ಉಡುಪಿ: ನಾಳೆ (ಜೂನ್ 12) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 12ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಪದವಿಪೂರ್ವ ಕಾಲೇಜುಗಳಿಗೆ ರಜೆ […]

ಉಡುಪಿ:ಆಟೋ ರಿಕ್ಷಾಗಳಲ್ಲಿ ನಿಗಧಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋರಿಕ್ಷಾಗಳಲ್ಲಿ ನಿಗಧಿಪಡಿಸಿದ ಸಾಮಥ್ಯಕ್ಕಿಂತಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಎಲ್ಲಾ ಆಟೋರಿಕ್ಷಾ ಚಾಲಕ ಮತ್ತು ಮಾಲಕರು ಕ್ರಮವಹಿಸಬೇಕು. ಖಾಸಗಿ ವಾಹನಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಂದ ಬಾಡಿಗೆ ಪಡೆದು ಬಾಡಿಗೆ ಮಾಡದಂತೆ ಎಲ್ಲಾ ಖಾಸಗೀ ವಾಹನಗಳ ಮಾಲಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಅಂತಹ ವಾಹನಗಳು, ಚಾಲಕರು ಹಾಗೂ ಮಾಲಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

ಮಲ್ಪೆ: ಪಾನಿಪುರಿ ವಿಚಾರದಲ್ಲಿ ಗಲಾಟೆ: ಪರಸ್ಪರ ಹೊಡೆದಾಟ..!

ಉಡುಪಿ: ಹೆಚ್ಚುವರಿ ಪಾನಿಪುರಿ ನೀಡುವ ವಿಚಾರದಲ್ಲಿ ಗಲಾಟೆ ನಡೆದು ಪ್ರವಾಸಿಗರು ಮತ್ತು ಸ್ಥಳೀಯ ಪಾನಿಪೂರಿ ಅಂಗಡಿಯವರು ಪರಸ್ಪರ ಹೊಡೆದಾಡಿಕೊಂಡ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಮಲ್ಪೆ ಬೀಚ್ ಬಳಿಯ ಪಾನಿಪುರಿ ಅಂಗಡಿಯಲ್ಲಿ ಮಂಡ್ಯ ಜಿಲ್ಲೆಯಿಂದ ಬಂದಿದ್ದ ಪ್ರವಾಸಿಗರು ಪಾನಿಪುರಿ ತಿನ್ನಲು ಹೋಗಿದ್ದಾರೆ. ಆಗ ಹೆಚ್ಚುವರಿ ಪಾನಿಪುರಿ ನೀಡುವಂತೆ ಯುವಕರು ಪಾನಿಪುರಿ ಅಂಗಡಿಯವನ ಜೊತೆಗೆ ಕಿರಿಕ್ ಮಾಡಿದ್ದಾರೆ. ಇದೇ ವಿಚಾರವಾಗಿ ಗಲಾಟೆಯಾಗಿ ಬೈದಾಡಿಕೊಂಡು ನಂತರ ಹೊಡೆದಾಟ ಕೂಡಾ ನಡೆದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು […]

ಜೂನ್ 15ರಂದು ಕೃಷ್ಣಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ ಕಾರ್ಯಕ್ರಮ

ಉಡುಪಿ: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಉಚಿತ ತೆಂಕುತಿಟ್ಟು ಯಕ್ಷಗಾನ ತರಗತಿಯು ಶ್ರೀ ಸೋದೆ ಮಠದ ಯತಿಗಳ ಕೃಪಾಶೀರ್ವಾದದಿಂದ ಯಶಸ್ವಿಯಾಗಿ ಎಂಟು ಸಂವತ್ಸರಗಳನ್ನು ಪೂರೈಸಿದೆ. ಇದರ 8ನೇ ವರ್ಷದ ವಾರ್ಷಿಕೋತ್ಸವ ಮತ್ತು ಪಣಂಬೂರು ವೆಂಕಟ್ರಾಯ ಐತಾಳ ಸಂಸ್ಮರಣಾ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ ಕಾರ್ಯಕ್ರಮವು ಜೂನ್ 15 ರಂದು ಆದಿತ್ಯವಾರ ಮಧ್ಯಾಹ್ನ 2.30ಕ್ಕೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮ ಸಂಜೆ 5. 30 ಗಂಟೆಗೆ ಜರುಗಲಿದೆ. ಈ […]

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ರಾಣೆಬೆನ್ನೂರು ನಿವಾಸ ಶಂಭುಲಿಂಗ ಮಡಿವಾಳ (37) ಬಂಧಿತ‌ ವ್ಯಕ್ತಿ. ಬುಧವಾರ ಹಳೆಯ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪದ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು, ಆರೋಪಿ ಶಂಭುಲಿಂಗನನ್ನು ಬಂಧಿಸಿದ್ದಾರೆ. ಈತ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ತನ್ನ ಸ್ವಂತ ಲಾಭಕ್ಕಾಗಿ […]