ಯಕ್ಷಗಾನಕ್ಕೆ ಸಂಘಸಂಸ್ಥೆಗಳ ಪ್ರೋತ್ಸಾಹ ಅಗತ್ಯ: ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಇಂದು ಯಕ್ಷಗಾನಕ್ಕೆ ಅನೇಕ ಸಂಘಸಂಸ್ಥೆಗಳು ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಇದು ಅಕಾಡೆಮಿಯ ಕೆಲಸವನ್ನು ಬಹಳಷ್ಟು ಹಗರುವಾಗಿಸಿದೆ. ಮಕ್ಕಳ ಯಕ್ಷಗಾನ, ಮಹಿಳಾ ಯಕ್ಷಗಾನ ಸಂಸ್ಥೆಗಳು ಇದೀಗ ಹೆಚ್ಚಾಗಿ ಆರಂಭಗೊಳ್ಳುತ್ತಿರುವುದು ಯಕ್ಷಗಾನ ಕಲೆಯ ಭವಿಷ್ಯ ಭದ್ರವಾಗಿದೆ ಎಂಬುದನ್ನು ಸೂಚಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಕಾರ್ಕಳ ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ […]
ಉಡುಪಿ:ರಸ್ತೆ ಕಾಂಕ್ರೀಟೀಕರಣ ಕಾಮಗಾರಿ : ವಾಹನ ಸಂಚಾರ ನಿಷೇಧ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಿಷನ್ ಕಂಪೌಂಡ್ ಜಂಕ್ಷನ್ನಿಂದ ಕೊರಂಗ್ರಪಾಡಿ ಜಂಕ್ಷನ್ ರಸ್ತೆ ಕಾಂಕ್ರೀಟೀಕರಣ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನೆಲೆ, ಜುಲೈ 15 ರ ವರೆಗೆ ಸದರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
MSDC ಓರೇನ್ ಇಂಟರ್ನ್ಯಾಷನಲ್ ನಲ್ಲಿ “ಡಿಪ್ಲೋಮಾ ಇನ್ ಸ್ಪಾ ಥೆರಪಿ” ಅಲ್ಪಾವಧಿ ಕೋರ್ಸ್’ಗೆ ಪ್ರವೇಶಾತಿ ಆರಂಭ.

ಮಣಿಪಾಲ: ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿ.ಎಂ.ಎ ಪೈ ಫೌಂಡೇಶನ್ನ ಒಂದು ಘಟಕ), ಓರೇನ್ ಇಂಟರ್ನ್ಯಾಷನಲ್ ನಲ್ಲಿ “ಡಿಪ್ಲೋಮಾ ಇನ್ ಸ್ಪಾ ಥೆರಪಿ”(DIPLOMA IN SPA THERAPY) ಅಲ್ಪಾವಧಿ ಕೋರ್ಸ್ ಗೆ ಪ್ರವೇಶಾತಿ ಆರಂಭಗೊಂಡಿದೆ. ಇಲ್ಲಿ ನೀವು ಯಶಸ್ವಿ ವೃತ್ತಿ ಜೀವನವನ್ನು ನಿರ್ಮಿಸಿಕೊಳ್ಳಬಹುದು. ಹಾಗೂ ಎಂಎಸ್ ಡಿಸಿ ಶೇ.100 ರಷ್ಟು ಉದ್ಯೋಗ ಸಹಾಯ ನೀಡಲಿದೆ. ಕೋರ್ಸ್ ಅವಧಿ: 80 ಗಂಟೆಗಳು ಸೀಮಿತ ಸೀಟುಗಳು ಮಾತ್ರ ಲಭ್ಯ ಇವೆ. ಈಗಲೇ ನೋಂದಾಯಿಸಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:+91 8123165068+91 8123163935www.orane.comವಿಳಾಸ: […]
ಉಡುಪಿ:ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ:ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ನಲ್ಲಿ ಖಾಲಿಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಟ್ರಕಿಂಗ್ ವೇಳೆ 11 ಮಂದಿ ಕಾಡಿನಲ್ಲಿ ನಾಪತ್ತೆ; 6 ಗಂಟೆ ಬಳಿಕ ಪತ್ತೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗ ಪ್ರವಾಸಿ ತಾಣದಲ್ಲಿ ಚಾರಣಕ್ಕೆ ಹೊರಟಿದ್ದ 11 ಮಂದಿ ಕಾಡಿನಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೂ ಪರದಾಡಿರುವ ಘಟನೆ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು, 5 ಹುಡುಗಿಯರು ಟ್ರಕ್ಕಿಂಗ್ ಬಂದಿದ್ದು, ಡ್ರೈವರ್ ಸೇರಿ 11 ಜನ ಚಾರಣಕ್ಕೆ ಹೊರಟಿದ್ದರು. ಚಿಕ್ಕಮಗಳೂರಿನ ಬಲ್ಲಾಳರಾಯನ ದುರ್ಗಾದಲ್ಲಿ ಟಿಕೆಟ್ ಬುಕ್ ಮಾಡಿಸಿ ದಾರಿ ತಿಳಿಯದೆ ಮಂಗಳೂರಿನ ಬಂಡಾಜೆ ಮಾರ್ಗವಾಗಿ ಹತ್ತಿದ್ದರು. ಕಾಡಿನಲ್ಲಿ ದಾರಿ ತಪ್ಪಿ ಇಡೀ ಕಾಡು ಸುತ್ತಿ ವಿದ್ಯಾರ್ಥಿಗಳು […]