ಉಡುಪಿ:ರಂಗ ಶಿಕ್ಷಣ ಡಿಪ್ಲೋಮಾ : ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗಶಾಲೆಯ ಪ್ರಸಕ್ತ ಸಾಲಿನರಂಗಶಿಕ್ಷಣ (ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ್) ಪ್ರವೇಶಾತಿಗೆ ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟುವಿದ್ಯಾರ್ಹತೆ ಹೊಂದಿರುವ, ರಂಗಭೂಮಿಯಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://www.theatreschoolsanehalli.org ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ, ಶ್ರವ್ಯ ಪರಿಕರಗಳ ಅನುಕೂಲತೆ ಇದ್ದು, ರಂಗಶಾಲೆಯ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ […]
ಉಡುಪಿ:ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2022-23 ನೇ ಸಾಲಿನ ಎಸ್.ಎಫ್.ಸಿ. ಮುಕ್ತನಿಧಿಯ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಸಾಧನ ಸಲಕರಣೆಗಳನ್ನು ಪಡೆಯಲು ದೈಹಿಕ ವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್‌ರವರಿಂದ ಪಡೆದ ಪ್ರಮಾಣ ಪತ್ರ, ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ ಹಾಗೂಆಧಾರ್ ಕಾರ್ಡ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ:ವಿಕಲಚೇತನರ ಕಲ್ಯಾಣ ಕಾರ್ಯಕ್ರಮ : ಅರ್ಜಿ ಆಹ್ವಾನ

ಉಡುಪಿ: ನಗರಸಭಾ ನಿಧಿಯ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮ ಯೋಜನೆಯಡಿ ರಾಜ್ಯ ಹಾಗೂರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಸತಿ, ಶಿಕ್ಷಣ, ಸರ್ಕಾರಿ ಕಛೇರಿಗಳು, ಸಮುದಾಯ ಭವನ ಕಟ್ಟಡಗಳಿಗೆ ಜಾರುಹಾದಿ ಹಾಗೂ ವಿಕಲಚೇತನ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಲು ಇಚ್ಚಿಸುವ ಆಸಕ್ತರು/ಸಂಸ್ಥೆಗಳು ನಿಗದಿತ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣಪತ್ರ, ಪ್ರಸಕ್ತ ಸಾಲಿನ ತೆರಿಗೆ ಪಾವತಿ ಚಲನ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಪಡಿತರ […]
ಉಡುಪಿ:ಶೌಚಾಲಯ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2022-23 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಶೌಚಾಲಯ ನಿರ್ಮಿಸಲು ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೂರಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ:ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಹಾಗೂ ನಮ್ಮ ಮನೆ ನಮ್ಮ ಮರಅಭಿಯಾನ ತಂಡ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಗುರುವಾರ ಅಲೆವೂರಿನ ಪ್ರಗತಿನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆವರಣದಲ್ಲಿ ಸಿಂಧೂರ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ತಾಲೂಕು ಕ.ಸಾ.ಪ ದ […]