ಕಾಪು: ಪಾದೂರು ತೈಲ ಸ್ಥಾವರದ ಮೇಲೆ ಡ್ರೋನ್ ದಾಳಿ

ಉಡುಪಿ: ಕಾಪು ಹೊರವಲಯದ ಪಾದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಇಂಡಿಯನ್ ಸ್ಟ್ರೆಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐ.ಎಸ್.ಪಿ.ಆರ್.ಎಲ್) ಮೇಲೆ ಡ್ರೋನ್ ಮೂಲಕ ಸಿಡಿಮದ್ದು (ಬಾಂಬ್) ದಾಳಿಯಾದ ಹಿನ್ನೆಲೆಯಲ್ಲಿ ಕಂಪನಿ ಮುಂಭಾಗದ ಹೊರಭಾಗದಲ್ಲಿ ಹಾಗೂ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತು. ಬಾಂಬ್ ಸ್ಪೋಟದಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣದಲ್ಲಿಯೇ ಸೈರನ್ ಮೊಳಗಿ ಎಚ್ಚರಿಕೆ ಗಂಟೆ ಬಾರಿಸಲಾಯಿತು. ತಕ್ಷಣವೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಗೆ ಮಾಹಿತಿಯನ್ನು ನೀಡಲಾಯಿತು. ಐ.ಎಸ್.ಪಿ.ಆರ್.ಎಲ್ ನ ಬೆಂಕಿ ನಂದಕ ವಾಹನವು ಕಂಪನಿಯ ಒಳಭಾಗದಲ್ಲಿ […]
ಮೇ 20ರಂದು ಉಡುಪಿ, ದ.ಕ, ಉ.ಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯಾಗುವ ಸಾಧ್ಯತೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಾಳೆ (ಮೇ 20) ಭಾರೀ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ರೆಡ್ ಅಲರ್ಟ್ ಘೋಷಣೆ ಆಗಿರುವ ಕಾರಣ ನಾಳೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಭಾರೀ ಸುಂಟರಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಸೋಮವಾರ ಇಡೀ ದಿನ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆ ಸುರಿದಿದೆ. ದಿಢೀರ್ ಸುರಿದ ಮಳೆಗೆ ಜನರು ಪರದಾಡಿದರು. […]
ಉಡುಪಿ:ಓಂ ಗಣೇಶ್ ಎಂಟರ್ಪ್ರೈಸಸ್ ನಲ್ಲಿ ಚಿನ್ನಾಭರಣಗಳ ಮೇಲೆ ಸಾಲ ಸೌಲಭ್ಯ

ಉಡುಪಿ:ಓಂ ಗಣೇಶ್ ಎಂಟರ್ಪ್ರೈಸಸ್ ನಲ್ಲಿ ಚಿನ್ನಾಭರಣಗಳ ಮೇಲೆ ಸಾಲ ಸೌಲಭ್ಯ ಹಾಗೂ ಲೋನ್ ಟೈಪ್ ಓವರ್ ಸೌಲಭ್ಯ ನೀಡಲಾಗುತ್ತದೆ.ಪ್ರತಿ ಗ್ರಾಂಗೆ 7,000 ರೂ. ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಮಾಂಡವಿ ಮೇರಿಡಿಯನ್, ಕೋರ್ಟ್ ರೋಡ್ ಉಡುಪಿ9900513680, 08204291111, 9900062449
ಉಡುಪಿ: ಸೈನಿಕರ ಕ್ಷೇಮ, ದೇಶದ ಸುರಕ್ಷೆಗೆ ಸುದರ್ಶನ ಮಂತ್ರ ಯಾಗ

ಉಡುಪಿ: ಸೈನಿಕರ ಕ್ಷೇಮ, ದೇಶದ ಸುರಕ್ಷೆಗೆ ಪ್ರಾರ್ಥಿಸಿ ಉಡುಪಿ ಶ್ರೀ ಪೇಜಾವರ ಮಠಾಧೀಶರ ಮಾರ್ಗದರ್ಶನದಲ್ಲಿ ಸುದರ್ಶನ ಮಂತ್ರ ಯಾಗ ನಡೆಯಿತು.ದೇಶದ ಗಡಿಭಾಗದಲ್ಲಿ ಶತ್ರುರಾಷ್ಟ್ರಗಳ ಸವಾಲುಗಳನ್ನೆದುರಿಸಿ ಯುದ್ಧ ಸನ್ನದ್ಧಸ್ಥಿತಿಯಲ್ಲಿ ದಿಟ್ಟತನದಿಂದ ದೇಶವನ್ನು ಕಾಯುತ್ತಾ ಸೈನಿಕರ ಯೋಗಕ್ಷೇಮ ಮತ್ತು ದೇಶದ ಸುರಕ್ಷೆ ಸಮೃದ್ಧಿಗಾಗಿ ಪ್ರಾರ್ಥಿಸಿ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಸಂಕಲ್ಪನಾನುಸಾರ ಈ ಯಾಗ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಪ್ರಾಚೀನ ಸ್ಕಂದಾಲಯ ಮುಚ್ಚುಕೋಡು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಹಾಸುದರ್ಶನ ಮಂತ್ರ ಯಾಗ ನೆರವೇರಿತು. ವಿದ್ವಾನ್ ಕುಕ್ಕಿಕಟ್ಟೆ ರಾಮಕೃಷ್ಣ ತಂತ್ರಿಗಳ […]
ಉಡುಪಿ: ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅಗ್ನಿಶಾಮಕ ದಳದಿಂದ ವ್ಯಕ್ತಿಯ ರಕ್ಷಣೆ

ಉಡುಪಿ: ಕುಂದಾಪುರ ತಾಲೂಕಿನ ಆನೆಗುಡ್ಡೆ ದೇವಸ್ಥಾನದ ಸಮೀಪ ವ್ಯಕ್ತಿಯೋರ್ವ ತಮ್ಮದೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ನಡೆದಿದೆ. ಬೊಬ್ಬೆ ಕೇಳಿದ ಸ್ಥಳೀಯರು ಕೂಡಲೇ ಕುಂದಾಪುರದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಸುಮಾರು 30 ಅಡಿ ಆಳದ ಬಾವಿಗೆ ಇಳಿದು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕದ ಠಾಣಾಧಿಕಾರಿ ವಿ. ಸುಂದರ ನೇತೃತ್ವದಲ್ಲಿ ಕಾಜಾಹುಸೇನ್, ಸಚಿನ್, ರಿಯಾಜ್ ಹಾಗೂ […]