ಉಡುಪಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯಲ್ಲಿ ಮೆಕ್ಯಾನಿಕಲ್ ಕ್ಯಾಡ್ ಇಂಜಿನಿಯರ್, ಮೆಕ್ಯಾನಿಕಲ್ ಕ್ಯಾಡ್ ಬೋಧನಾ ವಿಭಾಗದಲ್ಲಿ ಹುದ್ದೆಗಳು ಖಾಲಿ ಇದ್ದು ನೇಮಕಾತಿ ನಡೆಯಲಿದೆ. ಹುದ್ದೆಗಳು: Software Skills: Autocad, Catia , Solidworks ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected] 📞8147183603

ಉಡುಪಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ – ದಂಪತಿ ಬಂಧನ

ಉಡುಪಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ದಂಪತಿಯನ್ನು ಉಡುಪಿ ಸೆನ್ ಪೊಲೀಸರು ಜೂ.3ರಂದು ಉಡುಪಿ ಪಿಪಿಸಿ ಕಾಲೇಜು ಸಮೀಪದ ಮನೆಯೊಂದರಿಂದ ಬಂಧಿಸಿರುವ ಬಗ್ಗೆ ವರದಿಯಾಗಿದೆ. ಅನಂತ ಪಿ. ಹಾಗೂ ಆತನ ಪತ್ನಿ ವಾಣಿಶ್ರೀ ಬಂಧಿತ ಆರೋಪಿಗಳು. ಇವರಿಂದ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರು ಉಡುಪಿ ಪಿಪಿಸಿ ಕಾಲೇಜು ಬಳಿಯ ಬಾಡಿಗೆ ಮನೆಯೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ವೈಬ್‌ಸೈಟ್ ಮೂಲಕ ಐಪಿಎಲ್ ಕ್ರಿಕೆಟ್‌ನ ಫೈನಲ್ ಪಂದ್ಯಾಟಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ […]

ಮೃತದೇಹ ಹೊತ್ತು ಕಣ್ಣೀರಿಟ್ಟ ಪೊಲೀಸ್ ಸಿಬ್ಬಂದಿಗಳ ತಲೆದಂಡ ಎಷ್ಟು ಸರಿ..??

ಉಡುಪಿ: ಐಪಿಎಲ್ ಟ್ರೋಫಿ ಗೆದ್ದ RCB ತಂಡದ ಆಟಗಾರರು ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಕೈಗೊಂಡ ಸಂದರ್ಭದಲ್ಲಿ 11 ಜನ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿರುವುದು ವಿಪರ್ಯಾಸ. ಫ್ರ್ಯಾಂಚೈಸಿ ಒಂದರ ಗೆಲುವನ್ನು ತಮ್ಮ ಗೆಲುವೆಂದು ಬಿಂಬಿಸಲು ಹೊರಟ ರಾಜ್ಯ ಸರ್ಕಾರ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವುದಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಣೆ ಮಾಡಿದ್ದರು. ಆದರೆ ಈಗ ಅದೇ ಪೊಲೀಸ್ ಸಿಬ್ಬಂದಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿರುವುದು ಎಷ್ಟು ಸರಿ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ. […]

ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ.

ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು, ಜೂನ್ 5 ರಂದು ಆಚರಿಸಲಾಯಿತು . ಈ ಕಾರ್ಯಕ್ರಮದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಯಾದ ಡಾ.ವಿದ್ಯಾ ಅಶೋಕ್, ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನಕರ್ ಶೆಟ್ಟಿ , ಕಾಲೇಜಿನ ಉಪನ್ಯಾಸಕರಾದ ಅಕ್ಷತಾ ಹಾಗೂ ಚೇತನ ಉಪಸ್ಥಿತರಿದ್ದರು. ಬಿ ಎಸ್ ಸಿ ನರ್ಸಿಂಗ್ 5ನೇ ಸೆಮಿಸ್ಟರ್ ವಿದ್ಯಾರ್ಥಿನಿಯಾದ ಕುಮಾರಿ ಭಾರತಿ ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. […]

ವೈಫಲ್ಯ ಮರೆಮಾಚಲು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ ರಾಜ್ಯ ಸರಕಾರ : ಯಶ್ ಪಾಲ್ ಸುವರ್ಣ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಅಮಾಯಕರ ಸಾವಿನ ಬಗ್ಗೆ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಬೆದರಿ ಸರ್ಕಾರದ ವೈಫಲ್ಯ ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿರಿಯ ಪೋಲಿಸ್ ಅಧಿಕಾರಿಗಳನ್ನು ಅಮಾನತು ಮಾಡಿ ಬಲಿಪಶು ಮಾಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖುದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ರವರೇ ಈ ಅನಾಹುತಕ್ಕೆ ಪೊಲೀಸರು ಹೊಣೆಯಲ್ಲ ಎಂದು ಹೇಳಿಕೆ ನೀಡಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪಕ್ಷದ ಹೈಕಮಾಂಡ್ ಒತ್ತಡಕ್ಕೆ ಮಣಿದು […]