ಇಂದು (ಮೇ 27) ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಮೇ 28ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೇ 27ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ:ಹಲವರಿಗೆ ಗಾಯ

ಉಡುಪಿ:ಕೆಎಸ್ಆರ್ಟಿಸಿ ಬಸ್ ಓವರ್ ಟೆಕ್ ಮಾಡುವ ಬರದಲ್ಲಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿ,ಸುಮಾರು ಹತ್ತು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.ಬಸ್ಸಿನ ಕಿಟಕಿಯ ಮೂಲಕ ಪ್ರಯಾಣಿಕರನ್ನು ಸಾರ್ವಜನಿಕರು ಮೇಲಕ್ಕೆ ಎತ್ತಿದರು.ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಪಘಾತ ಸಂಭವಿಸಿದ್ದು, ಅತಿ ವೇಗದಿಂದ ಸಂಚರಿಸಿದ ಐರಾ ಬಸ್ ಪಲ್ಟಿಯಾಗಿ ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉಡುಪಿ: ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕುಸಿದುಬಿದ್ದು ಮಹಿಳೆ ಸಾವು

ಉಡುಪಿ: ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕುಸಿದುಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉಡುಪಿಯ ಅಜ್ಜರಕಾಡಿನ ಚರ್ಚ್ ವೊಂದರಲ್ಲಿ ಸಂಭವಿಸಿದೆ. ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿಯ ನಿವಾಸಿ ಶಾಂತಿ(52) ಎಂದು ಗುರುತಿಸಲಾಗಿದೆ. ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಹಠಾತ್ ಕುಸಿದು ಬಿದ್ದ ಶಾಂತಿ ಅವರನ್ನು ಉಡುಪಿ ಟಿಎಂಎ ಪೈ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು ಮಹಿಳೆ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ಕಳೆದ 5 ವರ್ಷಗಳಿಂದ ಥೈರಾಯಿಡ್ ಮತ್ತು ಗರ್ಭಕೋಶದ ಖಾಯಿಲೆಯಿಂದ ಬಳಲುತ್ತಿದ್ದು, ಇದೇ ಕಾರಣಕ್ಕೆ […]

ಕಾಪು: ಭಾರೀ ಗಾಳಿಮಳೆಗೆ ಪ್ರಕ್ಷುಬ್ಧಗೊಂಡ ಕಡಲು; ಪ್ರವಾಸಿಗರಿಗೆ ಎಚ್ಚರಿಕೆ, ತಡೆಬೇಲಿ ಅಳವಡಿಕೆ

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಮಳೆಗೆ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ದೈತ್ಯ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮುದ್ರಕ್ಕೆ ಯಾರೂ ಇಳಿಯಬಾರದೆಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬೀಚ್ ಅಪಾಯಕಾರಿಯಾಗಿ ಪರಿಣಮಿಸಿದೆ. ಸಾರ್ವಜನಿಕರು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಆದರೂ ಪ್ರವಾಸಿಗರು ಬೀಚ್ ನತ್ತ ಆಗಮಿಸಿದ್ದು ಅಪಾಯವನ್ನು ಆಹ್ವಾನಿಸುತ್ತಿದ್ದಾರೆ. ಕಾಪು ಬೀಚ್ ಲೈಟ್ ಹೌಸ್ ಬಳಿ ಸಾಕಷ್ಟು ಸಂಖ್ಯೆಯಲ್ಲಿ […]

ಉಡುಪಿ: ಮೇ 31ರಂದು ‘ಯಕ್ಷಗಾನ ಕಲಾವಿದರ ಸಮಾವೇಶ’

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ‘ಯಕ್ಷಗಾನ ಕಲಾವಿದರ ಸಮಾವೇಶ’ ಇದೇ ಮೇ 31ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಬೆಳಿಗ್ಗೆ 9ಗಂಟೆಗೆ ಕಲಾವಿದರಿಗೆ ಕೆಎಮ್‌ಸಿ ಮಣಿಪಾಲ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಲಿದೆ. ಬೆಳಿಗ್ಗೆ 10ಗಂಟೆಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಬಳಿಕ 10.30ಕ್ಕೆ ಮಾಧವ ಮಾತೃ ಗ್ರಾಮಂ […]