ಮಣಿಪಾಲ: ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ, ಘೋಷ ವಾಕ್ಯ ರಚನಾ ಸ್ಪರ್ಧೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ರಕ್ತ ಕೇಂದ್ರವು ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ ಏರ್ಪಡಿಸಿದೆ. ಸ್ಪರ್ಧೆಯೂ ಎಲ್ಲರಿಗೂ ಮುಕ್ತವಾಗಿದ್ದು , ಸಾರ್ವಜನಿಕರು, ಮಕ್ಕಳು ವಯಸ್ಸಿನ ಭೇದವಿಲ್ಲದೆ ಕಳುಹಿಸಬಹುದು. ವಿಷಯ: ರಕ್ತ ನೀಡಿ, ಭರವಸೆ ನೀಡಿ: ಒಟ್ಟಾಗಿ ನಾವು ಜೀವ ಉಳಿಸೋಣ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಕಳುಹಿಸಬಹುದು. ಎರಡೂ ಭಾಷೆಯ ವಿಜೇತರಿಗೆ ಪ್ರತ್ಯೇಕ ಬಹುಮಾನವಿದೆ. ಘೋಷ ವಾಕ್ಯ ಕಳುಹಿಸಲು ಕೊನೆಯ ದಿನಾಂಕ 10ನೇ ಜೂನ್ 2025. ವಿಜೇತರು […]

ಉಡುಪಿ:ರಸ್ತೆ ಅಗಲೀಕರಣ ಕಾಮಗಾರಿ : ರಸ್ತೆ ಸಂಚಾರ ನಿಷೇಧ ಅವಧಿ ವಿಸ್ತರಣೆ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಬೆಟ್ಟು-ಪಟ್ಲ ರಸ್ತೆಯ ಬೈಲುಗದ್ದೆ ಬಳಿಯ ರಸ್ತೆ ಮಾರ್ಗದಅಗಲೀಕರಣ ಕಾಮಗಾರಿ ಈಗಾಗಲೇ ಕೈಗೊಂಡಿದ್ದು, ಜಿಲ್ಲೆಯಲ್ಲಿ ಅಕಾಲಿಕ ಮಳೆ ಪ್ರಾರಂಭವಾಗಿರುವುದರಿಂದ ಕಾಮಗಾರಿಯುಅಪೂರ್ಣವಾಗಿರುವುದರಿಂದ, ಸದ್ರಿ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ, ಆದೇಶಿಸಿದ್ದ ಅಧಿಸೂಚನೆಯನ್ನು ಸಾರ್ವಜನಿಕ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಸ್ತೆ ಅಗಲೀಕರಣ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221(ಎ)(2) ಮತ್ತು (5) […]

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್ ಹಬ್ಬ’ ಆಚರಣೆ

ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ […]

ಉಡುಪಿ:ವಿದ್ಯಾರ್ಥಿವೇತನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ವತಿಯಿಂದ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ:ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ಅಧಿಕಾರಿಗಳು ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ಕೆಲಸ ಕಾರ್ಯ ನಿಯಮಿತ ಸರಕಾರಿ ಕಚೇರಿಗಳಿಗೆ ಭೇಟಿ ಮಾಡಿದಸಂದರ್ಭದಲ್ಲಿ ಅವರೊಂದಿಗೆ ಸೌಹಾರ್ದತೆಯೊಂದಿಗೆ ಗೌರವಯುತವಾಗಿ ನಡೆದುಕೊಂಡು, ನಿಯಮಾನುಸಾರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ತಿಳಿಸಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಸಂವೇದನೆ ಮೂಡಿಸಲು ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡುತ್ತಿದ್ದರು. ಕಾನೂನಿನ ಮುಂದೆ ಎಲ್ಲರೂ ಸಮಾನರು. ಸಾಂವಿಧಾನಿಕವಾಗಿ ಯಾವುದೇ ಜಾತಿ, ಜನಾಂಗ, ಲಿಂಗ ಆಧಾರದ ಮೇಲೆ ಯಾವುದೇ […]