ಉಡುಪಿ:ಮೇ 16 ರಂದು ನೇರ ಸಂದರ್ಶನ

ಉಡುಪಿ: ನಗರದ ಉದ್ಯಾವರದ ಐಒಸಿಲ್ ಪೆಟ್ರೋಲ್ ಬಂಕ್ ಹತ್ತಿರದ ಅರವಿಂದ್ ಮೋರ‍್ಸ್ ಪ್ರೈ.ಲಿ ಇಲ್ಲಿ ಮೇ 16 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ಸಂಖ್ಯೆ, 8105618291, 9945856670, 8105774936 […]

ಕುಂದಾಪುರ: ಸಾಲಬಾಧೆಯಿಂದ ಮನನೊಂದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ; ರಕ್ಷಿಸಲು ಬಾವಿಗೆ ಹಾರಿದ ಮಗ ಕೂಡ ಮೃತ್ಯು-ತಂದೆ ಮಗನನ್ನು ರಕ್ಷಿಸಲು ಮುಂದಾದ ತಾಯಿ ಸ್ಥಿತಿ ಗಂಭೀರ

ಉಡುಪಿ: ಸಾಲಬಾಧೆಯಿಂದ ಮನನೊಂದು ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗ ಕೂಡಾ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ತಂದೆ-ಮಗ ಬಾವಿಗೆ ಹಾರಿದ್ದನ್ನು ಗಮನಿಸಿ ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲತಃ ಕುಂದಾಪುರದವರಾದ ಮಾಧವ ದೇವಾಡಿಗ ಕುಟುಂಬ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಸುಮಾರು ಏಳು ವರ್ಷದಿಂದ ಬಾಡಿಗೆ ಮನೆಯೊಂದರಲ್ಲಿ […]

ಮೇ 16ರಂದು “ಲೈಟ್ ಹೌಸ್” ಕನ್ನಡ ಚಲನಚಿತ್ರ ರಾಜ್ಯಾದ್ಯಂತ ಬಿಡುಗಡೆ

ಉಡುಪಿ: ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಆಮೆ ಕ್ರಿಯೇಶನ್ಸ್ ಬ್ಯಾನರ್‌ನಡಿ ನಿರ್ಮಾಣಗೊಂಡಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರವು ಇದೇ ಮೇ 16ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ತಿಳಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಚಿತ್ರದ ಬಹುಪಾಲು ಚಿತ್ರೀಕರಣವು ಉಡುಪಿಯ ರಮಣೀಯ ಪರಿಸರದಲ್ಲಿ ನಡೆದಿದ್ದು, ಕರಾವಳಿಯ ನೈಸರ್ಗಿಕ ಸೌಂದರ್ಯವನ್ನು ಸೆರೆಹಿಡಿಯಲಾಗಿದೆ.ಈ ಕುರಿತು ಮಾಹಿತಿ ನೀಡಿದ ಚಿತ್ರತಂಡ, “ಲೈಟ್ ಹೌಸ್” ಒಂದು ಸಂಪೂರ್ಣ ಸಾಂಸಾರಿಕ ಕಥಾಹಂದರವನ್ನು ಹೊಂದಿದ್ದು, ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಕುಳಿತು ಆನಂದಿಸಬಹುದಾದ ಚಿತ್ರ […]

ಉಡುಪಿ: ವೈಶಾಖ ಬುದ್ಧ ಪೂರ್ಣಿಮೆ‌ ಆಚರಣೆ: ಹಲವು ವಿಶಿಷ್ಟ ಕಾರ್ಯಕ್ರಮ

ಉಡುಪಿ: ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ, ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬುದ್ಧ ಜಯಂತಿಯ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ಎಲ್ಲಾ 150 ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ವಂದನೆ- ಮೈತ್ರಿ ಧ್ಯಾನ: ನಂತರ ಹಾವಂಜೆಯಲ್ಲಿರುವ ಬೋಧಿಸತ್ವ ಬುದ್ಧ ವಿಹಾರದಲ್ಲಿ ಧಮ್ಮಾಚಾರಿ ಶಂಭು ಸುವರ್ಣ ನೇತೃತ್ವದಲ್ಲಿ ಬುದ್ಧ ವಂದನೆ, ಧ್ಯಾನ ಮತ್ತು ಮೈತ್ರಿ ಧ್ಯಾನ ಜರಗಿತು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ […]

ಹೆಬ್ರಿ: ಚಾರ ಜವಾಹರ್ ನವೋದಯ ವಿದ್ಯಾಲಯ ಶೇ.100 ಫಲಿತಾಂಶ

ಹೆಬ್ರಿ: ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯ ಚಾರ ಉಡುಪಿ ಜಿಲ್ಲೆ ಇಲ್ಲಿನ ಹತ್ತನೇ ತರಗತಿ ಸಿ.ಬಿ.ಎಸ್.ಇಪರೀಕ್ಷೆಗೆ ಹಾಜರಾದ 75 ವಿದ್ಯಾರ್ಥಿಗಳಲ್ಲಿ, 54 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಗೊಂಡು ಶೇ.100 ಫಲಿತಾಂಶ ಲಭಿಸಿದೆ ಎಂದು ಪ್ರಕಟಣೆ ತಿಳಿಸಿದೆ. ವಿಂಶತಿ ಎಮ್ ಪುತ್ತು (96.60%) ಮೇಘನಾ(95.20%),ಧನ್ವಿನ್ ಜಿ. ಶೆಟ್ಟಿ (94.80%)ಮಾನ್ಯ ಯು. ಶೆಟ್ಟಿ (93.20%),ಅರ್ಜುನ್ ವಿ. ಶೆಟ್ಟಿ (93.00%) ಅಂಕ ಪಡೆದು ಶಾಲೆಗೆ ಟಾಪರ್ ಆಗಿ ಮೂಡಿ ಬಂದಿದ್ದಾರೆ.