ಉಡುಪಿ:ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಇವರ ವತಿಯಿಂದ ಪ್ರಸಕ್ತಸಾಲಿನಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆಗೈದ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ ವೆಬ್‌ಸೈಟ್ https://awards.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ […]
ಉಡುಪಿ:ಲಿಖಿತ ಪರೀಕ್ಷೆ : ಪ್ರತಿಬಂಧಕಾಜ್ಞೆ ಜಾರಿ-ಡಾ. ಕೆ.ವಿದ್ಯಾಕುಮಾರಿ ಆದೇಶ.

ಉಡುಪಿ: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜೂನ್ 15 ರಿಂದ 17 ರ ವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, […]
ಉಡುಪಿ:ಜಿಲ್ಲಾ ವಾಪ್ತಿಯಲ್ಲಿರುವ ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಉಡುಪಿ: ಸಾರ್ವಜನಿಕರ ಹಿತದೃಷ್ಠಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಜಿಲ್ಲೆಯಲ್ಲಿರುವ ಒಟ್ಟು 50 ದ್ವೀಪಗಳಿಗೆ ಸಂಜೆ 6 ಗಂಟೆಯಿಂದ ಬೆಳಗ್ಗೆ6 ಗಂಟೆಯವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದು, ಸದ್ರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 223 ರಂತೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ:ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈ ಜೋಡಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಬಾಲಕಾರ್ಮಿಕ ಪದ್ಧತಿಯು ಸಮಾಜದ ಅನಿಷ್ಠ ಪದ್ಧತಿಯಾಗಿದ್ದು, ಅದನ್ನು ತಳ ಮಟ್ಟದಲ್ಲಿ ನಿರ್ಮೂಲನೆ ಮಾಡಿ, ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದುಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ […]
ಉಡುಪಿಯ ಸುವಿದ್ಯಾ ಅಕಾಡೆಮಿಯಲ್ಲಿ ಡೈರೆಕ್ಟ್ ದ್ವಿತೀಯ ಪಿಯುಸಿ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಆರಂಭ

ಉಡುಪಿ: ಉಡುಪಿ ರಥ ಬೀದಿಯಲ್ಲಿರುವ ಶ್ರೀ ಪೇಜಾವರ ಮಠದ ಸನಿಹದಲ್ಲಿರುವ ಸುವಿಧ್ಯಾ ಅಕಾಡೆಮಿಯಲ್ಲಿ ಡೈರೆಕ್ಟ್ ದ್ವಿತೀಯ ಪಿಯುಸಿ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ನೇರವಾಗಿ ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ವಾಣಿಜ್ಯ ವಿಭಾಗಕ್ಕೆ ಪ್ರವೇಶ ಪಡೆದು ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬಹುದು. ಇಲ್ಲಿ ಪ್ರವೇಶಾತಿ ಪಡೆದವರಿಗೆ ರೆಗ್ಯುಲರ್ ತರಗತಿಗಳಿದ್ದು ಉತ್ತಮ ಬೋಧಕ ವರ್ಗದವರಿಂದ ಫಲಿತಾಂಶ ಆಧಾರಿತ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಇರುತ್ತದೆ. ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ICSF, CBSE ಮತ್ತು State […]