ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಪ್ರವೇಶಿಸಬಹುದಾದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಗಮನಾರ್ಹ 25 ವರ್ಷಗಳ ಸೇವೆಯನ್ನು ಗುರುತಿಸುವ ಮೂಲಕ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ ಹೆಮ್ಮೆಯಿಂದ ಘೋಷಿಸಿದೆ. ನೋಂದಣೆ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು, ಈ ಉಪಕ್ರಮದ ಮೂಲವನ್ನು ಪ್ರತಿಬಿಂಬಿಸುತ್ತಾ, ಗ್ರಾಮೀಣ […]

ಉಡುಪಿ:ರಕ್ತದಾನದಿಂದ ಆಪತ್ತಿನಲ್ಲಿರುವವರ ಜೀವ ಉಳಿಸಲು ಸಾಧ್ಯ : ಡಿ.ಹೆಚ್.ಓ ಬಸವರಾಜ್ ಜೆ ಹುಬ್ಬಳ್ಳಿ

ಉಡುಪಿ: ಅಪಘಾತ ಹಾಗೂ ಇನ್ನಿತರ ಕಾಯಿಲೆಗಳಿಂದ ಪ್ರಾಣಾಪಾಯದಲ್ಲಿರುವ ಜೀವ ಉಳಿಸಲು ರಕ್ತದಾನಮಹತ್ತರ ಪಾತ್ರ ವಹಿಸುತ್ತದೆ. ರಕ್ತದಾನ ಮಾಡಲು ಜನರು ಮುಂದೆ ಬರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ ಹುಬ್ಬಳ್ಳಿ ಕರೆ ನೀಡಿದರು. ಅವರು ಮಂಗಳವಾರ ನಗರದ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ […]

ಉಡುಪಿ:ಆರೋಗ್ಯ ಇಲಾಖೆಯ ವಿವಿಧ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಇಲಾಖೆಯ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 23 ರ ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ ಮತ್ತು ಮಂಗಳೂರಿನ ವಿವಿಧ ಖಾಸಗಿ ಕಂಪೆನಿಗಳಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿ ಮತ್ತು ಮಂಗಳೂರಿನ ವಿವಿಧ ಖಾಸಗಿ ಕಂಪೆನಿಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ◾ ಅಕೌಂಟೆಂಟ್ (Female) ◾ ಬ್ರಾಂಚ್ ಮ್ಯಾನೇಜರ್ ◾ ಮೆಡಿಕಲ್ ರೆಪ್ರೆಸೆಂಟೇಟಿವ್ ◾ ಬಿಲ್ಲಿಂಗ್ ಸ್ಟಾಫ್ ◾ಸೂಪರ್ ವೈಸರ್ ◾ಆಫೀಸ್ ಬಾಯ್ ◾ಟೆಕ್ನಿಷಿಯನ್ ಮಾಹಿತಿಗಾಗಿ ಸಂಪರ್ಕಿಸಿ: 7019891796, 7 9 7 5 8 618 46

ಉಡುಪಿ:ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆ, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, […]