ಹೆಬ್ರಿ: ಗಾಂಜಾ, ಕ್ರಿಕೆಟ್ ಬೆಟ್ಟಿಂಗ್; ಮೂವರ ಬಂಧನ

ಉಡುಪಿ: ಗಾಂಜಾ ಸೇವನೆ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಹೆಬ್ರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತೇಜಸ್, ಪ್ರಜ್ವಲ್, ಪ್ರವೀಣ್ ಬಂಧಿತ ಆರೋಪಿಗಳು. ಇವರು ಗಾಂಜಾ ಮಾರಾಟ ಮತ್ತು ಸಂಘಟಿತವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಈ ಮೂವರನ್ನು ಮೇ 19ರಂದು ಬೆಳಗಿನ ಜಾವ ಬೆಳ್ಳಂಜೆ ಗ್ರಾಮ ತುಂಬೆಜಡ್ಡು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ 89,000ರೂ. ನಗದು ಹಣ, 8 ಮೊಬೈಲ್ ಪೋನ್‌ಗಳು, 7 ಎಟಿಎಂ ಕಾರ್ಡಗಳು, 3 ಸಿಮ್ ಕಾರ್ಡಗಳು, 2 ನೋಟ್ […]
ಉಡುಪಿಯಲ್ಲಿ ತಿರಂಗಾ ಯಾತ್ರೆ ಕಾಲ್ನಡಿಗೆ ಜಾಥಾ

ಉಡುಪಿ: ರಾಷ್ಟ್ರ ರಕ್ಷಣಾ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಆಪರೇಷನ್ ಸಿಂಧೂರ ಯಶಸ್ಸಿನ ಸಂಭ್ರಮಾಚರಣೆ ಸಲುವಾಗಿ ವೀರ ಸೇನಾನಿಗಳಿಗೆ ನೈತಿಕ ಬಲ ತುಂಬುವ ಉದ್ದೇಶದಿಂದ ಉಡುಪಿ ಜೋಡುಕಟ್ಟೆಯಿಂದ ಜಟ್ಕಾ ಸ್ಟ್ಯಾಂಡ್ ವರೆಗೆ ತಿರಂಗಾ ಯಾತ್ರೆ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ಪಿಪಿಸಿ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಸುಕುನ್ಯಾ ಮೇರಿ ಅವರು, ನಾವು ಕಲಿತ ವಿದ್ಯೆ ಕೇವಲ ಪಠ್ಯ ಪುಸ್ತಕಕ್ಕೆ ಸೀಮಿತವಾಗದೆ ಅದು ರಾಷ್ಟ್ರ ರಕ್ಷಣೆಗೆ ಉಪಯೋಗವಾಗಬೇಕು. ದೇಶಕ್ಕೆ ಸಂಕಷ್ಟ ಎದುರಾದಾಗ ಎಲ್ಲ […]
ಶ್ರವಣ ದೋಷಗಳಿದ್ದರೆ ಪರಿಹಾರ ಇಲ್ಲಿದೆ: ಉಡುಪಿಯ ಸ್ಪೀಚ್& ಹೇರಿಂಗ್ ಕೇರ್ ಸೆಂಟರ್ ಶ್ರವಣ ದೋಷ ನಿವಾರಣೆಗೆ ಬೆಸ್ಟ್ ಆಯ್ಕೆ.

