ಕುಂದಾಪುರ: ಬಸ್ ನಿರ್ವಾಹಕನ ಕೊಲೆಗೆ ಯತ್ನ: ಓರ್ವನ ಬಂಧನ

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆಲೂರು ಗ್ರಾಮದ ಪ್ರದೀಪ್ ಪೂಜಾರಿ(28) ಬಂಧಿತ ಆರೋಪಿ. ಜೂ. 2ರಂದು ಈತ ಹಾಗೂ ಇತರ ಐದು ಮಂದಿ ಆಲೂರು -ಕುಂದಾಪುರ ಮಾರ್ಗದಲ್ಲಿ ಸಂಚರಿಸುವ ಜಯದುರ್ಗಾ ಬಸ್ಗೆ ಆಲೂರು ಗ್ರಾಮದ ಹೊಯಿಗೆಹರ ಬಸ್ ನಿಲ್ದಾಣದಲ್ಲಿ ಹತ್ತಿದ್ದಾರೆ. ಬಳಿಕ ನಿರ್ವಾಹಕ ಗಣೇಶ್ ಜೊತೆ ಜಗಳವಾಡಿ, ಅವರ ಶರ್ಟ್ ಕಾಲರ್ ಪಟ್ಟಿಯನ್ನು ಹಿಡಿದು, ಕೈಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಗಣೇಶ್ ಅವರ […]
ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ: ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಆರ್.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಾವು, ನೋವುಗಳಾಗಿರುವ ಸುದ್ದಿ ತಿಳಿದು, ಮನಸ್ಸಿಗೆ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು […]
ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ 19 ವಿದ್ಯಾರ್ಥಿಗಳಿಗೆ SAGES ನ ವಿಶೇಷ ವಿದ್ಯಾರ್ಥಿ ವೇತನದೊಂದಿಗೆ ಮಣಿಪಾಲದ ಪ್ರತಿಷ್ಠಿತ ಮಾಹೆ ಸಂಸ್ಥೆಯಲ್ಲಿ ಉನ್ನತ ವ್ಯಾಸಂಗಕ್ಕೆ ಸುವರ್ಣಾವಕಾಶ

ಕಾರ್ಕಳ: ದೇಶದ ಪ್ರತಿಷ್ಠಿತ ನಂಬರ್ 1 ಖಾಸಗಿ ವಿಶ್ವವಿದ್ಯಾಲಯದ ಸ್ಥಾನ ಪಡೆದುಕೊಂಡಿರುವ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್( ಮಾಹೆ) ಇದರ ಪ್ರತಿಷ್ಠಿತ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಹಾಗೂ ವಿವಿಧ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದ MET ಪರೀಕ್ಷೆಯಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ 19 ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಸಿದ್ದಾರ್ಥ ಕಾಮತ್ ಅಲೈಡ್ ಹೆಲ್ತ್ ಸೈನ್ಸ್ ವಿಭಾಗದಲ್ಲಿ 3ನೇ ಮತ್ತು ಬಿ. ಟೆಕ್ ವಿಭಾಗದಲ್ಲಿ 65ನೇ ರ್ಯಾಂಕ್, ಅಮೂಲ್ಯ […]
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ನಾಲ್ವರು ಆರ್ ಸಿಬಿ ಅಭಿಮಾನಿಗಳು ಮೃತ್ಯು, ಆರು ಮಂದಿಯ ಸ್ಥಿತಿ ಗಂಭೀರ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆರ್ ಸಿಬಿ ತಂಡ ಸಂಭ್ರಮಾಚರಣೆ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್ ಸಿಬಿ ಸಂಭ್ರಮಾಚರಣೆ ಕಣ್ತುಂಬಿಕೊಳ್ಳುವ ಸಲುವಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಜನಸಾಗರವೇ ಹರಿದುಬಂದಿತ್ತು. ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಈಗಾಗಲೇ ಓರ್ವ ಯುವತಿ ಸೇರಿ ನಾಲ್ಕು […]
ಉಡುಪಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಫುಟ್ ಬಾತ್ ಮೇಲೇರಿ ನಿಂತ ಕಾರು; ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಚಾಲಕ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಫುಟ್ ಬಾತ್ ಮೇಲೇರಿ ನಿಂತ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಎಚ್ ಎಂಟಿ ಗ್ಯಾರೇಜ್ ಬಳಿ ಇಂದು ಸಂಭವಿಸಿದೆ. ಕರಾವಳಿ ಬೈಪಾಸ್ ನಿಂತ ಉಡುಪಿ ಸಿಟಿ ಕಡೆಗೆ ಬರುತ್ತಿದ್ದ ಕಿಯಾ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ನಾಲ್ವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಉಡುಪಿ ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ […]