ಉಡುಪಿ:ಮಣಿಪಾಲ ಜ್ಞಾನಸುಧಾದ ನವೀಕೃತ ಕಟ್ಟಡ ಮತ್ತು ವಿದ್ಯಾನಗರ ಗ್ರೀನ್ಸ್–ಕ್ರೀಡಾಂಗಣ ಲೋಕಾರ್ಪಣೆ

ಉಡುಪಿ:ಮಣ್ಣುಪಳ್ಳ ಮಣಿಪಾಲವಾಗಿ, ಅನಂತರ ಮಣಿಪಾಲ ಶಿಕ್ಷಣ ಸಂಸ್ಥೆಗಳಾಗಿ ಇದೀಗ ಮಣಿಪಾಲ ಜ್ಞಾನಸುಧಾವಾಗಿಬೆಳಗುತ್ತಿರುವುದು ಅತ್ಯಂತ ಸಂತೋಷದ ವಿಷಯ.ಹಳ್ಳಿಗಳ ಅಬಿವೃದ್ಧಿಯೇ ದೇಶದ ಅಭಿವೃದ್ಧಿ ಎಂಬಂತೆಹಳ್ಳಿಯಾಗಿದ್ದ ಮಣಿಪಾಲ ಇದೀಗ ಸರ್ವರ ಸಂತೋಷಕ್ಕೆಕಾರಣವಾಗಿ ಮುನ್ನಡೆಯುತ್ತಿರುವುದು ಎಲ್ಲರಿಗೂಹೆಮ್ಮೆಯ ಸಂಗತಿ ಎಂದು ಮಣಿಪಾಲ ಗ್ರೂಪ್ಸ್ಅಧ್ಯಕ್ಷರಾದ ಟಿ. ಸುಧಾಕರ್ ಪೈ ಹೇಳಿದರು. ಇವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನನವೀಕೃತ ಕಟ್ಟಡದ ಲೋಕಾರ್ಪಣೆ ಹಾಗೂ ಕ್ರೀಡಾಂಗಣಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿಕೊಂಡು ಮಾತನಾಡಿದರು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದಯಶ್‌ಪಾಲ್ ಸುವರ್ಣರವರು ಮಣಿಪಾಲ ಜ್ಞಾನಸುಧಾದನವೀಕೃತ ಕಟ್ಟಡ ಉದ್ಘಾಟಿಸಿ ಮಾತನಾಡಿ ಶಿಕ್ಷಣ ಕಾಶಿ […]

ಉಡುಪಿ:ಮುಂಬರುವ ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪಗಳಿಗೆ ತಕ್ಷಣವೇ ಸ್ಪಂದಿಸಲು ಸನ್ನದ್ಧರಾಗಿರಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಉಂಟಾಗುವ ಪ್ರಕೃತಿ ವಿಕೋಪವಿಪತ್ತುಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮುಂಗಾರು ಮಳೆಗಾಲದಲ್ಲಿ ಮಳೆಯ ನೀರು ಹೆಚ್ಚಾಗಿ ಕೃತಕ ನೆರೆಗಳು […]

ಉಡುಪಿ:ಬುದ್ಧರ ಆಚಾರ-ವಿಚಾರಗಳನ್ನು ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ : ಶಾಸಕ ಯಶ್ಪಾಲ್ ಎ ಸುವರ್ಣ

ಉಡುಪಿ: ಭಗವಾನ್ ಬುದ್ಧರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಆದರ್ಶ ಹಾಗೂ ತತ್ವಗಳನ್ನುಅನುಸರಿಸುವುದರೊಂದಿಗೆ ಅವರ ಜೀವನಚರಿತ್ರೆ ಮತ್ತು ಆಚಾರ ವಿಚಾರಗಳನ್ನು ನಮ್ಮ ದಿನನಿತ್ಯ ಜೀವನದಲ್ಲಿ ಪಾಲಿಸಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು ಸೋಮವಾರ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಜನತಾ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬುದ್ಧಿಸ್ಟ್ ಸೊಸೈಟಿ ಆಪ್ ಇಂಡಿಯಾ ಉಡುಪಿ ಇವರ ಸಂಯುಕ್ತ ಆಶ್ರಯಲ್ಲಿ ನಡೆದ ಭಗವಾನ್ ಬುದ್ಧ ಜಯಂತಿ […]

ಉಡುಪಿ:ಐ.ಟಿ.ಐ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ:ನಗರದ ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ) ಯಲ್ಲಿ ವಿವಿಧ ತಾಂತ್ರಿಕ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದಇಲಾಖೆಯ ವೆಬ್‌ಸೈಟ್ https://www.cite.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ,ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಚೇರಿ […]

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಗರ್ಡರ್ ಜೋಡಿಸುವ ಪ್ರಕ್ರಿಯೆ ಆರಂಭ

ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಗರ್ಡರ್ ಜೋಡಣೆ ಪ್ರಕ್ರಿಯೆ ನಡೆದಿದ್ದು, ಅದನ್ನು ಜೋಡಿಸುವ ಪ್ರಕ್ರಿಯೆ ಸೋಮವಾರದಿಂದ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 11 ರಿಂದ 2 ಗಂಟೆಯವರೆಗೆ ರೈಲು ಸಂಚಾರದಲ್ಲಿ ವ್ಯತ್ಯಯ ಕಂಡುಬರಲಿದೆ. ನಾಳೆ ಮಧ್ಯಾಹ್ನದೊಳಗೆ ಗರ್ಡರ್ ಜೋಡಣೆ ಪೂರ್ಣಗೊಳ್ಳಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು ಒಟ್ಟು 60 ಮೀಟರ್ ನ ಗರ್ಡರ್ ಇದಾಗಿದ್ದು, 1.5 ಮೀ ಪುಶ್ ಆಗಲು 20 ನಿಮಿಷ ಕಾಲಾವಕಾಶ ಬೇಕಿದೆ. ಸಂಪೂರ್ಣಗೊಂಡ […]