ಶ್ರವಣ ಸಮಸ್ಯೆಗಳು ಈ ಆಧುನಿಕ ಕಾಲದಲ್ಲಿ ಜಾಸ್ತಿಯಾಗುತ್ತಿದೆ. ಮಂದವಾಗಿ ಕಿವಿ ಕೇಳುವುದು, ಯಾರೋ ಮಾತಾಡುವಾಗ ಸರಿಯಾಗಿ ಕೇಳದೇ ಇರುವುದು ಇಂತಹ ಸಣ್ಣಪುಟ್ಟ ಸಮಸ್ಯೆಗಳೇ ಕೊನೆಗೆ ದೊಡ್ಡದ್ದಾಗಿ ಬೆಳೆದು ಮಾನಸಿಕ ಖಿನ್ನತೆಗೆ ಕಾರಣವಾಗುತ್ತದೆ. ಅದಕ್ಕೋಸ್ಕರವೇ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ಇಂತಹ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುತ್ತದೆ. ಯಾವೆಲ್ಲಾ ಸಮಸ್ಯೆಗಳಿಗೆ ಪರಿಹಾರ? ಪದಗಳನ್ನು ಪುನರಾವರ್ತಿಸಲು ನೀವು ಆಗಾಗ್ಗೆ ಕೇಳುವುದುನಿಮ್ಮ ಕಿವಿಯಲ್ಲಿ ಯಾವಾಗಲೂ ಶಬ್ದವು ಧ್ವನಿಸುತ್ತಿರುವುದುನಿಮ್ಮ ಶ್ರವಣ ಸಮಸ್ಯೆಯೂ ಹೊಸ ಜನರನ್ನು ಭೇಟಿಯಾದಾಗ ನೀವು ಮುಜುಗರ ಕೊಳ್ಳಗಾಗುವಂತೆ […]
ಕುಂದಾಪುರ: ಎಂಐಟಿಕೆಯಲ್ಲಿ ವಿಟಿಯು ಕನ್ಸೋರ್ಟಿಯಂ ತರಬೇತಿ ಕಾರ್ಯಗಾರ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಈಬಿಸ್ ಸಿ ಒ ಇಂಜಿನಿಯರಿಂಗ್ ಸೂಟ್ ಎ ಎಂ ಎ ಮೈಕ್ರೋ ಕೋರ್ಸುಗಳು ಮತ್ತು ಐ ಇ ಇ ಇ ಮೇಲೆ ಕೇಂದ್ರೀಕರಿಸಿ ವಿ ಟಿ ಯು ಕನ್ಸೋರ್ಟಿಯಮ್ ತರಭೇತಿ ಕಾರ್ಯಗಾರ ನಡೆಯಿತು. 6ನೇ ಸೆಮೆಸ್ಟರ್ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರಿಗೆ ಸಂಶೋಧನಾ ಕೌಶಲ್ಯ ಮತ್ತು ವೃತ್ತಿಪರ ಅಭಿವೃದ್ಧಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು. ಈಬಿಸ್ ಸಿಒ – ಐ ಇ ಇ ಇ ದಕ್ಷಿಣ […]
ಉಡುಪಿ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್: ಜಿಲ್ಲಾ ಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಶ್ನೋತ್ತರ ಸ್ಪರ್ಧೆ 2025

ಉಡುಪಿ:ಪೂರ್ಣಪ್ರಜ್ಞ ಸೆಂಟರ್ ಫಾರ್ ಪೊಪ್ಯೂಲರೈಝೇಷನ್ ಆಫ್ ಸೈನ್ಸ್ & ಟೆಕ್ನಾಲಜಿ ಕೇಂದ್ರದ ಅಡಿಯಲ್ಲಿ ಉಡುಪಿಯ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ “ಜಿಲ್ಲಾ ಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಶ್ನೋತ್ತರ ಸ್ಪರ್ಧೆ 2025” ಅನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮವು ಉಡುಪಿ ಜಿಲ್ಲೆಯ ವಿವಿಧ ಶಾಲೆಗಳ ಹತ್ತನೇ ತರಗತಿಯ ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಚಿಂತನೆ ಮತ್ತು ಅಕಾಡೆಮಿಕ್ ಉತ್ಸಾಹವನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಈ ಸ್ಪರ್ಧೆ ಪೂರ್ಣಪ್ರಜ್ಞ ಕಾಲೇಜು ಆವರಣದಲ್ಲಿ ನಡೆಯಿತು ಮತ್ತು ಇದರಲ್ಲಿ ಫೆಬ್ರವರಿ-ಮಾರ್ಚ್ 2025 ರಲ್ಲಿ ಶಿಕ್ಷಣ […]