ಹಾಸನದಲ್ಲಿ ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದ ವಧು: ಸಂಜೆ ಪ್ರಿಯಕರನೊಂದಿಗೆ ಮದುವೆ

ಹಾಸನ: ವರ ತಾಳಿ ಕಟ್ಟುವ ವೇಳೆ ವಧು “ನನಗೆ ಮದುವೆ ಬೇಡ’ ಎಂದು ಹಠ ಹಿಡಿದಿದ್ದರಿಂದ ಮದುವೆ ಮುರಿದು ಬಿದ್ದ ಪ್ರಸಂಗ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದಿದೆ. ಹಾಸನದ ಬೂವನಹಳ್ಳಿ ಬಡಾವಣೆ ನಿವಾಸಿ, ಸ್ನಾತಕೋತ್ತರ ಪದವೀಧರೆ ಪಲ್ಲವಿ ಹಾಗೂ ಆಲೂರು ತಾಲೂಕಿನ ತಿಮ್ಮನಹಳ್ಳಿಯ ಜಿ. ತಿಮ್ಮನಹಳ್ಳಿಯ ನಿವಾಸಿ, ಸರಕಾರಿ ಶಾಲಾ ಶಿಕ್ಷಕ ವೇಣುಗೋಪಾಲ್‌ ಅವರ ಮದುವೆ 3 ತಿಂಗಳ ಹಿಂದೆ ನಿಶ್ಚಿಯವಾಗಿತ್ತು. ಇದರಂತೆ ಶುಕ್ರವಾರ ನಡೆಯಲಿತ್ತು. ಮಂಟಪದಲ್ಲಿ ವರ ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವಧು […]

ಉಡುಪಿ: ಜಿಲ್ಲೆಯಲ್ಲಿ ಅಕ್ಕ ಸಂಜೀವಿನಿ ಅಂಗಡಿ ಪ್ರಾರಂಭ

ಉಡುಪಿ: ಜಿಲ್ಲೆಯ ಸಂಜೀವಿನಿ ಯೋಜನೆ ವಿನೂತನ ಕಾರ್ಯಕ್ರಮಗಳಿಂದ ಪರಿಚಿತವಾಗಿದ್ದು, ಇಲ್ಲಿ ನಡೆಯುವ ಕಾರ್ಯಕ್ರಮಗಳು, ಚಟುವಟಿಕೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ. ವಿವಿಧ ನವೀನ ಯೋಜನೆಗಳನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವುದರೊಂದಿಗೆ ರಾಜ್ಯಕ್ಕೆ ಮಾದರಿಯಾಗಿದೆ. ಜಿಲ್ಲೆಯಲ್ಲಿ ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸುತ್ತಿರುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಅವರು ಉದ್ಯಮಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಂಜೀವಿನಿ ಮಾರಾಟ ಮಳಿಗೆಯನ್ನು ಸಂಜೀವಿನಿ ಮಹಿಳೆಯರಿಂದ ಸ್ಥಾಪಿಸಿ ಅದನ್ನು ನಿರ್ವಹಣೆ ಮಾಡಿ ಈ ಮಹಿಳೆಯರು ಉದ್ಯಮಿಗಳಾಗುವುದರ ಜೊತೆಗೆ ಇತರ ಮಹಿಳಾ […]

ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೇ ಶೇ. 35ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಭರ್ತಿಯಾಗದೇ ಉಳಿದಿರುವ ಸೀಟುಗಳಿಗೆ, ಮೂಲ ದಾಖಲೆಯೊಂದಿಗೆ ಸಂಸ್ಥೆಗೆ ಭೇಟಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, […]

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ನೇಮಕ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ಅವರು ಆಯ್ಕೆಯಾಗಿದ್ದಾರೆ.ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಜ್ಯೋತಿ ಹೆಬ್ಬಾರ್ ಅವರು ಉಡುಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.