ಉಡುಪಿ:ಗ್ರಾಮ ಪಂಚಾಯತ್ ಉಪ ಚುನಾವಣೆ : ನಿಷೇಧಾಜ್ಞೆ ಜಾರಿ

ಉಡುಪಿ: ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಗ್ರಾಮ ಪಂಚಾಯತಿಯ -1 ಹಾಗೂ ಕಾಪು ತಾಲೂಕಿನ ಪಡುಬಿದ್ರೆ ಗ್ರಾಮ ಪಂಚಾಯತಿಯ -1 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶಿಸಿದ್ದು, ಅದರಂತೆ ಮೇ 25 ರಂದು ಉಪಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ […]
ಉಡುಪಿ:ಮೇ 22 ರಂದು ನೇರ ಸಂದರ್ಶನ

ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್‌ನ ಪ್ರಗತಿ ಬಿಸಿನೆಸ್ ಪಾರ್ಕ್ನ ಎರಡನೇ ಮಹಡಿಯ ಆಕ್ಸಿಸ್ ಮ್ಯಾಕ್ಸ್ಲೈಫ್ ಇಲ್ಲಿ ಮೇ 22 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: […]
ಕೊಲ್ಲೂರು: ಗೂಡ್ಸ್ ವಾಹನ- ಕಾರು ನಡುವೆ ಅಪಘಾತ; ಓರ್ವ ಮೃತ್ಯು, ಇಬ್ಬರಿಗೆ ಗಾಯ

ಕೊಲ್ಲೂರು: ಮಿನಿ ಗೂಡ್ಸ್ ವಾಹನವೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಇಡೂರು ಕುಂಜಾಡಿ ಗ್ರಾಮದ ಜನ್ನಲ್ ಎಂಬಲ್ಲಿ ಮೇ 19ರಂದು ನಡೆದಿದೆ. ಮೃತರನ್ನು ಕಾರು ಚಾಲಕ ಜೋಸ್ ಪಿಟಿ ರಿನ್ಸೋ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ತ್ರೇಸಿಯಮ್ಮ ಶಾಂತಿ ಎಂಬವರು ಮಣಿಪಾಲ ಆಸ್ಪತ್ರೆ ಹಾಗೂ ಶಬರೀಶ ಎಂಬವರು ಕುಂದಾಪುರ ಆಸ್ಪತ್ರೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲ್ಲೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಗೂಡ್ಸ್ ವಾಹನ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. […]
ಉಡುಪಿ:ಕಂಪ್ಯೂಟರ್ ಪಾಯಿಂಟ್ ನಲ್ಲಿ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ.

ಉಡುಪಿ:ಕಂಪ್ಯೂಟರ್ ಪಾಯಿಂಟ್ ನಲ್ಲಿ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, 10% ವಿಶೇಷ ರಿಯಾಯಿತಿ ನೀಡುತ್ತಿದ್ದಾರೆ. ಎಲ್ಲಾ ಕಂಪ್ಯೂಟರ್ ವೈಯಕ್ತಿಕ ಕೋರ್ಸ್‌ಗಳು (MS word, MS Excel, MS PPT, MS-Access, C, C++,VB, Oracle, Java, Photoshop, Tally, HTML) ◼ಕಂಪ್ಯೂಟರ್ ಬೇಸಿಕ್ಸ್-1 ತಿಂಗಳ ಕೋರ್ಸ್. ◼ ಡಿಪ್ಲೊಮಾ ಇನ್ ಆಫೀಸ್ ಮ್ಯಾನೇಜ್ಮೆಂಟ್ (3 ತಿಂಗಳ ಕೋರ್ಸ್). ◼ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ (5 ತಿಂಗಳ ಕೋರ್ಸ್). ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಸ್ನಾತಕೋತ್ತರ ಡಿಪ್ಲೋಮಾ(1 ವರ್ಷದ […]
ಉಡುಪಿ: ಕೇಂದ್ರ ಸರಕಾರದ ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರ ಜಾರಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ಆದೇಶ ಪ್ರತಿಯನ್ನು ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು, ಕೇಂದ್ರ ಸರಕಾರ ಜಾರಿ ಮಾಡಿರುವ ವೇತನ ಸಂಹಿತೆ-2019, ಕೈಗಾರಿಕಾ ಸಂಬಂಧಗಳ ಸಂಹಿತೆ-2020, […]