ಅಂಬಲಪಾಡಿ ಜಂಕ್ಷನ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್

ಉಡುಪಿ: ಹೆದ್ದಾರಿ ಒವರ್ ಪಾಸ್ ಕಾಮಗಾರಿ ನಡೆಯುತ್ತಿರುವ ಅಂಬಲಪಾಡಿ ಜಂಕ್ಷನ್ ನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಒವರ್ ಪಾಸ್ ಕಾಮಗಾರಿ ಹಿನ್ನೆಲೆಯಲ್ಲಿ ಕಿರಿದಾದ ಸರ್ವಿಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ. ಈ ಮಧ್ಯೆ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಘನ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ವಾಹನಗಳು ತೆವಳುತ್ತ ಸಾಗುತ್ತಿದ್ದು, ಹೆದ್ದಾರಿಯುದ್ದಕ್ಕೂ ಸಂಚಾರ ದಟ್ಟನೆ ಉಂಟಾಗಿದೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಲ್ಲಿ ಮೊಗವೀರ ಸಮುದಾಯದ ಕಡೆಗಣನೆ ಸಲ್ಲದು: ಸಚಿನ್ ಸುವರ್ಣ ಪಿತ್ರೋಡಿ

ಮೊಗವೀರ ಸಮಾಜವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇವಸ್ಥಾನ,ದೈವಸ್ಥಾನ ಹಾಗೂ ಮಠ-ಮಂದಿರಗಳ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವಂತಹ ಸಮಾಜ. ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿಯಲ್ಲಿ ತನ್ನದೇ ಆದಂತಹ ಕೊಡುಗೆಯನ್ನು ನೀಡಿದಂತಹ ಮೊಗವೀರ ಸಮುದಾಯಕ್ಕೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಲ್ಲಿ ಪ್ರಾತಿನಿಧ್ಯ ನೀಡದಿರುವುದು – ಮೊಗವೀರ ಸಮುದಾಯದ ಬಗೆಗಿನ ಕಡೆಗಣನೆಯನ್ನು ಪ್ರತಿಬಿಂಬಿಸುತ್ತಿದೆ ಸರಕಾರದಿಂದ ನಿಯೋಜಿತವಾಗುವ ಈ ವ್ಯವಸ್ಥಾಪನ ಸಮಿತಿಯಲ್ಲಿ ಮೋಗವೀರ ಸಮುದಾಯಕ್ಕೆ ಪ್ರಾತಿನಿಧ್ಯ ಲಭಿಸಬೇಕು- ಸ್ಥಳೀಯ ಕಾಂಗ್ರೆಸ್ ನಾಯಕರು ಮಾಧ್ಯಮದಲ್ಲಿ ವ್ಯಥಾರೋಪ ಮಾಡುತ್ತಿರುವುದು ಹಾಗೂ ಬಾಲಿಷ ಹೇಳಿಕೆಗಳನ್ನು […]
ಉಡುಪಿ:ಐ.ಟಿ.ಐ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಬೈಂದೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಐ.ಟಿ.ಐ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.cite.karnataka.gov.in ಮೂಲಕ ಅಥವಾ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಎಲೆಕ್ಟ್ರೀಷಿಯನ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟಿçಕ್ ವೆಹಿಕಲ್, ಸಿ.ಎನ್.ಸಿ ಮೆಷಿನಿಂಗ್ ಟೆಕ್ನಿಷಿಯನ್, ವರ್ಚುಯಲ್ ಅನಾಲಿಸಿಸ್ ಅಂಡ್ ಡಿಸೈನರ್ – ಎಫ್.ಇ.ಎಮ್, ಇಂಡಸ್ಟ್ರಿಯಲ್ ರೊಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನ್ಯುಫ್ಯಾಕ್ಚರಿಂಗ್ ಟೆಕ್ನಿಷಿಯನ್, ಮ್ಯಾನ್ಯುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್ ಹಾಗೂ ಎಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ಕೋರ್ಸುಗಳು ಲಭ್ಯವಿದ್ದು, ಅರ್ಜಿ […]
ಉಡುಪಿ:ವಿಕಲಚೇತನರ ಕಲ್ಯಾಣ ಕಾರ್ಯಕ್ರಮ : ಅರ್ಜಿ ಆಹ್ವಾನ

ಉಡುಪಿ: ನಗರಸಭಾ ನಿಧಿಯ ಶೇ.5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮ ಯೋಜನೆಯಡಿ ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಸತಿ, ಶಿಕ್ಷಣ, ಸರ್ಕಾರಿ ಕಛೇರಿಗಳು, ಸಮುದಾಯ ಭವನ ಕಟ್ಟಡಗಳಿಗೆ ಜಾರುಹಾದಿ ಹಾಗೂ ವಿಕಲಚೇತನ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಲು ಇಚ್ಛಿಸುವ ಆಸಕ್ತ ಸಂಸ್ಥೆಗಳು ನಿಗದಿತ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪ್ರಸಕ್ತ ಸಾಲಿನ ತೆರಿಗೆ ಪಾವತಿ ಚಲನ್ ಪ್ರತಿ, ಆಧಾರ್‌ಕಾರ್ಡ್ ಪ್ರತಿ, ಪಡಿತರ […]
ಉಡುಪಿ:ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಪಿ.ಯು.ಸಿ, ಐ.ಟಿ.ಐ ಹಾಗೂ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಹೆಚ್ಚಿನ […]