ಉಡುಪಿ: ಹಿಂದೂ ಕಾರ್ಯಕರ್ತರನ್ನು ದಮನಿಸಲು ಹೊರಟ ಕಾಂಗ್ರೆಸ್ ಸರಕಾರ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಇಲಾಖೆಯ ಪೂರ್ಣ ವೈಫಲ್ಯದಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದೇ ಹತಾಶಗೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಸುಳ್ಳು ಕೇಸ್ ದಾಖಲಿಸಿ ದಮನಿಸಲು ಹೊರಟಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ಮುಖಂಡರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ರವರ ಮೇಲೆ ಎಫ್ ಐ ಆರ್ ದಾಖಲಿಸಿ, ಅರುಣ್ ಕುಮಾರ್ ಪುತ್ತಿಲ ರನ್ನು ಗಡೀಪಾರು ಮಾಡಲು ನೋಟಿಸ್ ಜಾರಿ ಮಾಡಿದ್ದು, ಹಿಂದೂ ಕಾರ್ಯಕರ್ತರ ಮನೆಗೆ […]

ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್: ಹಿಂದೂ ಜಾಗರಣ ವೇದಿಕೆಯ ಮುಖಂಡನ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ವೈರತ್ವ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವ ಪೋಸ್ಟ್ ಹಾಕಿದ ಹಿಂದೂ ಜಾಗರಣ ವೇದಿಕೆಯ ಮುಖಂಡನನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜೆಕಾರು ಮರ್ಣೆ ಗ್ರಾಮದ ನಿವಾಸಿ ರತ್ನಾಕರ ಅಮೀನ್ ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಉಡುಪಿಯ ಸುವಿದ್ಯಾ ಅಕಾಡೆಮಿಯಲ್ಲಿ ಡೈರೆಕ್ಟ್ ದ್ವಿತೀಯ ಪಿಯುಸಿ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಆರಂಭ

ಉಡುಪಿ: ಉಡುಪಿ ರಥ ಬೀದಿಯಲ್ಲಿರುವ ಶ್ರೀ ಪೇಜಾವರ ಮಠದ ಸನಿಹದಲ್ಲಿರುವ ಸುವಿಧ್ಯಾ ಅಕಾಡೆಮಿಯಲ್ಲಿ ಡೈರೆಕ್ಟ್ ದ್ವಿತೀಯ ಪಿಯುಸಿ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ನೇರವಾಗಿ ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ವಾಣಿಜ್ಯ ವಿಭಾಗಕ್ಕೆ ಪ್ರವೇಶ ಪಡೆದು ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬಹುದು. ಇಲ್ಲಿ ಪ್ರವೇಶಾತಿ ಪಡೆದವರಿಗೆ ರೆಗ್ಯುಲರ್ ತರಗತಿಗಳಿದ್ದು ಉತ್ತಮ ಬೋಧಕ ವರ್ಗದವರಿಂದ ಫಲಿತಾಂಶ ಆಧಾರಿತ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಇರುತ್ತದೆ. ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ICSF, CBSE ಮತ್ತು State […]

ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ದಶಮಾನೋತ್ಸವ ಸಂಭ್ರಮ.

ಮಂಗಳೂರು: ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಸ್ಥಾಪಿಸಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ರಾಷ್ಟ್ರೀಯ ಕಲಾ ಸಮ್ಮೇಳನ ಭಾನುವಾರ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ವಿವಿಧ ದಾನಿಗಳ ಉಪಸ್ಥಿತಿಯಲ್ಲಿ ಫೌಂಡೇಶನ್‌ಗೆ ದೊಡ್ಡಮೊತ್ತವನ್ನು ನೀಡಿ ಸಹಕರಿಸಿದ ಐಕಳ ಹರೀಶ್ ಶೆಟ್ಟಿ ಅವರನ್ನು ಪತ್ನಿ ಚಂದ್ರಿಕಾ ಶೆಟ್ಟಿ ಸಮೇತ ‘ಯಕ್ಷಧ್ರುವ ಮಹಾಪೋಷಕ ‘ ಪ್ರಶಸ್ತಿ ನೀಡಿ […]

‘ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಕನ್ನಡ ಸಿನಿಮಾ ಜೂನ್ ತಿಂಗಳ‌ಲ್ಲಿ ರಾಜ್ಯಾದ್ಯಂತ ಬಿಡುಗಡೆ

ಉಡುಪಿ: ಮಕ್ಕಳಲ್ಲಿ ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ವಿ.ಪಿ. ಡೆಸಾ ಮಣಿಪಾಲ್ ಅವರು‌ ನಿರ್ದೇಶಿಸಿ ನಿರ್ಮಿಸಿರುವ “ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಎಂಬ ಕನ್ನಡ ಸಿನಿಮಾ ಜೂನ್ ತಿಂಗಳ‌ಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ, ನಿರ್ಮಾಪಕ ವಿ.ಪಿ. ಡೆಸಾ ಮಣಿಪಾಲ್ ಅವರು, ಈ ಚಿತ್ರವನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಿಲ್ಲ. ಅದರ ಬದಲು ಎಲ್ ಇಡಿ ಪರದೆ ಮೂಲಕ‌ ಸಭಾಂಗಣದಲ್ಲಿ ಸಿನಿಮಾ ತೋರಿಸಲಾಗುತ್ತದೆ.‌ ಪ್ರತಿ […]