ಉಡುಪಿ: ನಾಳೆ (ಜೂನ್ 16) ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 16ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಭಾರೀ ಮಳೆ ಹಿನ್ನಲೆ: ನಾಳೆ (ಜೂ16) ದ.ಕ ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂ.16ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ನೀಟ್ ಫಲಿತಾಂಶ-2025 ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಪೂರ್ವ ಸಾಧನೆ

ಕುಂದಾಪುರ: ದೇಶದ ಪ್ರತಿಷ್ಠಿತ ವೈದ್ಯಕೀಯವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 525,ಸುಬ್ರಹ್ಮಣ್ಯ ಜಿ.515 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ತೃತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು […]
ಉಡುಪಿ-ಮಂಗಳೂರಿನ ಅತಿದೊಡ್ಡ ಗ್ರೂಪ್ ಆಫ್ ಕಂಪೆನಿಯಲ್ಲಿ ಉದ್ಯೋಗವಕಾಶ!

ಬೈಲೂರು: ಮೈತ್ರಿ ಸೇವಾ ಸಂಘದ ವತಿಯಿಂದ ಸನ್ಮಾನ

ಕಾರ್ಕಳ: ಎಸ್.ಎಸ್.ಎಲ್.ಸಿ ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಗಣಿತ ನಗರ ಜ್ಞಾನ ಸುಧಾ ಕಾಲೇಜಿನ ವಿದ್ಯಾರ್ಥಿನಿ ಕಣಜಾರು ಹಡಂಕೋಳಿಯ ಸ್ವಸ್ತಿ ಕಾಮತ್ ಹಾಗೂ ಫಿಜಿಯೋಥೆರಫಿಯಲ್ಲಿ ದ್ವಿತೀಯ ರ್ಯಾಂಕ್ ಅನ್ನು ಪಡೆದಿರುವ ಮೂಡುಬಿದರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕೌಡೂರಿನ ನಿಶಾ ಶೆಟ್ಟಿ ಇವರಿಗೆ ಜೂ.14ರಂದು ಮೈತ್ರಿ ಸೇವಾ ಸಂಘದ ಸಾಮಾನ್ಯ ಸಭೆಯಲ್ಲಿ ಶಾಲು ಹೊಂದಿಸಿ ಫಲ ಪುಷ್ಪ ಹಾಗೂ ಗೌರವಧನ ನೀಡಿ ಗೌರವಿಸಲಾಯಿತು. ವಿಕ್ರಂ ಹೆಗ್ಡೆಯವರು ಸನ್ಮಾನಿತರ ಬಗ್ಗೆ ಮಾತನಾಡಿದರು. ಈ ಸಂದರ್ಭ […]