ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿಗಳ ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆ.

ಕುಂದಾಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ಗಳ (ಕೆ.ಸಿ.ಇ.ಟಿ -2025)ಪ್ರವೇಶ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ್ಯಾಂಕ್ ಗಳಿಸಿ ಅಪ್ರತಿಮ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿ ಆಕಾಶ್ ಹೆಬ್ಬಾರ್, ವೆಟರ್ನರಿ ಸೈನ್ಸ್ 999 ನೇ ರ್ಯಾಂಕ್, ನ್ಯಾಚುರೋಪತಿ, ಮತ್ತು ಸೈನ್ಸ್ನಲ್ಲಿ 932 ಹಾಗೂ ನರ್ಸಿಂಗ್ ನಲ್ಲಿ 1009 ಬಿ ಫಾರ್ಮ್ 1,382ನೇ ರ್ಯಾಂಕ್ ಪಡೆದು ಅದ್ವಿತೀಯ ಸಾಧನೆ ಮಾಡಿದ್ದಾರೆ. ನಿಶ್ಚಿತ್ ಎಂಜಿನಿಯರಿಂಗ್ 1638ನೇ ರ್ಯಾಂಕ್, ಶೋಭಿತ್ ಬಿ.ಎಸ್ಸಿ ಅಗ್ರಿ […]
ಸಿಇಟಿ ಫಲಿತಾಂಶ: ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನ ಅಮೂಲ್ಯ ಸಿ. ಶೆಟ್ಟಿಗೆ ರಾಜ್ಯಮಟ್ಟದ ಇಂಜಿನಿಯರಿಂಗ್’ನಲ್ಲಿ 209ನೇ ರ್ಯಾಂಕ್.

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅವಿರತ ಶ್ರಮದ ಫಲಶ್ರುತಿಯಾಗಿ ಅದ್ಭುತ ಫಲಿತಾಂಶ ದಾಖಲಿಸಿದ್ದಾರೆ. ಇಲ್ಲಿನ ವಿದ್ಯಾರ್ಥಿನಿ ಅಮೂಲ್ಯ ಸಿ. ಶೆಟ್ಟಿ ಎಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 209ನೇ ರಾಂಕ್ ಗಳಿಸಿದ್ದಾರೆ. ಅಲ್ಲದೇ ಎನ್, ಶ್ರೇಯಸ್ (ಎಂಜಿನಿಯರಿಂಗ್ 1242, ಬಿಎಸ್ಸಿ ಅಗ್ರಿಕಲ್ಟರ್486, ಅನುಷ್ ನಾಯಕ್ (ಎಂಜಿನಿಯರಿಂಗ್ 1795, ಬಿಎಸ್ಸಿ ಅಗ್ರಿ 1054), […]
ಉಡುಪಿ: ಬೈಕ್ಗೆ ನಾಯಿ ಕಟ್ಟಿ ಎಳೆದೊಯ್ಯುತ್ತಿದ್ದ ವ್ಯಕ್ತಿ ವಿರುದ್ಧ ಸುಮೋಟೋ ಪ್ರಕರಣ ದಾಖಲು

ಬೈಂದೂರು: ಸಾಕು ನಾಯಿಯೊಂದನ್ನು ಬೈಕಿಗೆ ಸರಪಳಿಯಿಂದ ಕಟ್ಟಿ ಎಳೆದೊಯ್ಯುತ್ತಿದ್ದ ಆರೋಪಿಯ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ ಯಡ್ತರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರು – ಕುಂದಾಪುರ ಏಕಮುಖ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ರಾವುತನಕಟ್ಟೆಯಿಂದ ನಾಕಟ್ಟೆ ಸೇತುವೆಯವರೆಗೆ ಪಡುವರಿ ಗ್ರಾಮದ ನಿವಾಸಿಯೊಬ್ಬ ತನ್ನ ಮನೆಯ ಸಾಕು ನಾಯಿಯೊಂದನ್ನು ಆತನ ಬೈಕಿಗೆ ಸರಪಳಿಯಿಂದ ಕಟ್ಟಿ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋ ಮೇ 25ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು ಈ ವಿಡಿಯೋವನ್ನು ಪೊಲೀಸರು ಗಮನಿಸಿದ್ದು, […]
ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅನಿತಾ ಡಿಸೋಜ ನೇಮಕ.

ಕಾರ್ಕಳ: ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಅಲ್ಕಾ ಲಾಂಬಾ ಅವರ ಅನುಮೋದನೆಯ ಮೇರೆಗೆ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅನಿತಾ ಡಿಸೋಜ ಬೆಳ್ಮಣ್ ಅವರನ್ನು ನೇಮಕ ಮಾಡಲಾಗಿದೆ. ಅನಿತಾ ಡಿಸೋಜ ಬೆಳ್ಮಣ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ರಾಗಿದ್ದು, ಗ್ರಾಪಂ ಸದಸ್ಯರಾಗಿ, ಕಾರ್ಕಳ ಬ್ಲಾಕ್ ಮಹಿಳಾ ಅಧ್ಯಕ್ಷರಾಗಿ ಸೇವೆ […]
ಶಾಸಕರ ಅಮಾನತು ಸ್ಪೀಕರ್ ಆದೇಶವೇ ಅಸಾಂವಿಧಾನಿಕ : ಯಶ್ ಪಾಲ್ ಸುವರ್ಣ

ಉಡುಪಿ: ಕಳೆದ ಅಧಿವೇಶನ ಅವಧಿಯಲ್ಲಿ ಸ್ಪೀಕರ್ 18 ಮಂದಿ ಶಾಸಕರ ಅಮಾನತು ಆದೇಶವೇ ಅಸಾಂವಿಧಾನಿಕ ನಡೆಯಾಗಿದ್ದು, ಇದೀಗ ಸ್ಪೀಕರ್ ರವರು ತಮ್ಮ ಆದೇಶವನ್ನು ಹಿಂಪಡೆಯುವ ಮೂಲಕ ಶಾಸಕರಾಗಿ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಅವಕಾಶ ನೀಡಿದಂತಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಸರಕಾರಿ ಕಾಮಗಾರಿಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಹಾಗೂ ಕಾಂಗ್ರೆಸ್ ಸಚಿವರು ಶಾಸಕರ ಹನಿಟ್ರ್ಯಾಪ್ ವಿಚಾರದ ಬಗ್ಗೆ ವಿಪಕ್ಷದ ಶಾಸಕರಾಗಿ ಸದನದಲ್ಲಿ ಆಡಳಿತರೂಡ ಸರಕಾರವನ್ನು ವಿರೋಧಿಸುವುದು ನಮ್ಮ […]