ಉಡುಪಿ:ಅರ್ಜಿ ಆಹ್ವಾನ

ಉಡುಪಿ:Dharti Aaba Janjatiya Gram Utkarsh Abhiyan ಕಾರ್ಯಕ್ರಮದಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಕಚೇರಿಯಲ್ಲಿ ಅರಣ್ಯ ಹಕ್ಕು ಕೋಶ (ಎಫ್.ಆರ್.ಎ ಸೆಲ್) ಸ್ಥಾಪಿಸಲು ಕೋ ಆರ್ಡಿನೇಟರ್ ಹಾಗೂ ಎಂ.ಐ.ಎಸ್ ಅಸಿಸ್ಟೆಂಟ್ ತಲಾ ಒಂದು ಹುದ್ದೆಗಳ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 26 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಐ.ಟಿ.ಡಿ.ಪಿ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ […]
ಮಣಿಪಾಲ: ಗಾಳಿಮಳೆಯ ಹೊಡೆತಕ್ಕೆ ಕಿತ್ತುಹೋದ ಐನಾಕ್ಸ್ ಮುಂಭಾಗದ ರಸ್ತೆ: ಗಂಟೆಗಟ್ಟಲೇ ಟ್ರಾಫಿಕ್ ಜಾಮ್

ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಗಾಳಿಮಳೆಯ ಹೊಡೆತಕ್ಕೆ ಮಣಿಪಾಲದ ಐನಾಕ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಕಿತ್ತುಹೋಗಿದೆ. ಅಪಾರ ಪ್ರಮಾಣದಲ್ಲಿ ಮಳೆಯ ನೀರು ರಸ್ತೆಯಲ್ಲೇ ಹರಿದುಹೋಗುತ್ತಿದ್ದು, ನೀರಿನ ರಭಸಕ್ಕೆ ರಸ್ತೆ ಕಿತ್ತುಹೋಗಿ ತೋಡಾಗಿ ಮಾರ್ಪಟ್ಟಿದೆ. ಇದರಿಂದ ವಾಹನ ಸವಾರರಿಗೆ ಮುಂದಕ್ಕೆ ಚಲಿಸಲು ಆಗದೆ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಇದೇ ರೀತಿ ಮಳೆ ಮುಂದುವರಿದರೆ ಮಣಿಪಾಲ ಐನಾಕ್ಸ್ ಮುಂಭಾಗದ ರಸ್ತೆ ಸಂಪೂರ್ಣವಾಗಿ ಕಿತ್ತುಹೋಗುವ ಸಾಧ್ಯತೆ ಇದೆ. ಮಳೆನೀರು ಹೋಗಲು ಬೇರೆ ಜಾಗವಿಲ್ಲದೆ, ಹೆದ್ದಾರಿಯಲ್ಲೇ […]
ಉಡುಪಿ:ಸರಕಾರ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರ ಮೀಸಲಿರಿಸಿದ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸರಕಾರ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತು ಅವರುಗಳಿಗೆ ಮಾಹಿತಿ ನೀಡುವುದರೊಂದಿಗೆ ಅವರುಗಳನ್ನು ಫಲಾನುಭವಿಗಳನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ 535 ಕ್ಕೂ ಹೆಚ್ಚು ಅಲೆಮಾರಿ ಹಾಗೂ ಅರೆ ಅಲೆಮಾರಿ […]