ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ […]
ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ: “ಐಕ್ಯಂ” 2k25 ಕಾಲೇಜಿನ ವಾರ್ಷಿಕೋತ್ಸವ.

ಬ್ರಹ್ಮಾವರ: ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ “ಐಕ್ಯಂ” 2025 ಅದ್ದೂರಿಯಿಂದ ನಡೆಯಿತು. ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಸೀರೆಯ ಮೇಲೆ ಚಿತ್ರಗಳ ಚಿತ್ತಾರ, ಎಂಬ್ರಾಡರಿ ಪ್ರದರ್ಶನ ಮತ್ತು ರ್ಯಾಂಪ್ ವಾಕ್ ನಡೆಯಿತು. ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮತ್ತು ಅನೇಕ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಅತಿಥಿಗಳಾಗಿ ಆಗಮಿಸಿದ ಡಾ. ದಯಾನಂದ ನಾಯಕ್ ನಿವೃತ್ತ ರಾಜ್ಯಶಾಸ್ತ್ರ ಉಪನ್ಯಾಸಕರು ಮಂಗಳೂರು ವಿಶ್ವವಿದ್ಯಾಲಯ […]
ಕೆ.ಸಿ.ಇ.ಟಿ. ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4 ನೇ ರ್ಯಾಂಕ್

ಕಾರ್ಕಳ : ಎ. 15, 16, 17 ರಂದು ನಡೆದ ಕೆ.ಸಿ.ಇ.ಟಿ. ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ್ಯಾಂಕ್ನೊಳಗೆ 14 ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ಸುಮಂತ್ ಗೌಡ ಎಸ್. ದಾನಪ್ಪಗೌಡರ್ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್, ಬಿ.ಎನ್.ವೈ. ಎಸ್. ವಿಭಾಗದಲ್ಲಿ 9ನೇ […]