದ್ರವ್ಯ ಮೀಲಿತ ಅಷ್ಟೋತ್ತರ ಶತ ಬ್ರಹ್ಮ ಕುಂಭಾಭಿಷೇಕವು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ. ಮಾರ್ಗದರ್ಶನದಲ್ಲಿ ನೆರವೇರಿತು. ಕ್ಷೇತ್ರದ ನಿಯೋಜಿತ ತಂತ್ರಿಗಳಾದ ಶ್ರೀ ಸರ್ವೇಶ ತಂತ್ರಿಗಳು ಬೆಳಗ್ಗೆ 8:20ಕ್ಕೆ ಒದಗಿದ ವೃಷಭ ಲಗ್ನ ಸುಮೂರ್ತದಲ್ಲಿ ಶಿಖರ ಕಲಶಾ ಅಭಿಷೇಕ ಹಾಗೂ ಬ್ರಹ್ಮ ಕುಂಭಾಭಿಷೇಕ ನೆರವೇರಿಸಿದರು. ಪ್ರಯುಕ್ತ ಕ್ಷೇತ್ರದಲ್ಲಿ ಮಂಗಳ […]
ಉಡುಪಿ:ಪಕ್ಷ ಸಂಘಟನೆಗಾಗಿ ಸಮರ್ಪಣಾ ಮನೋಭಾವದೊಂದಿಗೆ ಕಾರ್ಯೋಣ್ಮುಖರಾಗಿ: ವಿನಯ್ ಕುಮಾರ್ ಸೊರಕೆ

ಕಾಪು:ಕಾಂಗ್ರೆಸ್ ಪಕ್ಷದ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮಹಾತ್ಮಾ ಗಾಂಧಿ, ಅಂಬೇಡ್ಕರ್ ಸಿದ್ಧಾಂತ, ದೇಶಕ್ಕಾಗಿ ಹೋರಾಟ, ಬಲಿದಾನ ಮಾಡಿದ ಹೆಗ್ಗಳಿಕೆ, ಇತಿಹಾಸ ಇರುವ ಪಕ್ಷ ಕಾಂಗ್ರೆಸ್. ಇಂತಹ ಮಹಾನ್ ರಾಜಕೀಯ ಪಕ್ಷದ ಸಂಘಟನೆಗಾಗಿ ನಾಯಕರು, ಕಾರ್ಯಕರ್ತರು ಸಮರ್ಪಣಾ ಮನೋಭಾವದೊಂದಿಗೆ ಸಂಘಟನಾ ಕಾರ್ಯದಲ್ಲಿ ಕಾರ್ಯೋಣ್ಮುಖರಾದಲ್ಲಿ ಪಕ್ಷವು ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ಕೆ. ಪಿ. ಸಿ. ಸಿ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಹೇಳಿದರು. ಅವರು ಸೋಮವಾರ ಕಾಪು – […]
ಉಡುಪಿ:ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆರಾಧನಾ ರಂಗ ಪೂಜಾ ಸಹಿತ ಬಲಿಉತ್ಸವ

ಉಡುಪಿ: ದೊಡ್ಡಣಗುಡ್ಡೆೆ ಶ್ರೀಚಕ್ರಪೀಠ ಸರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 19ನೇ ಪ್ರತಿಷ್ಠಾಾ ವರ್ಧಂತಿ ಪ್ರಯುಕ್ತ ಆರಾಧನಾ ರಂಗಪೂಜಾ ಮಹೋತ್ಸವ ಹಾಗೂ ಬಲಿ ಉತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇಮೂ ವಿಖ್ಯಾತ್ ಭಟ್ ತಂತ್ರತ್ವದಲ್ಲಿ, ಗಣೇಶ ಸರಳಾಯರ ನೇತೃತ್ವದಲ್ಲಿ ನೆರವೇರಿತು. ಸಂಜೆ ನಡೆದ ರಂಗಪೂಜೆಯಲ್ಲಿ ದೇವರ ಧ್ಯಾನವನ್ನು ಕ್ಷೇತ್ರದಸ್ವಸ್ತಿಕ್ ಆಚಾರ್ಯ ಉಲಿದರು. ರಾತ್ರಿ ನೆರವೇರಿದ ಬಲಿ ಉತ್ಸವದಲ್ಲಿ ದೇವಿ ನರ್ತನವನ್ನು ನೀರೆ ಗಣೇಶ್ ಭಟ್ ನೆರವೇರಿಸಿದರು.ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸುತ್ತನ್ನು ಸ್ವಾತಿ […]
ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್’ನಲ್ಲಿ ವಿಶ್ವ ದಾದಿಯರ ದಿನಾಚರಣೆ.

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಫ್ಲೋರೆನ್ಸ್ ನೈಟಿಂಗೇಲ್ ರವರ ಜನ್ಮದಿನದ ಅಂಗವಾಗಿ ವಿಶ್ವ ದಾದಿಯರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ದಾದಿಯರ ದಿನದ ಪ್ರಯುಕ್ತ ಬಿ ಎಸ್ ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬೇಸಿಕ್ ಲೈಫ್ ಸಪ್ಪೋರ್ಟ್ ಮತ್ತು ಪ್ರಥಮ ಚಿಕಿತ್ಸಾ ತರಬೇತಿಯನ್ನು ಆಯೋಜಿಸಲಾಗಿತ್ತು . ಮುಖ್ಯ ಅತಿಥಿ ಮೆಡಿಷುರ್ ಹೆಲ್ತ್ ಕೇರ್ ಅಕಾಡೆಮಿಯ ಡೈರೆಕ್ಟರ್ ಹಾಗೂ ಪ್ರಮಾಣಿತ ತರಬೇತುದಾರರಾದ ಡಾ. ಆಸಿಫ್ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿ ದಾದಿಯರ ದಿನಾಚರಣೆಯಂದು ದಾದಿಯರಿಗೆ ಪ್ರಾಮಾಣಿಕತೆ ಮತ್ತು […]
ಉಡುಪಿ: ಮದ್ಯದ ಅಮಲಿನಲ್ಲಿ ತನ್ನದೇ ಮನೆಗೆ ಬೆಂಕಿಯಿಟ್ಟ ಭೂಪ.!

ಉಡುಪಿ: ವಿಪರೀತ ಮದ್ಯ ಸೇವಿಸಿದ ವ್ಯಕ್ತಿಯೋರ್ವ ತನ್ನದೆ ಮನೆಗೆ ಬೆಂಕಿ ಇಟ್ಟ ಘಟನೆ ಉಡುಪಿ ಹೊರವಲಯದ ಚಿಟ್ಪಾಡಿಯಲ್ಲಿ ನಡೆದಿದೆ. ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ ಒಳಕಾಡುವರಲ್ಲಿ ನೆರವಿಗೆ ಬರುವಂತೆ ವಿನಂತಿಸಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಒಳಕಾಡುವರು ಅಗ್ನಿಶಾಮಕ ದಳದವರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ಒಳಕಾಡುವರು ಕುಡುಕನ ಮೊನವೊಲಿಸಿ ಮಧ್ಯವರ್ಜನ ಕೇಂದ್ರಕ್ಕೆ ದಾಖಲುಪಡಿಸಿದ್ದಾರೆ.