ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ: 12 ಮಂದಿಯ‌ ಬಂಧನ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರ ಬೇಟೆ ಮುಂದುವರಿದಿದ್ದು, ನೆನ್ನೆ ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿನ ಮಟ್ಕಾ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ಪ್ರಕರಣದಲ್ಲಿ ಬಂಧಿತನಾದ ಮಟ್ಕಾ ಬುಕ್ಕಿ ನೀಡಿದ ಮಾಹಿತಿಯ ಆಧಾರದಲ್ಲಿ ಉಡುಪಿಯಲ್ಲಿ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ. ಮಲ್ಪೆ ಪೊಲೀಸ್‌ […]

ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಮಟ್ಟಹಾಕಲು ಪ್ರಯತ್ನಿಸುತ್ತಿದೆ: ಸಂಸದ ಕೋಟ ಆರೋಪ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಿಂದುತ್ವಕ್ಕಾಗಿ ಕೆಲಸ ಮಾಡಿದವರನ್ನು ಗಡಿಪಾರು ಮಾಡುವ ಹಾಗೂ ಎಫ್‌ಐಆರ್ ದಾಖಲಿಸುವ ಪ್ರಯತ್ನವನ್ನು ಮಾಡುತ್ತಿದೆ. ಸಿದ್ಧರಾಮಯ್ಯ ಸರಕಾರದ ನಿರ್ದೇಶನದ ಮೇರೆಗೆ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಭಾವನೆ ವ್ಯಕ್ತಪಡಿಸಿದ, ಕಾರ್ಯಕ್ರಮಗಳಲ್ಲಿ ಭಾಷಣ ಮಾಡಿದ ಹಿಂದೂ ಸಂಘಟನೆಗಳ ಪ್ರಮುಖರಿಗೆ ನೋಟೀಸ್ ನೀಡುವ ಮೂಲಕ […]

ಉಡುಪಿ: ನೂತನ ನ್ಯಾಯಾಧೀಶರಿಗೆ ಸ್ವಾಗತ ಕಾರ್ಯಕ್ರಮ

ಉಡುಪಿ: ಉಡುಪಿ ವಕೀಲರ ಸಂಘದ ವತಿಯಿಂದ ಉಡುಪಿ ನ್ಯಾಯಾಲಯಗಳಿಗೆ ವರ್ಗಾವಣೆಗೊಂಡು ಆಗಮಿಸಿರುವ ನೂತನ ನ್ಯಾಯಾಧೀಶರಿಗೆ ಸ್ವಾಗತ ಕಾರ್ಯಕ್ರಮವನ್ನು ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ನೂತನ ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಕೆ.ಎಸ್ ಜ್ಯೋತಿಶ್ರೀ, ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಗಗನ್ ಎಂ.ಆರ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ನಾಗೇಶ್ ಎಂ.ಎ. ಅವರನ್ನು ಅಭಿನಂದಿಸಲಾಯಿತು. ಬಳಿಕ ಮಾತನಾಡಿದ ನ್ಯಾಯಾಧೀಶೆ ಜ್ಯೋತಿಶ್ರೀ, ಉಡುಪಿ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದಲ್ಲಿ ಕೇವಲ 240 ಪ್ರಕರಣಗಳಿವೆ. ಇತರ […]

ಶ್ರೀ ಸಾಯಿ ಈಶ್ವರ್ ಗುರೂಜಿಗಳಿಂದ ನೂರೆಂಟು ಮಠ, ಮಂದಿರಗಳಿಗೆ ಭೇಟಿ; ಮೂಡುಬಿದ್ರೆಯ ಜೈನಮಠದಲ್ಲಿ ಯಾತ್ರೆಗೆ ಚಾಲನೆ

ಕಟಪಾಡಿ: ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ ಎಂಬ ಕರ‍್ಯಕ್ರಮವನ್ನು ಇಂದು ಜಗದ್ಗುರು ಡಾ. ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಶ್ರೀ ದಿಗಂಬರ ಜೈನಮಠ ಮೂಡುಬಿದಿರೆಯಲ್ಲಿ ಪ್ರಥಮ ದಿನದ ನಡೆಗೆ ಚಾಲನೆ ನೀಡಿ 108 ದಿನಗಳ ಯಾತ್ರೆ ಯಶಸ್ವಿಯಾಗುವಂತೆ ಪ್ರಾರ್ಥನೆ ಮಾಡಿದರು.

ಕುಂದಾಪುರ: ಗ್ರಾಮದೊಳಗೆ ನುಗ್ಗಿದ ಒಂಟಿ ಸಲಗ: ಬೆಚ್ಚಿಬಿದ್ದ ಗ್ರಾಮಸ್ಥರು

ಉಡುಪಿ: ಕುಂದಾಪುರ ತಾಲೂಕಿನ ಹೊಸಂಗಡಿಯ ಸಿದ್ದಾಪುರ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷಗೊಂಡಿದೆ. ಗ್ರಾಮದೊಳಗೆ ನುಗ್ಗಿದ ಒಂಟಿ ಸಲಗವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮನೆ ಸಮೀಪವೇ ಕಾಡಾನೆ ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮುಂಜಾಗ್ರತಾ ಕ್ರಮವಾಗಿ ಸಿದ್ದಾಪುರ ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಒತ್ತಾಯ ಮಾಡಿದ್ದಾರೆ. ನಿನ್ನೆ ಬಾಳೆಬರೆ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷವಾಗಿತ್ತು.