ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ದೇಶದಾದ್ಯಂತ ಪಕ್ಷ ಸಂಘಟನಾ ಪರ್ವ ನಡೆಯುತ್ತಿದ್ದು ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತ ದಲ್ಲಿ ಉಳಿದಿರುವ 10 ಜಿಲ್ಲೆಗಳ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗಿದೆ. ಅದರಂತೆ ಉಡುಪಿ ಜಿಲ್ಲೆಗೆ ನೂತನ ಅಧ್ಯಕ್ಷ ರಾಗಿ ಕುತ್ಯಾರ್ ನವೀನ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಪರ್ವ 2024-25 ರಾಜ್ಯ ಚುನಾವಣಾಧಿಕಾರಿ ಗಣೇಶ್ ಕಾರ್ಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಬ್ರಿ: ಕುಚ್ಚೂರು ಮಾತ್ಕಲ್ ಕೊರಗ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ 02.05 ಕೋಟಿ ಅನುದಾನ ಮಂಜೂರು: ವಿ.ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ರೂ. 02.05 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರು ತಿಳಿಸಿರುತ್ತಾರೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಜನ ಜಾತಿಯ ಮಹಾ ನ್ಯಾಯ ಅಭಿಯಾನದಡಿ (PM JANMAN) ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶವಾದ ಹೆಬ್ರಿ ತಾಲೂಕಿನ ಕುಚ್ಚೂರು […]
ಗಾಯಕಿ ಮಂಗ್ಲಿ ಬರ್ತ್ ಡೇ ಪಾರ್ಟಿ ಮಾಡ್ತಿದ್ದ ರೆಸಾರ್ಟ್ ಮೇಲೆ ದಾಳಿ; ಡ್ರಗ್ಸ್ ಪತ್ತೆ, ಹಲವು ಮಂದಿ ವಶಕ್ಕೆ.!

ಹೈದರಾಬಾದ್: ಖ್ಯಾತ ಗಾಯಕಿ ಮಂಗ್ಲಿ ಬರ್ತಡೇ ಪಾರ್ಟಿ ವೇಳೆ ಪೊಲೀಸರು ದಾಳಿ ನಡೆಸಿ, ಮಾದಕ ವಸ್ತು ಸೇವಿಸಿದ್ದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎರ್ಲಪಲ್ಲಿರುವ ತ್ರಿಪುರಾ ರೆಸಾರ್ಟ್ನಲ್ಲಿ ಮಂಗ್ಲಿ ಅವರ ಬರ್ತಡೇ ಪಾರ್ಟಿ ನಡೆಯುತ್ತಿತ್ತು. ಈ ವೇಳೆ, ಚೆವೆಲ್ಲಾ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆಯಾಗಿದೆ. ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಡಿಕಲ್ ಟೆಸ್ಟ್ನಲ್ಲಿ ಹಲವರು ಮಾದಕ ವಸ್ತು ಸೇವಿಸಿರೋದು ಪತ್ತೆಯಾಗಿದೆ. ಈ ಸಂಬಂಧ ಚೆವೆಲ್ಲಾ ಪೊಲೀಸ್ ಠಾಣೆಯಲ್ಲಿ […]